
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! – ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ !

ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ (operation sindhoor) ಸೇನಾ ಕಾರ್ಯಾಚರಣೆ ಆರಂಭಿಸಿದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉಲ್ಬಣಗೊಂಡಿದ್ದ ಯುದ್ಧವನ್ನ ತಡೆದು ಶಾಂತಿ ಸ್ಥಾಪನೆ ಮಾಡಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald trump) ಮತ್ತೆ ಬಡಾಯಿ ಕೊಚ್ಚಿ ಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರತ ಮತ್ತು ಪಾಕಿಸ್ತಾನ ನಡುವಿನ ವಿಷಯದಲ್ಲಿ ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನ ಭಾರತ ಎಂದಿಗೂ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಆ ಬಳಿಕ ಈ ಬಗ್ಗೆ ಶ್ವೇತಭವನದಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನಾನು ಪಾಕಿಸ್ತಾನ ಮತ್ತು ಭಾರತದ ನಡುವಿನ ಯುದ್ಧವನ್ನ ನಿಲ್ಲಿಸಿದೆ. ನಾನು ಪಾಕಿಸ್ತಾನವನ್ನ ಪ್ರೀತಿಸುತ್ತೇನೆ. ಪ್ರಧಾನಿ ಮೋದಿ ಕೂಡ ಒಬ್ಬ ಅದ್ಭುತ ವ್ಯಕ್ತಿ. ನಾನು ನಿನ್ನೆ ರಾತ್ರಿ ಕೂಡ ಅವರೊಂದಿಗೆ ಮಾತನಾಡಿದೆ ಅಂತಾ ಟ್ರಂಪ್ ಹೇಳಿದ್ದಾರೆ.
