ನನ್ನ ಪ್ರಕಾರ, ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ವಿವಾದಾತ್ಮಕ (controversy)ಅಂಶವಿಲ್ಲ. ಅವರು ರಾಜಕೀಯ (political) ಕಾರಣಕ್ಕೆ ವಿವಾದ ಮಾಡಿದರೆ ಸಂದರ್ಭ ಬಂದಾಗ ಅದಕ್ಕೆ ಉತ್ತರ ಕೊಟ್ಟೇ ಕೊಡ್ತೇನೆ. ಭಗವದ್ಗೀತೆ ಶ್ಲೋಕ ಯಾಕೆ ಹೇಳಿದೆ ನಾನು? ನನಗೆ ಹಿಂದೂ ಧರ್ಮದಲ್ಲಿ ಇರುವಷ್ಟು ನಂಬಿಕೆ, ನಾನು ಮಾಡುವಷ್ಟು ಆಚರಣೆ (celebration)ಅವರಿಗಂತೂ ಇಲ್ಲ ಎಂದು ಪರಮೇಶ್ವರ ಹೇಳಿದ್ದಾರೆ.
ತುಮಕೂರು: ಹಿಂದೂ ಧರ್ಮದ (Hindu Religion) ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಆ ಕುರಿತು ಗೃಹ ಸಚಿವ ಜಿ ಪರಮೇಶ್ವರ (G Parameshwara) ಸ್ಪಷ್ಟನೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು, ‘ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, ಬೌದ್ಧ ಧರ್ಮ, ಹಿಂದೂ ಧರ್ಮದ ಬಗ್ಗೆ ಹೇಳಿದ್ದೆ. ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿರಲಿಲ್ಲ’ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನು ಸಹ ಓದಿ: ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನ ರೈತರು ಅನ್ನೋಕಾಗುತ್ತಾ..? ಡಿ.ಕೆ ಶಿವಕುಮಾರ್ ವಿವಾದಿತ ಹೇಳಿಕೆ..!
ಹಿಂದೂ ಧರ್ಮದ ಬಗ್ಗೆ ನಮಗಿರುವಷ್ಟು ಅಭಿಮಾನ ಅವರಿಗೆ (ಬಿಜೆಪಿ ನಾಯಕರನ್ನು ಉದ್ದೇಶಿಸಿ) ಇಲ್ಲ. ಕೇವಲ ತೋರಿಕೆ, ಪ್ರಚಾರಕ್ಕಾಗಿ ಮಾತ್ರ ಹಿಂದೂ ಎನ್ನುತ್ತಾರೆ. ನಮ್ಮ ಹೇಳಿಕೆಯಲ್ಲಿ ಯಾವುದೇ ವಿವಾದವಿಲ್ಲ, ತಪ್ಪು ಹೇಳಿಕೆ ನೀಡಿಲ್ಲ. ರಾಜಕೀಯ ಕಾರಣಕ್ಕೆ ವಿರೋಧಿಸಿದರೆ ಉತ್ತರ ನೀಡುತ್ತೇನೆ. ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೂ ನನಗೂ ಸಂಬಂಧವಿಲ್ಲ ಎಂದು ಪರಮೇಶ್ವರ ಹೇಳಿದ್ದಾರೆ.
ನನ್ನ ಪ್ರಕಾರ, ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ವಿವಾದಾತ್ಮಕ ಅಂಶವಿಲ್ಲ. ಅವರು ರಾಜಕೀಯ ಕಾರಣಕ್ಕೆ ವಿವಾದ ಮಾಡಿದರೆ ಸಂದರ್ಭ ಬಂದಾಗ ಉತ್ತರ ಕೊಡ್ತೇನೆ. ಭಗವದ್ಗೀತೆ ಶ್ಲೋಕ ಯಾಕೆ ಹೇಳಿದೆ ನಾನು? ನನಗೆ ಹಿಂದೂ ಧರ್ಮದಲ್ಲಿ ಇರುವಷ್ಟು ನಂಬಿಕೆ, ನಾನು ಮಾಡುವಷ್ಟು ಆಚರಣೆ ಅವರಿಗಂತೂ ಇಲ್ಲ. ನನಗಿಂತ ಹೆಚ್ಚೇನೂ ಬಿಜೆಪಿಯವರು ಆಚರಣೆ ಮಾಡುವುದಿಲ್ಲ. ನಾನು ಕೇವಲ ಹೋಲಿಕೆ ಮಾಡಿ ಮಾತನಾಡಿದ್ದೇನೆ ಅಷ್ಟೇ ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಪರಮೇಶ್ವರ್ ಏನು ಹೇಳಿಕೆ ಕೊಟ್ಟಿದ್ದ್ರು..?
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ್ದ ಪರಮೇಶ್ವರ, ಹಿಂದೂ ಧರ್ಮವನ್ನು ಯಾರು ಹುಟ್ಟಿಸಿದರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಇದೆ. ಈ ವಿಚಾರದಲ್ಲಿ ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ ಎಂದು ಹೇಳಿದ್ದರು. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ನಾಯಕರಿಗೆ ಹಿಂದೂ ಧರ್ಮವನ್ನು ಹೀಯಾಳಿಸುವ ಚಾಳಿ ಏಕೆ ಬಂದಿದೆ ಅರ್ಥವಾಗುತ್ತಿಲ್ಲ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದರು.