ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS office rohini sindhoori) ಹಾಗೂ ಅವರ ಪತಿ ವಿರುದ್ಧ ಬಾಲಿವುಡ್ ನ ಖ್ಯಾತ ಗಾಯಕ ಲಕ್ಕಿ ಅಲಿಯಿಂದ (Lucky Ali) ಕಂಪ್ಲೈಂಟ್ ದಾಖಲಾಗಿದೆ. ನ್ಯೂ ಯಲಹಂಕ ಟೌನ್ ಬಳಿ, ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ರೋಹಿಣಿ ಸಿಂಧೂರಿ ಒತ್ತುವರಿ ಮಾಡಿಕೊಂಡಿದ್ದಾರೆಂದು ಆರೋಪಿಸಿ ಅವರ ವಿರುದ್ಧ ದೂರು ನೀಡಲಾಗಿದೆ.
ಕರ್ನಾಟಕ ಲೋಕಾಯುಕ್ತದಲ್ಲಿ (Lokayuktha) ಈ ವಿಚಾರವಾಗಿ ಬಾಲಿವುಡ್ (Bollywood) ನ ಖ್ಯಾತ ಗಾಯಕ ಲಕ್ಕಿ ಅಲಿ ದೂರು ದಾಖಲಿಸಿದ್ದಾರೆ ಮತ್ತು ದೂರಿನ ಪ್ರತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ದೂರು ಸಲ್ಲಿಸಿದ್ದ ಲಕ್ಕಿ ಅಲಿ,ತಮ್ಮ ಟ್ರಸ್ಟ್ ಜಮೀನನ್ನು ಸುಧೀರ್ ರೆಡ್ಡಿ (Sudheer reddy) ಹಾಗೂ ಮಧುಸೂಧನ್ ರೆಡ್ಡಿ (Madhusudhan reddy) ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಒತ್ತುವರಿಗೆ ರೋಹಿಣಿ ಸಿಂಧೂರಿ ಸಹಕಾರ ಕೊಟ್ಟಿದ್ದಾರೆ ಎಂಬುದು ಇವರ ಆರೋಪ.
ಹಗರಣದಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ ಎಂದು ದೂರಿರುವ ಲಕ್ಕಿ, ರೋಹಿಣಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.