• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಕ್ಕಳಲ್ಲಿ ಓದುವ ಹವ್ಯಾಸ ಉತ್ತೇಜಿಸಲು ʼನಾನು ಓದುವ ಪುಸ್ತಕ ʼ ಅಭಿಯಾನ: ಪ್ರಿಯಾಂಕ್‌ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರಿಯಾಂಕ್‌ ಖರ್ಗೆ

ಪ್ರಿಯಾಂಕ್‌ ಖರ್ಗೆ

Share on WhatsAppShare on FacebookShare on Telegram

ಗ್ರಂಥಾಲಯಕ್ಕೆ ಭೇಟಿ ನೀಡುವ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸಲು 2023ರ ಸೆಪ್ಟೆಂಬರ್ ಮಾಹೆಯಲ್ಲಿ ʼನಾನು ಓದುವ ಪುಸ್ತಕʼ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ADVERTISEMENT

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳ ಹೆಸರನ್ನು ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರದರ್ಶಿಸಲಾಗುವುದು. ಗ್ರಂಥಾಲಯಕ್ಕೆ ಭೇಟಿ ನೀಡುವ ಮಕ್ಕಳು ಪುಸ್ತಕವನ್ನು ಓದಲು ಗ್ರಂಥಾಲಯ ಮೇಲ್ವಿಚಾರಕರು ಪ್ರೋತ್ಸಾಹಿಸುತ್ತಾರೆ. ಮಕ್ಕಳು ಪುಸ್ತಕವನ್ನು ಓದಿ ಮುಗಿಸಿದ ನಂತರ ತಾವು ಓದಿದ ಪುಸ್ತಕಗಳ ಬಗ್ಗೆ ಸೂಚನೆಗಳಂತೆ ಮಾಹಿತಿ ಒದಗಿಸಬೇಕು. ಮಕ್ಕಳು ಓದಿದ ಪುಸ್ತಕಗಳ ಸಂಖ್ಯೆಯನ್ನು ಗ್ರಂಥಾಲಯದಲ್ಲಿ ಪ್ರದರ್ಶಿಸಲಾಗುವುದು. ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚು ಪುಸ್ತಕಗಳನ್ನು ಓದಿದ ಮಕ್ಕಳ ಹೆಸರುಗಳನ್ನು ತಿಂಗಳ ಕೊನೆಯ ದಿನದಂದು ಘೋಷಿಸಲಾಗುವುದು ಎಂದು ಹೇಳಿರುವ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ಮಕ್ಕಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳುವಂತಾಗಲಿ ಎಂದು ಹಾರೈಸಿದ್ದಾರೆ.

ಮಕ್ಕಳನ್ನು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ‘ಓದುವ ಬೆಳಕು’ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ.

ಗ್ರಂಥಾಲಯಗಳನ್ನು ಗ್ರಾಮೀಣ ಅರಿವು ಕೇಂದ್ರಗಳನ್ನಾಗಿಸಲು ಗ್ರಂಥಾಲಯಗಳ ನವೀಕರಣ, ಡಿಜಿಟಲೀಕರಣ ಸೇರಿದಂತೆ ವಿವಿಧ ಕ್ರಮಗಳನ್ನು ಈಗಾಗಲೆ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಸಚಿವರು ʼಓದುವ ಬೆಳಕುʼ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಉಪಯುಕ್ತ ಚಟುವಟಿಕೆಯನ್ನು ಆಯೋಜಿಸುವ ಮೂಲಕ ಗ್ರಂಥಾಲಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು.

Tags: ChilrenPriyank KhargeReading Booksಪುಸ್ತಕಗಳುಪ್ರಿಯಾಂಕ್‌ ಖರ್ಗೆ
Previous Post

ಗಣಿಕಾರಿಕೆ ನಿಯಮ ಸರಳೀಕರಣ ಕೋರಿ ಕಲಬುರಗಿ ಜಿಲ್ಲಾ ಗಣಿಗಾರಿಕೆ ಸಂಘ ಸಚಿವ ಪ್ರಿಯಾಂಕ್‌ ಖರ್ಗೆಗೆ ಮನವಿ

Next Post

ರಕ್ಷಾಬಂಧನ ದಿನದಂದೇ ಅಕ್ಕ-ತಂಗಿಯರ ಮೇಲೆ ಗ್ಯಾಂಗ್‌ರೇಪ್‌: ಬಿಜೆಪಿ ಮುಖಂಡನ ಪುತ್ರನೇ ಮುಖ್ಯ ಆರೋಪಿ!

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
Next Post
ರಾಜಸ್ಥಾನ: ಮಕ್ಕಳೆದುರೇ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ರಕ್ಷಾಬಂಧನ ದಿನದಂದೇ ಅಕ್ಕ-ತಂಗಿಯರ ಮೇಲೆ ಗ್ಯಾಂಗ್‌ರೇಪ್‌: ಬಿಜೆಪಿ ಮುಖಂಡನ ಪುತ್ರನೇ ಮುಖ್ಯ ಆರೋಪಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada