• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

IAS ಅಧಿಕಾರಿಗಳ ವರ್ಗಾವಣೆಯಿಂದ ಬಯಲಿಗೆ ಬಂದ ರಿಯಲ್‌ ಎಸ್ಟೇಟ್‌ ಮಾಫಿಯಾ

Any Mind by Any Mind
June 8, 2021
in ಕರ್ನಾಟಕ, ರಾಜಕೀಯ
0
IAS ಅಧಿಕಾರಿಗಳ ವರ್ಗಾವಣೆಯಿಂದ ಬಯಲಿಗೆ ಬಂದ ರಿಯಲ್‌ ಎಸ್ಟೇಟ್‌ ಮಾಫಿಯಾ
Share on WhatsAppShare on FacebookShare on Telegram

ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ನಡುವಿನ ತಿಕ್ಕಾಟವು   ವರ್ಗಾವಣೆಯಲ್ಲಿ ಅಂತ್ಯಗೊಂಡರು ಕೂಡ ರಿಯಲ್ ಎಸ್ಟೇಟ್ ನಂಟು ಹೊಂದಿರುವ ರಾಜಕಾರಣಿಗಳಿಗೆ  ರೋಹಿಣಿ ಸಿಂಧೂರಿ ಮೇಲಿನ ಕೋಪ ಮಾತ್ರ ತಣ್ಣಗಾಗಲಿಲ್ಲ. ಮೈಸೂರಿನಲ್ಲಿ ನಡೆದ ಇಬ್ಬರು ಮಹಿಳಾ ಅಧಿಕಾರಿಗಳ ನಡುವಿನ ತಿಕ್ಕಾಟ ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಈ ಎಲ್ಲಾ ಪ್ರಹಸನದ ನಡುವೆಯೇ ಮಧ್ಯಪ್ರವೇಶಿಸಿದ ಸರ್ಕಾರ, ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ಅವರನ್ನ ವರ್ಗಾವಣೆ ಮಾಡಿ ಆದೇಶಿಸಿತ್ತು. ಆದರೆ ರೋಹಿಣಿ ಸಿಂಧೂರಿ ವರ್ಗಾವಣೆಯಾದ ಬೆನ್ನಲ್ಲೇ, ಹೊರಬರುತ್ತಿರುವ ಒಂದೊಂದೆ ಆಡಿಯೋ ಕ್ಲಿಪ್  ಗಳು, ಇದೀಗ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ADVERTISEMENT

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಹಿಂದೆ ಸಾಕಷ್ಟು ಷಡ್ಯಂತ್ರ ನಡೆದಿರುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ಎಲ್ಲಾ ಬೆಳವಣಿಗೆ ನಡುವೆಯೇ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶ ಹೊರಬಿತ್ತು. ಇದರ ಬೆನ್ನಲ್ಲೇ, ಬಿಜೆಪಿ ಮುಖಂಡರೊಬ್ಬರು, ಚಾಮರಾಜನಗರಕ್ಕೆ ಆಕ್ಸಿಜನ್ ಪೂರೈಕೆ ವಿಚಾರವಾಗಿ ರೋಹಿಣಿ ಸಿಂಧೂರಿ ಅವರು ಅಧಿಕಾರಿಯೊಬ್ಬರ ಜೊತೆಗೆ ಮಾತನಾಡಿದ್ದ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದರು. ಇದಾದ ಕೆಲವೇ ಹೊತ್ತಿನ ಬಳಿಕ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಸಂಭಾಷಣೆಯ ಆಡಿಯೋ ಕ್ಲಿಪ್ ಸಹ ಬಿಡುಗಡೆಯಾಗಿತ್ತು. ಇದರ ನಡುವೆ ಫೇಸ್ ಬುಕ್ ಲೈವ್ ಮಾಡಿದ ಸಂಸದ ಪ್ರತಾಪ್ಸಿಂಹ ಚಾಮರಾಜನಗರದಲ್ಲಿ ಸಂಭವಿಸಿದ ಆಕ್ಸಿಜನ್ ಕೊರತೆ ದುರಂತದ ಹಿಂದೆಯೇ ಹೆಸರು ಪ್ರಸ್ತಾಪಿಸದೆ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಆ ಮೂಲಕವೂ ನಿರ್ಗಮಿತ ಜಿಲ್ಲಾಧಿಕಾರಿಗೆ ಟಾಂಗ್ ನೀಡುವ ಪ್ರಯತ್ನ ಮಾಡಿದ್ದರು.

ಆಕ್ಸಿಜನ್ ಸರಬರಾಜನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆದಿದ್ದರೇ ? ಕೋರ್ಟ್ ನೇಮಿಸಿದ್ದ ಸಮಿತಿಯು ತನಿಖೆಯಲ್ಲಿ ಎಡವಿತೆ?

ಇದರ ನಡುವೆ ರೋಹಿಣಿ ಸಿಂಧೂರಿ ವಿರುದ್ಧ ಸಮರ ಮುಂದುವರಿಸಿರುವ ಶಾಸಕ ಸಾ.ರಾ. ಮಹೇಶ್, ಸ್ವಹಿತಾಸಕ್ತಿ, ಸರ್ಕಾರಿ ಹಣ ದುರುಪಯೋಗ, ಸಾರ್ವಜನಿಕ ಹಣದ ವೆಚ್ಚದ ವಿಚಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳದಿರುವುದು, ಪಾರಂಪರಿಕ ಕಟ್ಟಡಕ್ಕೆ ಧಕ್ಕೆ ಉಂಟು ಮಾಡಿರುವುದು ಮುಂತಾದ ಲೋಪಗಳನ್ನು ಹಿಂದಿನ ಜಿಲ್ಲಾಧಿಕಾರಿಗಳು ಎಸಗಿರುತ್ತಾರೆ. ಹಾಗಾಗಿ ಇವರ ವಿರುದ್ಧ ಇಲಾಖಾ ವಿಚಾರಣೆ ನಡೆಸಿ, ಕೂಡಲೇ ಅಮಾನತು ಮಾಡಬೇಕೆಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಪಾಲರು, ಕಂದಾಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪುರಾತತ್ವ ಇಲಾಖೆ ಕಾರ್ಯದರ್ಶಿ, ಮೈಸೂರು ವಿಭಾಗೀಯ ಪ್ರಾದೇಶಿಕ ಆಯುಕ್ತರಿಗೆ ದಾಖಲೆ ಸಮೇತ ಎರಡು ಪುಟಗಳ ಪತ್ರ ಬರೆದಿದ್ದಾರೆ.

  ಕರೋನಾ ಹಿನ್ನೆಲೆಯಲ್ಲಿ ಹಿಂದಿನ ಡಿಸಿ ರೋಹಿಣಿ ಸಿಂಧೂರಿ ಅವರು ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನ ಇದೀಗ ನೂತನ ಡಿಸಿ  ಹಿಂಪಡೆದಿದ್ದಾರೆ. ಆ ಮೂಲಕ ಮೈಸೂರಿನಲ್ಲಿ ಲಾಕ್ಡೌನ್ ಮತ್ತಷ್ಟು ಸಡಿಲಿಕೆಯಾಗಿದ್ದು,  ನಾಳೆಯಿಂದ ಜೂ.14ರವರೆಗೆ ಪ್ರತಿದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ರೋಹಿಣಿ ಸಿಂಧೂರಿ ಹೊರಡಿಸಿದ್ದ ಆದೇಶ ಹಿಂಪಡೆಯುವ ಮೂಲಕ ಹೊಸ  ಡಿಸಿ ಬಗಾದಿ ಗೌತಮ್ ಸಹ  ಸೆಡ್ಡು ಹೊಡೆದಿದ್ದಾರೆ. ಮೊದಲು ಆ೭ರಕ್ಕೆ ಮೂರು ದಿನ ಮಾತ್ರ ಖರೀದಿಗೆ ಅವಕಾಶ ಇದ್ದುದನ್ನು ಈಗ ವಾರದ ಎಲ್ಲಾ ದಿನ ವಿಸ್ತರಿಸಲಾಗಿದೆ. ಒಟ್ಟಾರೆ, ರೋಹಿಣಿ ಸಿಂಧೂರಿ ವಿರುದ್ಧದ ಮುಸುಕಿನ ಗುದ್ದಾಟ ಸದ್ದಿಲ್ಲದೆ ಮುಂದುವರಿದಿದ್ದು, ಈ ಎಲ್ಲಾ ಜಟಾಪಟಿ ಎಲ್ಲಿಗೆ ಬಂದು ನಿಲ್ಲುತ್ತೇ ಅನ್ನೋದೆ ಯಕ್ಷಪ್ರಶ್ನೆಯಾಗಿದೆ. 

ಈ ನಡುವೆ   ಶಾಸಕ ಸಾ. ರಾ. ಮಹೇಶ್ ಅವರು ಬೆದರಿಕೆ ಹಾಕಿ ನನ್ನ ಭೂಮಿಯನ್ನು ತಮ್ಮ ಸ್ನೇಹಿತನಿಗೆ ಕೊಡಿಸಿದ್ದಾರೆ. ದಯವಿಟ್ಟು ನಮ್ಮ ಜಮೀನನ್ನು ನನಗೆ ಬಿಡಿಸಿಕೊಡಿ ಎಂದು ಭೂ ಮಾಲೀಕರೊಬ್ಬರು ಮನವಿ ಮಾಡಿದ್ದಾರೆ.

ಭೂ ಮಾಲೀಕನಿಗೆ ಶಾಸಕ ಮಹೇಶ್ ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಈ ಕುರಿತು   ಮಾತನಾಡಿದ ಸಂತ್ರಸ್ತ ಗಣಪತಿ ರೆಡ್ಡಿ, ತಾಲ್ಲೂಕಿನ ಕೆರ್ಗಳ್ಳಿ ಸರ್ವೆ ನಂಬರ್ 115ರಲ್ಲಿ 2014ರಲ್ಲಿ 2 ಎಕರೆ ಜಮೀನನ್ನ ಖರೀದಿಸಿದ್ದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳು ನನ್ನ ಹೆಸರಿನಲ್ಲಿವೆ. ಆದ್ರೆ ಶಾಸಕ ಸಾ.ರಾ. ಮಹೇಶ್ ಅವರು ತಮ್ಮ ಸ್ನೇಹಿತ ಮಂಜುನಾಥ್ ಎಂಬುವರಿಗೆ ಆ ಜಾಗವನ್ನು ಕೊಡಿಸಿದ್ದಾರೆ. ಅಲ್ಲದೆ ತಮ್ಮ ಹುಡುಗರನ್ನು ಬಿಟ್ಟು ತಂತಿ ಬೇಲಿ ಹಾಕಿಸಿದ್ದಾರೆ ಎಂದು ದೂರಿದರು.  ಈ ಬಗ್ಗೆ ಸಾ.ರಾ. ಮಹೇಶ್ ಅವರಿಗೆ ಕರೆ ಮಾಡಿ ಕೇಳಿದ್ರೆ, ಅದು ನನ್ನ ಸ್ನೇಹಿತನಿಗೆ ಸೇರಿದ ಜಾಗ, ನಿನ್ನ ಹತ್ತಿರ ದಾಖಲಾತಿ ಇದ್ದರೆ ತೆಗೆದುಕೊಂಡು ಬಾ ಎಂದು ಹೇಳುತ್ತಾರೆ. ತಮ್ಮ ಸ್ನೇಹಿತನ ಮಾತು ಕೇಳಿ ನನ್ನ ಜಮೀನನ್ನು ಅವರಿಗೆ ಕೊಡಿಸಿದ್ದಾರೆ. ದಯವಿಟ್ಟು ನನಗೆ ನ್ಯಾಯ ಕೊಡಿಸಿ ಎಂದು ಭೂ ಮಾಲೀಕ ಗಣಪತಿ ರೆಡ್ಡಿ ಮನವಿ ಮಾಡಿದರು.

ಜೊತೆಗೆ ಈ ಬಗ್ಗೆ ಕಳೆದ 5 ತಿಂಗಳ ಹಿಂದೆಯೇ ಜೈಪುರ ಠಾಣೆಯಲ್ಲಿ ದೂರು ನೀಡಿದ್ದರೂ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಗಣಪತಿ ರೆಡ್ಡಿ ಅಳಲು ತೋಡಿಕೊಂಡರು.ಒಟ್ಟಿನಲ್ಲಿ  ರೋಹಿಣಿ ಅವರ ವರ್ಗಾವಣೆಯಿಂದಾಗಿ ಸಾಂಸ್ಕೃತಿಕ ನಗರಿಯಲ್ಲಿ ರಿಯಲ್‌ ಎಸ್ಟೇಟ್‌ ಮಾಫಿಯಾ ಸಕ್ರಿಯವಾಗಿರುವುದು ತಿಳಿದು ಬಂದಿದೆ.

Tags: MysoreRohini Sindhuri
Previous Post

ತೆಲಂಗಾಣ ರಾಜಕೀಯಕ್ಕೆ ಜಗನ್ ಸಹೋದರಿ ಎಂಟ್ರಿ– ಜುಲೈ 8 ರಂದು ನೂತನ ಪಕ್ಷ ಆರಂಭ

Next Post

ಕಾಗದದಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವ ಸರ್ಕಾರಗಳು ಕಾರ್ಯರೂಪಕ್ಕೆ ತರುವುದು ಯಾವಾಗ?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕಾಗದದಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವ ಸರ್ಕಾರಗಳು ಕಾರ್ಯರೂಪಕ್ಕೆ ತರುವುದು ಯಾವಾಗ?

ಕಾಗದದಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವ ಸರ್ಕಾರಗಳು ಕಾರ್ಯರೂಪಕ್ಕೆ ತರುವುದು ಯಾವಾಗ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada