ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅವರು ಜೆಡಿಎಸ್ ನಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಎರಡು ತಿಂಗಳಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ.
ಮೈಸೂರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಮತದಾರರು ಮತ್ತು ಬೆಂಬಲಿಗರೊಂದಿಗೆ ಚರ್ಚಿಸಿದ ನಂತರ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಹೇಳಿದರು.

ಇನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಸಾ.ರಾ.ಮಹೇಶ್ ಅವರ ರಾಜ್ಯ ನಾಯಕನಾಗುವ ಸಾಮರ್ಥ್ಯದ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ದೇವೇಗೌಡರು, ‘ಮಹೇಶ್ ಅವರು ರಾಜ್ಯ ಮಟ್ಟದ ನಾಯಕ ಎಂದು ನಾನು ಈಗಾಗಲೇ ಹೇಳಿದ್ದೆ. ಮುಂದಾಳತ್ವ ವಹಿಸುವುದರಲ್ಲಿ ತಪ್ಪೇನಿಲ್ಲ. ನಾನು ಅವನನ್ನು ಪ್ರೋತ್ಸಾಹಿಸುತ್ತೇನೆ ಎಂದರು.