ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿ ಮಕ್ಕಳು ಸಾವನ್ನಪ್ಪಿದ ಸುದ್ದಿ ಕೇಳಿ ದುಃಖವಾಯಿತು. ಮೃತ ಕಂಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದರು.
ತಾಲ್ಲೂಕಿನ ಕಪಗಲ್ ಗ್ರಾಮದ ಸಮೀಪ ಗುರುವಾರ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್ ಮುಖಾಮುಖಿ ಡಿಕ್ಕಿಯಾಗಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದು, 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು. ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ.