ಕಾಂಗ್ರೆಸ್ (Congress) ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದು, ಸಂಪೂರ್ಣ 5 ವರ್ಷ ನಾನೇ ಸಿಎಂ ಎಂಬ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.ಆ ಮೂಲಕ ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮತ್ತೊಮ್ಮೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಹೌದು ಸಂಪೂರ್ಣ ಐದು ವರ್ಷಗಳ ಅವಧಿಗೆ ನಾನೇ ಸಿಎಂ, ನಾಯಕತ್ವ ಬದಲಾವಣೆ ಚರ್ಚೆ ಅನ್ನೋದು ಸುಳ್ಳು, ಜೊತೆಗೆ ಸಿಎಂ ಬದಲಾವಣೆ ಚರ್ಚೆ ಆಗುತ್ತಿದೆ ಅನ್ನೋದು ತಪ್ಪು ಮಾಹಿತಿ ಎಂದು ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.

ಈ ಹಿಂದೆ ಜುಲೈ 2 ರಂದು ಸಚಿವ ಸಂಪುಟ ಸಭೆಯ ವೇಳೆ ಕೂಡ ನಾನು ಇದನ್ನೇ ಹೇಳಿದ್ದೆ. 5 ವರ್ಷಗಳ ಕಾಲ ನಾನೇ ಸಿಎಂ ಎಂದು ಸ್ಪಷ್ಟಪಡಿಸಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ನಾಯಕತ್ವ ಬದಲಾವಣೆಯ ಚರ್ಚೆಯೇ ಇಲ್ಲ ಎಂದಿದ್ದಾರೆ.