• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
August 22, 2026
in Top Story, ಕರ್ನಾಟಕ, ರಾಜಕೀಯ
0
KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಹಾಗೂ ಎಂಎಸ್‌ಎಂಇ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

N. Chaluvaraya Swamy : ಚಲುವಣ್ಣಗೆ ಖಡಕ್‌ ಎಚ್ಚರಿಕೆ ಕೊಟ್ಟ ಜೆಡಿಎಸ್‌ ನಾಯಕ..! #pratidhvani

ಗುರುವಾರ ಬೆಳಗ್ಗೆ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದರು ಎನ್ನಲಾಗಿದೆ. ದೆಹಲಿಗೆ ತೆರಳಲು ವಿಮಾನದ ಟಿಕೆಟ್ ಕೂಡ ಬುಕ್ ಮಾಡಿದ್ದರು. ಆದರೆ ವಿಮಾನ ನಿಲ್ದಾಣಕ್ಕೆ ತೆರಳಿದ ಬಳಿಕ ಅವರು ವಿಮಾನ ಹತ್ತಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದೇ ವೇಳೆ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ.

ಕುಟುಂಬದವರಿಗೂ ಅವರೊಂದಿಗೆ ಸಂಪರ್ಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ವಿಮಾನ ನಿಲ್ದಾಣದವರೆಗಿನ ಅವರ ಚಲನವಲನ ಹಾಗೂ ಬಳಿಕ ಅವರು ಎಲ್ಲಿಗೆ ತೆರಳಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲಿಸಲಾಗುತ್ತಿದೆ. ಜ್ಞಾನೇಂದ್ರ ಕುಮಾರ್ ಅವರಿಗೆ ಈ ಹಿಂದೆ ಆರೋಗ್ಯ ಸಮಸ್ಯೆ ಇದ್ದುದಾಗಿ ತಿಳಿದುಬಂದಿದೆ. ಅವರು ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಕಾರ್ಯನಿರ್ವಹಿಸಿದ್ದರು.

DK Shivakumar : ಯಾವುದು ಡ್ಯಾಂ ಭರ್ತಿ ಆಗಿಲ್ಲ : ಸಿಎಂ ಡಿಕೆ ಶಿವಕುಮಾರ್‌..! #KRS #congress #pratidhvani

ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ವಿಚಾರವನ್ನು ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಬಳಿಕ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಸಮಯವೂ ಗಮನ ಸೆಳೆಯುತ್ತಿದೆ. ಇತ್ತೀಚೆಗೆ KPSC ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮ ಪ್ರಕರಣದ ತನಿಖೆ ನಡೆಯುತ್ತಿದ್ದು, ಬುಧವಾರ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದರು.

DK Shivakumar : ನಾಗೇಂದ್ರಗೆ ನಾನೇ ಹೇಳ್ತೀನಿ ರಾಜೀನಾಮೆ ಕೊಡೋಕೆ..!| #pratidhvani

KPSCಯಲ್ಲಿ ಜ್ಞಾನೇಂದ್ರ ಕುಮಾರ್ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಕೆಲವು ವಿಚಾರಗಳ ಬಗ್ಗೆಯೂ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ ಎನ್ನಲಾಗಿದೆ. ED ದಾಳಿ ನಡೆದ ಮರುದಿನವೇ ಅವರು ನಾಪತ್ತೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸದ್ಯ ಪೊಲೀಸರು ಅಧಿಕಾರಿಯ ಪತ್ತೆಗೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಅವರ ನಾಪತ್ತೆಯ ನಿಖರ ಕಾರಣ ಹಾಗೂ ಅವರು ಎಲ್ಲಿದ್ದಾರೆ ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

Rahul Gandh : ವಿದ್ಯಾರ್ಥಿಗಳ ವಿರುದ್ಧ ಹಲ್ಲೆ ನಡೆಸಿದವರ ವಿರುದ್ಧ ಕೊನೆಗೂ FIR ದಾಖಲು..! #FIR #delhi #police
Previous Post

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

Related Posts

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!
Top Story

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

by ಪ್ರತಿಧ್ವನಿ
August 22, 2026
0

ಬೆಂಗಳೂರು: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ‘ಅನಲಾಗ್ ಪನ್ನೀರ್’ ಅಥವಾ ನಾನ್‌-ಡೈರಿ ಪನ್ನೀರ್ ಬಳಕೆಗೆ...

Read moreDetails
ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

August 22, 2026
₹40 ಲಕ್ಷ ವೇತನ, ಹ್ಯಾಂಡ್‌ಸಮ್‌ ಹುಡುಗ; ಆದರೂ ಮದುವೆ ಪ್ರಸ್ತಾಪ ತಿರಸ್ಕರಿಸಿದ ಯುವತಿ! ಕಾರಣ ವೈರಲ್

₹40 ಲಕ್ಷ ವೇತನ, ಹ್ಯಾಂಡ್‌ಸಮ್‌ ಹುಡುಗ; ಆದರೂ ಮದುವೆ ಪ್ರಸ್ತಾಪ ತಿರಸ್ಕರಿಸಿದ ಯುವತಿ! ಕಾರಣ ವೈರಲ್

August 22, 2026
ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

August 22, 2026
ಮಂಗಳೂರಿಗೆ ರೈಲ್ವೇ ಗುಡ್‌ನ್ಯೂಸ್: ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆ

ಮಂಗಳೂರಿಗೆ ರೈಲ್ವೇ ಗುಡ್‌ನ್ಯೂಸ್: ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆ

August 22, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada