• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ನಾನು ಜವಾಬ್ದಾರಿಯನ್ನು ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ; ನಿಖಿಲ್ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಎಲ್ಲ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ಇದೇ : ನಿಖಿಲ್‌ ಕುಮಾರಸ್ವಾಮಿ
Share on WhatsAppShare on FacebookShare on Telegram

ಕಳೆದೊಂದು ವಾರದಿಂದ ನಿಖಿಲ್ ಕುಮಾರಸ್ವಾಮಿ ರಾಜಕೀಯ ಜೀವನದ ಕುರಿತು ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮದೇ ಆದ ಹೇಳಿಕೆಯನ್ನ ನೀಡಿದರು ಅದರಲ್ಲಿ ಪ್ರಮುಖವಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಜಕೀಯ ಅನಿವಾರ್ಯವಲ್ಲ ಅವರಿಗೆ ಅವರದ್ದೇ ಆದ ಕಲೆ ಇದೆ ಎಂಬ ಹೇಳಿಕೆ ನೀಡುವ ಮುಖೇನ ನಿಖಿಲ್ ಕುಮಾರಸ್ವಾಮಿ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದನ್ನ ಖಚಿತ ಪಡಿಸಿದ್ದರು.

ADVERTISEMENT

ಯಾವಾಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ರೀತಿಯಾದ ಹೇಳಿಕೆಯನ್ನು ನೀಡಿದ್ರೋ ಆ ಸಂದರ್ಭದಿಂದಲೇ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯ ಮುಗಿದೆ ಹೋಯಿತು ಎಂಬಂತೆ ಸಾಕಷ್ಟು ಮಾಧ್ಯಮಗಳು ಮತ್ತು ಕೆಲ ಪತ್ರಿಕೆಗಳು ವರದಿಯನ್ನು ಪ್ರಸಾರ ಮಾಡಿದ್ದವು. ಈ ವರದಿ ಸ್ವತಃ ನಿಖಿಲ್ ಕುಮಾರಸ್ವಾಮಿ ಅವರ ಗಮನಕ್ಕೆ ಬಂದಂತೆ ಕಾಣುತ್ತಿದೆ ಹೀಗಾಗಿ ಈ ಕುರಿತಾಗಿ ಸ್ವತಹ ಅವರೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ಗಳನ್ನು ಹಾಕಿ ಸ್ಪಷ್ಟನೆಯನ್ನು ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ತಮ್ಮ ಪೋಸ್ಟ್ ನಲ್ಲಿ

‘ಅರೂವರೆ ಕೋಟಿ ಕನ್ನಡಿಗರು, ದೃಶ್ಯ ಮತ್ತು ಮುದ್ರಣ ಮಾಧ್ಯಮಕ್ಕೆ ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ’

ಅರೂವರೆ ಕೋಟಿ ಕನ್ನಡಿಗರು, ದೃಶ್ಯ ಮತ್ತು ಮುದ್ರಣ ಮಾಧ್ಯಮಕ್ಕೆ ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ.1/5

— Nikhil Kumar (@Nikhil_Kumar_k) August 30, 2023

‘ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ. ಜನರು ನನಗೆ ಸದಾ ಕಾಲ ಪ್ರೀತಿ, ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ.’

‘ಮಾಜಿ ಪ್ರಧಾನಮಂತ್ರಿಗಳ ಮೊಮ್ಮಗ, ಮಾಜಿ ಮುಖ್ಯಮಂತ್ರಿಗಳ ಮಗ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋಣಿ.’

‘ನನ್ನ ಮೊದಲ ಚಿತ್ರ ಜಾಗ್ವಾರ್ ಮತ್ತು ನಾನು ನಟಿಸಿರುವ ಎಲ್ಲಾ ಸಿನಿಮಾಗಳಲ್ಲೂ ಬೆನ್ನುತಟ್ಟಿ ಆಶೀರ್ವದಿಸಿ, ಪ್ರೋತ್ಸಾಹಿಸಿ ನನ್ನ ಯಶಸ್ಸಿಗೆ ನೀವೆಲ್ಲರೂ ಕಾರಣರಾಗಿದ್ದಿರಿ. ಅದಕ್ಕೆ ನಾನು ಆಭಾರಿ. ಇನ್ನೂ ಬೆಟ್ಟದಷ್ಟು ಕನಸು ಹೊತ್ತು ಹಲವಾರು ಚಿತ್ರಗಳಲ್ಲಿ ನಟಿಸಿ ನಿಮ್ಮನ್ನು ಮನರಂಜಿಸಬೇಕು ಎನ್ನುವುದು ನನ್ನ ಜೀವನದ ಗುರಿ.’

‘ಇಲ್ಲಿಯವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ.
ಕೊನೆಯದಾಗಿ ಎಲ್ಲಾ ಮಾಧ್ಯಮದ ಮಿತ್ರರಿಗೆ ರಾಜಕಾರಣ ಮತ್ತು ಸಿನಿಮಾದ ವಿಚಾರವಾಗಿ ನನಗೆ ಸಂಬಂಧಿಸಿದ ವಿಷಯಗಳಿದ್ದರೆ ಆ ಪ್ರಶ್ನೆಗಳಿಗೆ ನಾನೇ ಉತ್ತರ ನೀಡಲು ಬಯಸುತ್ತೇನೆ.’ ಎಂದು ಬರೆದುಕೊಂಡಿದ್ದಾರೆ.

ಹೀಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುವ ಮುಖಾಂತರ ಮುಂಬರುವ ದಿನಗಳಲ್ಲಿ ಸಿನಿಮಾಗಳಿಗೆ ಹೆಚ್ಚಿನ ಆದ್ಯತೆ ನೀಡುವುದನ್ನ ಪರೋಕ್ಷವಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಒಪ್ಪಿಕೊಂಡಿದ್ದಾರೆ ಆದರೆ ರಾಜಕೀಯ ಭವಿಷ್ಯ ಮುಗಿದೆ ಹೋಗಿದೆ ಎಂದು ಹೇಳುವವರ ಬಾಯನ್ನ ಮುಚ್ಚಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಇನ್ನು ಅವರ ಈ ಪೋಸ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು ಅವರ ಈ ನಿರ್ಧಾರಕ್ಕೆ ಸಾಕಷ್ಟು ಮಂದಿ ಸ್ವಾಗತವನ್ನು ಕೂಡ ಕೋರಿದ್ದಾರೆ

Tags: hddevegowdaHdKumaraswamyJDSNikhil Kumaraswamy
Previous Post

ಇಂದು ಮಹಿಳೆಯರ ಖಾತೆಗೆ ಬರಲಿದೆ ₹2 ಸಾವಿರ ಸಹಾಯಧನ..! ಎಷ್ಟೊತ್ತಿಗೆ ಗೊತ್ತಾ..?

Next Post

ಹಾವೇರಿ | ಆಲದಕಟ್ಟಿ ಪಟಾಕಿ ಗೋದಾಮಿಗೆ ಬೆಂಕಿ ; ನಾಲ್ವರು ಸಜೀವ ದಹನ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ಹಾವೇರಿ

ಹಾವೇರಿ | ಆಲದಕಟ್ಟಿ ಪಟಾಕಿ ಗೋದಾಮಿಗೆ ಬೆಂಕಿ ; ನಾಲ್ವರು ಸಜೀವ ದಹನ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!