• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂಬೇಡ್ಕರ್ ಹುಟ್ಟದೇ ಇರುತ್ತಿದ್ದರೆ ನಾನು ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು’ :ಕೇಂದ್ರ ಸಚಿವ ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರ.!(VIDEO)

ಪ್ರತಿಧ್ವನಿ by ಪ್ರತಿಧ್ವನಿ
December 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು :ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೊಂದು ಬಹಿರಂಗ ಪತ್ರ ಬರೆದಿದ್ದಾರೆ.

ADVERTISEMENT

ಸಿಎಂ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ?

ಸನ್ಮಾನ್ಯ ಅಮಿತ್ ಶಾ ಅವರೇ, ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ ಅಂತರಂಗದ ಅರಿವಾಗಿದೆ.. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್ ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ್ಮ ಧಾಷ್ಟ್ರಕ್ಕೆ ಶಹಭಾಸ್ ಅನ್ನಲೇಬೇಕು..

ಅಮಿತ್ ಶಹಾ ಅವರೇ, ”ಬಾಬಾಸಾಹೇಬರ ಬಗ್ಗೆ ತಮಗೆ ಅಪಾರ ಅಭಿಮಾನ ಇದೆ, ಗೌರವ ಇದೆ, ನನ್ನ ಮಾತುಗಳನ್ನು ತಿರುಚಲಾಗಿದೆ” ಎಂದೆಲ್ಲ ಸ್ಪಷ್ಟೀಕರಣ ಕೊಟ್ಟು ಆತ್ಮವಂಚನೆ ಮಾಡಿಕೊಳ್ಳಬೇಡಿ. ಅದನ್ನು ಸಮರ್ಥಿಸಿಕೊಂಡು ದೇಶವನ್ನು ಎದುರಿಸಿ.

ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ.

ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು.ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ.

ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ‍್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ.

ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಯಾಕೆ ತಿರಸ್ಕರಿಸಿತ್ತು? ಆರ್ ಎಸ್ ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ. ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು, ಆದರೆ ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ.

ನಿಮ್ಮ ಮಾತಿನ ಧಾಟಿಯಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ. ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು, ಕೇವಲ ಅಧಿಕಾರದಲ್ಲಿ ಉಳಿಯಲಿಕ್ಕಾಗಿ ಮಾಡಿರುವ ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: "An Open Letter to Union Home Minister Amit Shah"Baba Saheb Ambedkar beforeCM SiddaramaiahCongress PartyDear Amit Shahgraze cattle and sheepModi…Modi..Modi.
Previous Post

ಕಾಂಗೋದಲ್ಲಿ ದೋಣಿ ಮಗುಚಿ 25 ಜನರು ಸಾವು; ಡಜನ್‌ಗಟ್ಟಲೆ ಜನ ನಾಪತ್ತೆ

Next Post

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ – ನೇರಪ್ರಸಾರ

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ - ನೇರಪ್ರಸಾರ

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada