• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
December 18, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Share on WhatsAppShare on FacebookShare on Telegram

ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್(Supreme Court) ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್(DCM DK Shivakuamar) ಸ್ಪಷ್ಟಪಡಿಸಿದರು.

ADVERTISEMENT
Araga Jnanendra :  ಅಧಿವೇಶನದಲ್ಲಿ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಮುಗಿಬಿದ್ದ BJP #pratidhvani

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರಾಗಿರುವ ಡಿ.ಕೆ ಶಿವಕುಮಾರ್ ಗುರುವಾರ ಉತ್ತರಿಸಿದರು. ಕಾಂಗ್ರೆಸ್ ಸದಸ್ಯರಾದ ಮಧು ಮಾದೇಗೌಡ ಅವರು ಬಿಎಂಐಸಿಪಿಎ ಯೋಜನೆ ವಿಚಾರವಾಗಿ ನಮ್ಮ ಭಾಗದಲ್ಲಿ ಎನ್ ಹೆಚ್ 275 ಬಂದಿದ್ದು, ಮತ್ತೊಂದು ಹೆದ್ದಾರಿ ಅಗತ್ಯವಿದೆಯೇ? ಇಲ್ಲಿ ಭೂ ಪರಿವರ್ತನೆ ಹಾಗೂ ನಕ್ಷೆ ಅನುಮೋದನೆಗೆ ಸಮಸ್ಯೆ ಎದುರಾಗಿದೆ ಎಂದು ಕೇಳಿದಾಗ, ʼ1995ರಲ್ಲೇ ಈ ಬೆಂಗಳೂರು ಮೈಸೂರು ಕಾರಿಡಾರ್ ಯೋಜನೆಯನ್ನು ದೇವೇಗೌಡರು ಸಿಎಂ ಆಗಿದ್ದಾಗ ಅನುಮೋದನೆ ನೀಡಲಾಗಿತ್ತು. ಇಡೀ ದೇಶಕ್ಕೆ ಮಾದರಿಯಾಗುವಂತಹ ಮಾಸ್ಟರ್ ಪ್ಲಾನ್ ಈ ಯೋಜನೆ. ಕಾರಣಾಂತರಗಳಿಂದ ಇದು ಪೂರ್ಣಗೊಂಡಿಲ್ಲ. ಸದಸ್ಯರು ಈ ಭಾಗದಲ್ಲಿ ಭೂಮಿ ಪರಿವರ್ತನೆ ಬಗ್ಗೆ ಕೇಳಿದ್ದು, ಈಗ ನಾವು ಆನ್ ಲೈನ್ ನಲ್ಲಿ ಭೂಮಿ ಪರಿವರ್ತನೆಗೆ ಅವಕಾಶ ಕಲ್ಪಿಸಿದ್ದೇವೆ. ಇನ್ನು ಕಟ್ಟಡ ನಕ್ಷೆಗೆ ಅನುಮತಿ ಪಡೆಯಲು ಸ್ಥಳೀಯ ಯೋಜನಾ ಪ್ರಾಧಿಕಾರಕ್ಕೆ ಅಧಿಕಾರ ನೀಡಲಾಗಿದೆʼ ಎಂದು ತಿಳಿಸಿದರು.

GRamGClears parliament session : ವಿಪಕ್ಷಗಳ ಭಾರೀ ವಿರೋಧದ ನಡುವೆಯೂ ಮಸೂದೆ ಅಂಗೀಕಾರ..! #pratidhvani

ʼಸ್ಥಳೀಯ ಶಾಸಕರಾದ ಉದಯ್ ಅವರು ಈ ವಿಚಾರವಾಗಿ ನನ್ನ ಬಳಿ ಸುಮಾರು ಹತ್ತು ಬಾರಿ ಚರ್ಚೆ ಮಾಡಿದ್ದಾರೆ. ನಾನು ಅದನ್ನು ಪರಿಶೀಲಿಸಿದೆ. ಆದರೆ ಸುಪ್ರೀಂ ಕೋರ್ಟ್ ನಲ್ಲಿ ತ್ರಿಸದಸ್ಯ ಪೀಠದಿಂದ ತೀರ್ಪು ಬಂದಿದ್ದು, ಈ ಯೋಜನೆಯನ್ನು ಮೂಲ ಪರಿಕಲ್ಪನೆಯಲ್ಲಿ ಜಾರಿಗೆ ತರಬೇಕು. ಯಾವುದೇ ಬದಲಾವಣೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಹೀಗಾಗಿ ಸರ್ಕಾರ ಇದರಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದಕ್ಕಾಗಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಕೂಡ ಇದೆ. ಪರಮೇಶ್ವರ್ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಮಂಡ್ಯದಲ್ಲಿ ನಗರ ಯೋಜನೆ ಕಚೇರಿ ಆರಂಭಿಸಲಾಗಿದೆ. ಈ ಯೋಜನೆಯಲ್ಲಿ ಬದಲಾವಣೆಗೆ ಅವಕಾಶವಿಲ್ಲ, ಆದರೆ ಸ್ಥಳಿಯವಾಗಿ ಇರುವ ಸಮಸ್ಯೆಗಳನ್ನು ನಿವಾರಿಸಲು ನಾವು ಬದ್ಧವಾಗಿದ್ದೇವೆʼ ಎಂದು ತಿಳಿಸಿದರು.

ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳೆ ಅಂತ ಹೇಳ್ಕೊಂಡು ತಪ್ಪು ಮಾಡಬಹುದಾ? ಶಾಸಕ ಯತ್ನಾಳ್ ಖಡಕ್ ಪ್ರಶ್ನೆ #pratidhvani

ನನಗೆ ಜೈಲಿಂದ ಯಾವ ಕರೆಗಳು ಬಂದಿಲ್ಲ

ಬಿಜೆಪಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರು ಗೃಹ ಸಚಿವ ಪರಮೇಶ್ವರ್ ಅವರಿಗೆ ಜೈಲಿನಲ್ಲಿ ಉಗ್ರರು ಸೇರಿದಂತೆ ಖೈದಿಗಳಿಗೆ ಮೊಬೈಲ್, ಟಿ.ವಿಯಂತಹ ಸೌಲಭ್ಯ ಕಲ್ಪಿಸಲಾಗಿದೆ. ಅವರು ಜೈಲಿನಿಂದಲೇ ಹಾಟ್ ಲೈನ್ ಕರೆ ಬಂದಿದೆ. ಈ ವಿಚಾರವಾಗಿ ಪತ್ರಿಕೆಗಳಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರು ಬಂದಿದೆ ಎಂದು ಪ್ರಶ್ನೆ ಕೇಳಿದರು.

Power Minister Belagavi Session :   ಪೊಲೀಸರು ರೂಲ್ಸ್ ಪಾಲಿಸುತ್ತಿಲ್ಲ, ಬ್ರೇಕ್ ಮಾಡ್ತಿದ್ದಾರೆ..  #kjgeorge

ಈ ವೇಳೆ ಮಧ್ಯ ಪ್ರವೇಶಿಸಿ ಸ್ಪಷ್ಟನೆ ನೀಡಿದ ಶಿವಕುಮಾರ್ ಅವರು, ʼನಾನು ಇಂತಹ ಯಾವುದೇ ಹಾಟ್ ಲೈನ್ ಕರೆಗಳನ್ನು ಸ್ವೀಕರಿಸುವುದಿಲ್ಲ. ನನಗೆ ಜೈಲಿನಿಂದ ಯಾವುದೇ ಕರೆ ಬಂದಿಲ್ಲ. ಪತ್ರಿಕೆಗಳಲ್ಲಿ ಏನು ಬಂದಿದೆಯೋ? ನೀವು ಅದನ್ನು ಇಲ್ಲಿ ಪ್ರಸ್ತಾಪಿಸಿದರೆ, ನಂತರ ನೀವು ಅದಕ್ಕೂ ಹಾಗೂ ನನ್ನ ಮಧ್ಯೆ ಬೇರೆ ರೀತಿ ಲಿಂಕ್ ಬೆಳೆಸುತ್ತೀರಿ. ಹೀಗಾಗಿ ನಾನು ಈ ವಿಚಾರವಾಗಿ ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಜೈಲು ಮಂತ್ರಿಯಾಗಿದ್ದೆ, ಜೈಲಲ್ಲಿ ಇದ್ದೆ. ಜೈಲಲ್ಲಿ ಏನೆಲ್ಲಾ ನಡೆಯುತ್ತದೆ ಎಂದು ತಿಳಿದುಕೊಂಡಿದ್ದೇನೆ. ಪತ್ರಿಕೆಗಳಲ್ಲಿ ಸಾವಿರ ಬಂದಿರಬಹುದು. ಆದರೆ ಇದಕ್ಕೂ ನನಗೂ ನಂಟು ಹಾಕಬೇಡಿʼ ಎಂದು ತಿಳಿಸಿದರು.

Tags: 2024 belagavi winter sessionBJPcongressDCM D.K. ShivakumarjailKarnataka PoliticsPoliticsWinter sessionWinter Session ̄2025
Previous Post

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

Next Post

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada