• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

I Don’t Believe in Exit Polls : ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ; ನನ್ನ ಪ್ರಕಾರ 141 ಸ್ಥಾನ ಗೆಲ್ಲುತ್ತೇವೆ! : ಡಿ.ಕೆ.ಶಿವಕುಮಾರ್

Any Mind by Any Mind
May 12, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
I Don’t Believe in Exit Polls : ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ; ನನ್ನ ಪ್ರಕಾರ  141 ಸ್ಥಾನ ಗೆಲ್ಲುತ್ತೇವೆ! : ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು : ಮೇ.12: ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ. ನನ್ನ ಪ್ರಕಾರ 141 ಸ್ಥಾನ ಗೆಲ್ಲುತ್ತೇವೆ. ನಮ್ಮ ಸಮೀಕ್ಷೆಯಲ್ಲಿ ಎಕ್ಸಿಟ್ ಪೋಲ್ ಸಮೀಕ್ಷೆಗಿಂತ ಹೆಚ್ಚು ಮಾದರಿಗಳಿಂದ ಸಂಗ್ರಹ ಮಾಡಲಾಗಿದೆ. ಕಾಂಗ್ರೆಸ್ ಪರವಾಗಿ ದೊಡ್ಡ ಅಲೆ ಇದೆ.

ADVERTISEMENT

ಎಕ್ಸಿಟ್ ಪೋಲ್ ಸಮಿಕ್ಷೆಗಿಂತ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯಲಿದೆ ಹೊರತು ಕಡಿಮೆ ಆಗಲೂ ಸಾಧ್ಯವಿಲ್ಲ. ಎಕ್ಸಿಟ್ ಪೋಲ್ ನಲ್ಲಿ ನಮ್ಮ ಪರ ವಿಶ್ವಾಸ ತೋರಿದ್ದು ಅದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ಬರಲಿದೆ ಎಂಬುದು ನಮ್ಮ ನಂಬಿಕೆ. ನಾನು ಸ್ಥಳೀಯವಾಗಿ ಓಡಾಟ ಮಾಡಿದ್ದೇನೆ. ಬಿಜೆಪಿ ಪ್ರತಿ ಕ್ಷೇತ್ರದಲ್ಲಿ ಎಷ್ಟೇ ದುಡ್ಡು ಸುರಿಸಿರಬಹುದು, ಎಷ್ಟೇ ದೊಡ್ಡ ನಾಯಕರು ಬಂದು ಪ್ರಚಾರ ಮಾಡಿರಬಹುದು. ಅವರ ಮತ ಎಂಬುದು ಬುಲೆಟ್ ಗಿಂತ ಶಕ್ತಿಶಾಲಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಹೇಗೆ ಜನ ಬ್ರಿಟೀಷರ ಗುಂಡಿಗೆ ಹೆದರಲಿಲ್ಲವೋ, ಅದೇ ರೀತಿ ಜನ ಡಬಲ್ ಇಂಜಿನ್ ಸರ್ಕಾರ, ದುರಾಡಳಿತ, ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಮಾಡಿಕೊಂಡಿದ್ದರು. ಜನ ತಮ್ಮ ನಿರ್ಧಾರ ಬದಲಿಸುವುದಿಲ್ಲ. ನಾಳೆ ಮಧ್ಯಾಹ್ನ 1 ಗಂಟೆ ವೇಳೆಗೆ ಫಲಿತಾಂಶ ಬರಲಿದೆ.

ಅತಂತ್ರ ವಿಧಾನಸಭೆ ನಿರ್ಮಾಣಾ ಆಗಬಹುದು ಎಂಬ ಕಾರಣಕ್ಕೆ ತೆರೆಮರೆಯಲ್ಲಿ ಪ್ರಯತ್ನ ನಡೆಯುತ್ತಿದ್ದು, ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹೋಗುವ ಮುನ್ನ ನಾನು ಮೈತ್ರಿಗೆ ಸಿದ್ಧ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ‘ಯಾವ ತೆರೆಮರೆ ಪ್ರಯತ್ನವೂ ಇಲ್ಲ. ಇಷ್ಟು ದಿನ ಅವರು ತಮಗೆ ಬಹುಮತ ಬರಲಿದೆ ಎಂದು ಹೇಳುತ್ತಿದ್ದರು. ಅವರು ಯಾರ ಜತೆ ಮೈತ್ರಿ ಮಾಡಿಕೊಳ್ಳಲು ಸಿದ್ಧವೋ ಗೊತ್ತಿಲ್ಲ’ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ಬಹುಮತ ಬಾರದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದರು ಎಂದು ಕೇಳಿದಾಗ, ‘ಕುಮಾರಣ್ಣ ಅವರು ಯಾವ ಲೆಕ್ಕಾಚಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ನಾವಂತೂ ಆರೋಗ್ಯ ಉತ್ತಮವಾಗಿ ಇರುವವರೆಗೂ ನಿವೃತ್ತಿ ಪಡೆಯುವುದಿಲ್ಲ. ದಳದ ಕಾರ್ಯಕರ್ತರು ಸಮಯ ವ್ಯರ್ಥ ಮಾಡದೆ ನಮ್ಮ ಜತೆ ಸೇರಿಕೊಳ್ಳಲಿ ಎಂದು ಹೇಳಿದ್ದೇನೆ. ಇಂದು ಅದನ್ನೆ ಹೇಳುತ್ತೇನೆ’ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಹೊರದೇಶಕ್ಕೆ ಹೋಗಿರುವ ಹಿಂದೆ ಬೇರೆ ಸಾಧ್ಯತೆಗಳೇನಾದರೂ ಇದೆಯೇ ಎಂದು ಕೇಳಿದ ಪ್ರಶ್ನೆಗೆ, ‘ಅವರ ಲೆಕ್ಕಾಚಾರದ ಬಗ್ಗೆ ನಾನು ಯಾಕೆ ಮಾತನಾಡಲಿ, ನನಗೂ ಆರೋಗ್ಯ ಸ್ವಲ್ಪ ವ್ಯತ್ಯಾಸ ಆಗಿದೆ. ಅವರು ಆರೋಗ್ಯದ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯಲು ಹೋಗಿದ್ದಾರೆ. ವಿಶ್ರಾಂತಿ ಪಡೆಯಲಿ. ನಾನು ವಿಶ್ರಾಂತಿ ಪಡೆಯಲು ಹೊರಗೆ ಹೋಗಬೇಕು ಅಂದುಕೊಂಡಿದ್ದೆ, ನಮ್ಮಲ್ಲಿ ಬೇಡ ಎನ್ನುತ್ತಿದ್ದಾರೆ’ ಎಂದು ತಿಳಿಸಿದರು.

ಗೆಲ್ಲಬಹುದಾದ ಸಂಭಾವ್ಯರನ್ನು ಸಂಪರ್ಕಿಸುವ ಬಗ್ಗೆ ಕೇಳಿದಾಗ, ‘ಅದು ಸಹಜ. ಎಲ್ಲರೂ ಆಡಳಿತ ಪಕ್ಷದಲ್ಲಿ ಇರಲು ಬಯಸುತ್ತಾರೆ’ ಎಂದು ತಿಳಿಸಿದರು. ರೆಸಾರ್ಟ್ ರಾಜಕೀಯ ಈ ಬಾರಿ ಅಂತ್ಯ ಆಗುತ್ತಾ ಎಂದು ಕೇಳಿದಾಗ, ‘ಬಿಜೆಪಿಯವರು ಎಷ್ಟೇ ಸೀಟು ಬಂದರು ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅದು ಅವರ ಭ್ರಮೆ. ಎಲ್ಲಾ ಪಕ್ಷದವರು ತಮ್ಮ ಪಕ್ಷದ ನಾಯಕರನ್ನು ಒಂದು ಕಡೆ ಸೇರಿಸಿ ವಿಶ್ರಾಂತಿ ಪಡೆದು ಚರ್ಚೆ ಮಾಡುತ್ತಾರೆ. ಇದು ಸಹಜ’ ಎಂದು ತಿಳಿಸಿದರು.

ಎಕ್ಸಿಟ್ ಪೋಲ್ ಆಧಾರದ ಮೇಲೆ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಮಾಡಲಾಗುತ್ತಿದೆಯೇ ಎಂದು ಕೇಳಿ, ‘ಸದ್ಯಕ್ಕೆ ಯಾವ ಅಧಿಕಾರ ಹಂಚಿಕೆ ಆಗಿಲ್ಲ. ನಮ್ಮ ಹೈಕಮಾಂಡ್, ಮಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಏನು ಹೇಳುತ್ತಾರೋ ಅದೇ ಅಂತಿಮ’ ಎಂದು ಹೇಳಿದರು. ಅಂತಂತ್ರವಾದರೂ ಕಪ್ ನಮ್ಮದೇ ಎಂಬ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ಕಪ್ಪು ಹಾಗೂ ಟೋಪಿ ಎಲ್ಲವನ್ನೂ ಅವರೇ ಇಟ್ಟುಕೊಳ್ಳಲಿ’ ಎಂದು ತಿಳಿಸಿದರು.

ನೀವು 20 ವರ್ಷಗಳಿಂದ ಕಾಯುತ್ತಿರುವ ಸಮಯ ಬಂದಿದೆಯೇ ಎಂದು ಕೇಳಿದಾಗ, ‘ನಾನು ಶ್ರಮ ಪಟ್ಟಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷ ಸೋತ ನಂತರ ದಿನೇಶ್ ಗುಂಡೂರಾವ್ ಅವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸಿದ್ದರಾಮಯ್ಯ ಅವರು ಕೂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ನಂತರ ಸೋನಿಯಾ ಗಾಂಧಿ ಅವರು ನನಗೆ ಈ ಜವಾಬ್ದಾರಿ ನೀಡಿದರು. ನಾನು ಈ ಜವಾಬ್ದಾರಿ ಪಡೆದ ದಿನದಿಂದ ಮಲಗಿಲ್ಲ. ಪಕ್ಷದ ನಾಯಕರು ಕಾರ್ಯಕರ್ತರಿಗೂ ಮಲಗಲು ಬಿಟ್ಟಿಲ್ಲ. ಪಕ್ಷ ಸಂಘಟನೆಗೆ ಏನು ಮಾಡಬೇಕೋ ಮಾಡಿದ್ದೇನೆ. ಎಲ್ಲರೂ ನಮಗೆ ಸಹಕಾರ ನೀಡಿ ಆಶೀರ್ವಾದ ನೀಡುತ್ತಾರೆ. ಉತ್ತಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ’ ಎಂದು ತಿಳಿಸಿದರು.

Tags: BJPBSYcmbommaiCongress PartyDKShivakumarJDSjdskarnatakaKPCClatestnewslivenewsMallikarjuna KhargeModiPMModisiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Mocha Cyclone | ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ ಮೋಚಾ ಚಂಡಮಾರುತ..!

Next Post

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಕೋಡಿಮಠದ ಶ್ರೀ ಮಾರ್ಮಿಕ ನುಡಿ

Related Posts

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
0

https://youtu.be/FH4phfSAt_4

Read moreDetails

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025
Next Post
ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಕೋಡಿಮಠದ ಶ್ರೀ ಮಾರ್ಮಿಕ ನುಡಿ

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಕೋಡಿಮಠದ ಶ್ರೀ ಮಾರ್ಮಿಕ ನುಡಿ

Please login to join discussion

Recent News

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

July 31, 2025

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada