ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್, ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಪರಿಶೀಲನೆ ಕೈಗೊಂಡು ಯಾವುದೇ ಶಂಕಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ಹೇಳಿದರು. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್, ಇದೊಂದು ಹುಸಿ ಕರೆ ಎಂದಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಅವರು, ನಾನು ಇಂದು ಬೆಳಿಗ್ಗೆ ಮಾಹಿತಿ ಬಂತು. ತಕ್ಷಣ ಪೊಲೀಸರನ್ನು ಸಂಪರ್ಕಿಸಿದೆ. ಶಾಲೆಯ ಆವರಣವನ್ನು ಖಾಲಿ ಮಾಡಲಾಗಿದೆ. ಅಲ್ಲಿ ಬಾಂಬ್ ನಿಷ್ಕ್ರಿಯ ದಳವಿದೆ. ನನ್ನ ಪ್ರಕಾರ ಇದೊಂದು ಹುಸಿ ಕರೆ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ಪ್ರತಿಕ್ರಿಯಿಸಿದ್ದು,ಪರಿಶೀಲನೆ ಬಹುತೇಕ ಮುಕ್ತಾಯವಾಗಿದ್ದು, ಈ ವೇಳೆ ಯಾವುದೇ ಶಂಕಿತ ವಸ್ತುಗಳು ಪತ್ತೆಯಾಗಿಲ್ಲ.ಈ ಬಗ್ಗೆ ಕೇಸ್ ದಾಖಲು ಮಾಡಿಕೊಳ್ಳಲಾಗುತ್ತದೆ. ಈ ಬಗ್ಗೆ ತನಿಖೆ ಮಾಡಲಾಗುತ್ತೆ. ಸದ್ಯದ ಮಾಹಿತಿ ಪ್ರಕಾರ ಇದೊಂದು ಶಾಲೆಗೆ ಮಾತ್ರ ಬೆದರಿಕೆ ಮೇಲ್ ಬಂದಿದೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್, ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು.