ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿದ್ದೇನೆಂದು ಹೇಳುವ ಮೂಲಕ ಬಿಜೆಪಿಯು ನನ್ನ ವಿರುದ್ಧ ಷಡ್ಯಂತ್ರ ಮಾಡಿದೆ. ಇದೊಂದು ರಾಜಕೀಯ ದುರುದ್ದೇಶದಿಂದ ಕೂಡಿದ ಕೆಲಸವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಾನು ಕೇವಲ ಬಸವರಾಜ ಬೊಮ್ಮಾಯಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೇನೆ. ಆದರೆ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಗುಡುಗಿದ್ದಾರೆ.

ಲಿಂಗಾಯತರಲ್ಲಿ ಬಹಳಷ್ಟು ಮಂದಿ ಮುಖ್ಯಮಂತ್ರಿಗಳು ಅತ್ಯಂತ ಪ್ರಾಮಾಣಿಕರಿದ್ದರು. ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು ಇವರೆಲ್ಲ ಪ್ರಾಮಾಣಿಕರಾಗಿದ್ದರು ಆದರೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟರಿದ್ದಾರೆ ಎಂದು ಹೇಳಿದ್ದೆ. ಆದರೆ ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ಚುನಾವಣೆಯ ಲಾಭ ಪಡೆಯುವ ಪ್ರಯತ್ನ ಪಡ್ತಿದ್ದಾರೆ. ಲಿಂಗಾಯತ ಸಮುದಾಯಕ ಮೇಲೆ ನನಗೆ ಗೌರವವಿದೆ ಎಂದು ಹೇಳಿದ್ದಾರೆ.
ನಮಗೆ ಲಿಂಗಾಯತರ ಮೇಲೆ ಗೌರವ ಎಷ್ಟಿದೆ ಎಂದರೆ ನಾವು ಹೆಚ್ಚು ಟಿಕೆಟ್ನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದಿಂದ ಟಿಕೆಟ್ ನೀಡಿದ್ವಿ. ಈ ಬಾರಿ 53 ಲಿಂಗಾಯತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಇದು ನಮ್ಮಲ್ಲಿ ನಡೆದುಕೊಂಡು ಬಂದ ಪದ್ಧತಿ ಎಂದಿದ್ದಾರೆ.