ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಒಂದೇ ವಾರಕ್ಕೆ, ಬಸವರಾಜ ಬೊಮ್ಮಾಯಿಯವರು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ.
ಕರ್ನಾಟಕ ಕೆಡರ್ 1997ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಡಾ. ಸೆಲ್ವಕುಮಾರ್ ಅವರನ್ನು ಸಿಎಂ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿದ್ದು, ಡಿಪಾರ್ಟ್ಮೆಂಟ್ ಆಫ್ ಸ್ಕಿಲ್ ಡೆವೆಲಪ್ಮೆಂಟ್ ನ ಸೆಕ್ರೇಟರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಇನ್ನೋರ್ವ ಐಎಎಸ್ ಅಧಿಕಾರಿ ಪೊನ್ನುರಾಜ್ ಅವರನ್ನು ಡಾ.ಸೆಲ್ವಕುಮಾರ್ ಅವರನ್ನು ವರ್ಗಾವಣೆ ಮಾಡಿದ ಸಿಎಂ ಸೆಕ್ರೇಟರಿ ಹುದ್ದೆಗೆ ನೇಮಕ ಮಾಡಲಾಗಿದೆ. ಜೊತೆಗೆ ಕೆಪಿಸಿಎಲ್ ಎಂಡಿಯಾಗಿಯೂ ಹೆಚ್ಚುವರಿ ಹುದ್ದೆಯನ್ನು ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.