ಹುಬ್ಬಳ್ಳಿ : 2018ರ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ನಾನು ಬಿಜೆಪಿಯನ್ನು ತೊರೆದು ಕೆಜೆಪಿ ಕಟ್ಟುವ ಮೂಲಕ ದೊಡ್ಡ ತಪ್ಪು ಮಾಡಿದ್ದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ನಾನು ಈ ಬಗ್ಗೆ ಈಗಾಗಲೇ ರಾಜ್ಯದ ಜನತೆಯಲ್ಲಿ ಕ್ಷಮೆಯಾಚಿಸಿದ್ದೇನೆ. ಆದರೆ ಜಗದೀಶ್ ಶೆಟ್ಟರ್ನಂತೆ ಕಾಂಗ್ರೆಸ್ ಸೇರಲಿಲ್ಲ. ಅವರು ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಶೆಟ್ಟರ್ರನ್ನು ಬಿಜೆಪಿ ಎಂದಿಗೂ ಕ್ಷಮಿಸೋದಿಲ್ಲ ಎಂದು ಹೇಳಿದ್ದಾರೆ.
ಶೆಟ್ಟರ್ ತನಗೆ ಇಷ್ಟು ವರ್ಷಗಳ ಕಾಲ ಅವಕಾಶ ನೀಡಿದ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ . ಅವರನ್ನು ಪಕ್ಷಕ್ಕೆ ಮರಳಿ ತರುವ ಮಾತೇ ಇಲ್ಲ. ಬಿಜೆಪಿ ಎಂದಿಗೂ ಅವರನ್ನು ಸೇರಿಸಿಕೊಳ್ಳುವುದಿಲ್ಲ ಎಂದಿದ್ದಾರೆ.