ಸಿಎಂ ಬದಲಾವಣೆ (Cm race) ಚರ್ಚೆಗಳಿಗೆ ಬ್ರೇಕ್ ಹಾಕುವ ಸಲುವಾಗಿ ಇಂದು ಸಿಎಂ ಸಿದ್ದರಾಮಯ್ಯ (Cm siddaramaiah), ಐದು ವರಶದ ಅವಧಿಗೂ ನಾನೇ ಮುಖ್ಯಮಂತ್ರಿ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ (Dk Shivakumar ) ಪ್ರತಿಕ್ರಿಯಿಸಿದ್ದು, ಅವರ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.

ಈ ಬಗ್ಗೆ ಮಾತನಾಡಿದ ಡಿಕೆಶಿ ಐ ಹ್ಯಾವ್ ನೋ ಅದರ್ ಆಪ್ಷನ್..ಅಂದ್ರೆ ನನಗೆ ಬೇರೆ ಯಾವುದೇ ಆಯ್ಕೆಗಳಿಲ್ಲ ಎಂದಿದ್ದಾರೆ.ನಾನು ಸಪೋರ್ಟ್ ಮಾಡಲೇಬೇಕು, ಸಪೋರ್ಟ್ ಮಾಡ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾನು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತು ಸಹಕಾರ ಕೊಡ್ತೇನೆ.ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದವಾಗಿರುತ್ತೇನೆ.ನಮ್ಮ ಲಕ್ಷಾಂತರ ಕಾರ್ಯಕರ್ತರು ಪಕ್ಷವನ್ನ ಬೆಂಬಲಿಸಿದ್ದಾರೆ, ಹೀಗಾಗಿ ಪಕ್ಷದ ತೀರ್ಮಾನಕ್ಕೆ ನಾನು ಬದ್ದವಾಗಿರ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.