ಇಸ್ರೇಲ್ ಪ್ರಧಾನಿ (Israel) ಬೆಂಜಮಿನ್ ನೆತನ್ಯಾಹು ಹಾಗೂ ಇಸ್ರೇಲ್ನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ಬಂಧನ ವಾರೆಂಟ್ ಹೊರಡಿಸಿದೆ.
ಪ್ಯಾಲಸ್ಟೀನ್ ನ ಗಾಜಾ ಪಟ್ಟಿಯಲ್ಲಿನ ಯುದ್ಧದಲ್ಲಿ, 2023ರ ಅಕ್ಟೋಬರ್ ನಲ್ಲಿ ನಡೆದ ಘರ್ಷಣೆಗಳಲ್ಲಿ ಯುದ್ಧಾಪರಾಧ, ಹಾಗೂ ಮಾನವೀಯತೆಯ ವಿರುದ್ಧ ಅಪರಾಧ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕೋರ್ಟ್ ನೆತನ್ಯಾಹು ಹಾಗೂ ಗ್ಯಾಲಂಟ್ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿದೆ.