• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗದೆ ಹೋಗಿದ್ದರೆ ನಮಗೆ ಇಂಥಾ ಶ್ರೇಷ್ಠ ಸಂವಿಧಾನ ಸಿಗುತ್ತಿರಲಿಲ್ಲ: ಸಿದ್ದರಾಮಯ್ಯ

Any Mind by Any Mind
October 3, 2021
in ಕರ್ನಾಟಕ
0
ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗದೆ ಹೋಗಿದ್ದರೆ ನಮಗೆ ಇಂಥಾ ಶ್ರೇಷ್ಠ ಸಂವಿಧಾನ ಸಿಗುತ್ತಿರಲಿಲ್ಲ:  ಸಿದ್ದರಾಮಯ್ಯ
Share on WhatsAppShare on FacebookShare on Telegram

ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗದೆ ಹೋಗಿದ್ದರೆ ನಮಗೆ ಇಂಥಾ ಶ್ರೇಷ್ಠ ಸಂವಿಧಾನ ಸಿಗುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಭಾನುವಾರ ಆಯೋಜಿಸಿದ್ದ ಗಾಣಿಗ ಸಮುದಾಯದ ಕಾರ್ಯಾಗಾರವನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, “ಶಿಕ್ಷಣ, ಸಂಘಟನೆ ಮತ್ತು ಹೋರಾಟ” ಎಂಬ ಮೂರು ಸೂತ್ರಗಳನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶೋಷಿತ ವರ್ಗದ ಜನರಿಗೆ ನೀಡಿದ್ದಾರೆ. ಒಂದು ವೇಳೆ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗದೆ ಹೋಗಿದ್ದರೆ ನಮಗೆ ಇಂಥಾ ಶ್ರೇಷ್ಠ ಸಂವಿಧಾನ ಸಿಗುತ್ತಿರಲಿಲ್ಲ. ಸಂವಿಧಾನವು ಸಮಾನತೆಗೆ ಅವಕಾಶ ನೀಡಿರುವುದರಿಂದ ಇಂದು ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುತ್ತಾರೆ. ಇಂಥವರ ಬಗ್ಗೆ ತಳ ಸಮುದಾಯಗಳು ಜಾಗ್ರತೆ ವಹಿಸಬೇಕು ಎಂದು ಹೇಳಿದ್ದಾರೆ.

ಅವಕಾಶಗಳಿಂದ ವಂಚಿತವಾಗಿರುವ ಸಮುದಾಯಗಳು ತಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಪರಿಹಾರ ಕಂಡುಕೊಳ್ಳುವುದು ಇಂದಿನ ಕಾಲಘಟ್ಟದಲ್ಲಿ ಅತಿ ಅಗತ್ಯ. ಶತಮಾನಗಳ ಹಿಂದೆ ವ್ಯಕ್ತಿಯ ಕಾಯಕದ ಆಧಾರದ ಮೇಲೆ ಜಾತಿ ನಿರ್ಮಾಣ ಮಾಡಲಾಗಿದೆ. ಈ ಚರ್ತುವರ್ಣ ವ್ಯವಸ್ಥೆ ನಮ್ಮ ನಡುವೆ ಇನ್ನೂ ಜೀವಂತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಶೋಷಿತ ಸಮುದಾಯಗಳು ಶಿಕ್ಷಣ ಪಡೆದಿರುವುದರಿಂದ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಮಾತನಾಡುವ ಧೈರ್ಯ ಬಂದಿದೆ. ಇಂತಹ ವ್ಯವಸ್ಥೆ ಹಿಂದೆ ಇರಲಿಲ್ಲ. ಕೆಲವರು ಜಾತಿ ಸಮ್ಮೇಳನಗಳನ್ನು ಮಾಡೋದು ತಪ್ಪು ಎನ್ನುತ್ತಾರೆ. ಮುಂದೆ ತಮ್ಮ ವಿರುದ್ಧವೇ ಧ್ವನಿ ಎತ್ತಬಹುದು ಎಂಬ ಹತಾಶೆ ಇದಕ್ಕೆ ಕಾರಣ.

ಅವಕಾಶದಿಂದ ವಂಚಿತರಾದ ಜಾತಿಗಳು ಜಾತಿ ಸಮ್ಮೇಳನಗಳನ್ನು ನಡೆಸಿ, ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರೆ ಅದು ಜಾತೀಯತೆಯಾಗಲ್ಲ, ಸಮಾಜದ ಸಂಪತ್ತನ್ನು ಅನುಭವಿಸುವ ಸಮುದಾಯಗಳು ಜಾತಿ ಸಮ್ಮೇಳನಗಳನ್ನು ನಡೆಸಿದರೆ ಮಾತ್ರ ಅದು ಜಾತೀಯತೆ ಆಗುತ್ತದೆ ಎಂದು ಲೋಹಿಯಾ ಹೇಳಿದ್ದರು ಎಂದು ಈ ವೇಳೆ ಸ್ಮರಿಸಿದರು.

ನನ್ನ ತಂದೆ, ತಾಯಿ ಶಿಕ್ಷಣದಿಂದ ವಂಚಿತರಾಗಿದ್ದರು. ನಾನು ಕಾನೂನು ಪದವಿ ಗಳಿಸಿದ್ದಕ್ಕೆ ಇಂದು ಸಮಾಜದಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡಲು ಸಾಧ್ಯವಾಗಿದೆ. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯಎಂದು ಹೇಳಿದ್ದಾರೆ.

“ಶಿಕ್ಷಣ, ಸಂಘಟನೆ ಮತ್ತು ಹೋರಾಟ” ಎಂಬ ಮೂರು ಸೂತ್ರಗಳನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶೋಷಿತ ವರ್ಗದ ಜನರಿಗೆ ನೀಡಿದ್ದಾರೆ. ಒಂದು ವೇಳೆ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗದೆ ಹೋಗಿದ್ದರೆ ನಮಗೆ ಇಂಥಾ ಶ್ರೇಷ್ಠ ಸಂವಿಧಾನ ಸಿಗುತ್ತಿರಲಿಲ್ಲ. ಸಂವಿಧಾನವು ಸಮಾನತೆಗೆ ಅವಕಾಶ ನೀಡಿರುವುದರಿಂದ ಇಂದು ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುತ್ತಾರೆ. ಇಂಥವರ ಬಗ್ಗೆ ತಳ ಸಮುದಾಯಗಳು ಜಾಗ್ರತೆ ವಹಿಸಬೇಕು.

ಹಿಂದೆ ಮೀಸಲಾತಿ ವಿರೋಧಿಸುತ್ತಿದ್ದವರು ಈಗ ಅದರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದಾರೆ. ಇದಕ್ಕೆ ಕಾರಣ ಸಮಾಜದ ಎಲ್ಲಾ ಜಾತಿಗಳು ಮೀಸಲಾತಿ ಅಡಿಯಲ್ಲಿ ಬಂದಿರುವುದು. ಮೀಸಲಾತಿ ಈಗ 60% ಆಗಿದೆ. ಮೇಲ್ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೂ 10% ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

1992ರಲ್ಲಿ ಇಂದಿರಾ ಸಹಾನಿ ಪ್ರಕರಣದಲ್ಲಿ 9 ಮಂದಿ ನ್ಯಾಯಾಧೀಶರ ವಿಭಾಗೀಯ ಪೀಠವು ಮಂಡಲ್ ಕಮಿಷನ್‌ ವರದಿಯನ್ನು ಎತ್ತಿಹಿಡಿದಿತ್ತು. ಈ ವರದಿ ಜಾರಿಯಾದ ಮೇಲೆ ಹಿಂದುಳಿದ ಜಾತಿಗಳಿಗೆ 27% ಮೀಸಲಾತಿ ಸಿಕ್ಕಿತ್ತು.  ಇದು ಜಾರಿಯಾಗಬಾರದು ಎಂದು ವಿರೋಧ ಮಾಡಿದವರು ಬಿಜೆಪಿಯ ಲಾಲ್ ಕೃಷ್ಣ ಅಡ್ವಾಣಿ ಅವರು ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ಮೊದಲ ಬಾರಿಗೆ ಮೀಸಲಾತಿ ನೀಡಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಒಡೆಯರ್ ಅವರು ಮಿಲ್ಲರ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಮಾಡಿ, ಅದರ ಶಿಫಾರಸನ್ನು ಜಾರಿ ಮಾಡಿದರು. ಬ್ರಾಹ್ಮಣರಿಗೆ 25%, ಬ್ರಾಹ್ಮಣೇತರರಿಗೆ 75% ಮೀಸಲಾತಿ ನೀಡಿದರು. ಇದನ್ನು ಸ್ವಾತಂತ್ರ್ಯ ಬಂದ ಮೇಲೆ ತೆಗೆದುಹಾಕಲಾಯಿತು.

ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಯಾದ ದೇವರಾಜ ಅರಸು ಅವರು ಮೀಸಲಾತಿ ಸಂಬಂಧ ಆಯೋಗ ರಚನೆ ಮಾಡಿ, ಅದರ ಶಿಫಾರಸ್ಸಿನಂತೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಜಾರಿ ಮಾಡಿದರು.

ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಹಾಗೂ 74 ನೇ ತಿದ್ದುಪಡಿ ತಂದು ರಾಜಕೀಯ ಮೀಸಲಾತಿಯನ್ನು ಘೋಷಿಸಿದರು. ನಂತರ ಇದು ನರಸಿಂಹ ರಾವ್ ಅವರ ಕಾಲದಲ್ಲಿ ಜಾರಿಯಾಯಿತು. ಕಾಂಗ್ರೆಸ್ ಪಕ್ಷ ಹಿಂದುಳಿದವರಿಗೆ, ಮಹಿಳೆಯರಿಗೆ ಮೀಸಲಾತಿ ನೀಡಿದಾಗ ಅದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದವರು ಬಿಜೆಪಿಯ ರಾಮಾ ಜೋಯ್ಸ್. ಆದರೆ ಸುಪ್ರೀಂ ಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತು.

ಸರ್ಕಾರಿ ಹಾಸ್ಟೆಲ್ ಗಳಲ್ಲಿ ಸೀಟ್ ಸಿಗದ ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಿಗೆ ಪ್ರತೀ ತಿಂಗಳು ರೂ.1500 ನೀಡುವ ವಿದ್ಯಾಸಿರಿ ಯೋಜನೆ ಜಾರಿಮಾಡಿದ್ದೆ. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಮೇಲೆ ಈ ಯೋಜನೆಯನ್ನು ನಿಲ್ಲಿಸಿದೆ. ಬಿಜೆಪಿ ಪಕ್ಷ ಹಿಂದುಳಿದ ಸಮಾಜಕ್ಕೆ ಮೇಲಿಂದ ಮೇಲೆ ಅನ್ಯಾಯ ಮಾಡುತ್ತಿದ್ದರೂ ಪ್ರಶ್ನೆ ಮಾಡದೆ ಸುಮ್ಮನಿದ್ರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಅರ್ಜುನ್ ಸಿಂಗ್ ಅವರು ಉನ್ನತ ಶಿಕ್ಷಣದಲ್ಲೂ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಬೇಕು ಎಂದು ಆದೇಶ ಹೊರಡಿಸಿದರು. ಬಸವಣ್ಣ, ಬುದ್ಧ ಜಾತಿ ವ್ಯವಸ್ಥೆ ಅಳಿದು ಸಮ ಸಮಾಜ ನಿರ್ಮಾಣವಾಗಬೇಕು ಎಂದು ಸಾರಿದರು. ಇದೇ ಕಾರಣಕ್ಕೆ ಬಸವಣ್ಣ ಅನುಭವ ಮಂಟಪ ನಿರ್ಮಾಣ ಮಾಡಿದ್ದರು. ಇಂದು ಇವ ನಮ್ಮವ, ಇವ ನಮ್ಮವ ಎನ್ನುತ್ತಲೇ ನಿನ್ನ ಜಾತಿ ಯಾವುದು ಎಂದು ಕೇಳುತ್ತಾರೆ. ಇದು ಸಮಾಜದ ವಾಸ್ತವ ಸ್ಥಿತಿ.

ನಾನು ಕಷ್ಟಪಟ್ಟು ಮೀಸಲಾತಿ ರಥವನ್ನು ಇಲ್ಲಿಯವರೆಗೆ ಎಳೆದು ತಂದಿದ್ದೇನೆ. ಸಾಧ್ಯವಾದರೆ ಮುಂದಕ್ಕೆ ಎಳೆಯಿರಿ, ಇಲ್ಲವಾದರೆ ಅಲ್ಲಿಯೇ ಬಿಟ್ಟುಬಿಡಿ, ದಯವಿಟ್ಟು ರಥವನ್ನು ಹಿಂದಕ್ಕೆ ಮಾತ್ರ ಎಳೆಯಬೇಡಿ ಎಂದು ಮನವಿ ಮಾಡುತ್ತೇನೆಂದು ಹೇಳಿದ್ದಾರೆ.

1931 ರಲ್ಲಿ ಕಡೇ ಬಾರಿ ಜಾತಿಗಣತಿ ಆಗಿತ್ತು. ಮೀಸಲಾತಿ ವಿಚಾರ ನ್ಯಾಯಾಲಯದ ಮುಂದೆ ಬಂದಾಗಲೆಲ್ಲ ಜಾತಿ ಜನಸಂಖ್ಯೆಗೆ ಸಂಬಂಧಿಸಿದಂತೆ ನಿಮ್ಮ ಬಳಿಯಿರುವ ಅಧಿಕೃತ ದಾಖಲೆ ಏನು ಎಂದು ನ್ಯಾಯಾಲಯ ಪ್ರಶ್ನಿಸುತ್ತಿತ್ತು. ಈ ಕಾರಣಕ್ಕೆ ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಆದೇಶಿಸಿದ್ದೆ. ಯಾವ ಜಾತಿಗೂ ಅನ್ಯಾಯ ಮಾಡುವುದು ಈ ಸಮೀಕ್ಷೆಯ ಉದ್ದೇಶವಲ್ಲ. ಜಾತಿ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯಕ್ರಮ ರೂಪಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.

ನಾನು ಮುಖ್ಯಮಂತ್ರಿ ಆಗಿದ್ದಾಗ ವರದಿ ಸಿದ್ದಗೊಂಡಿರಲಿಲ್ಲ. ಈಗ ವರದಿ ಸಿದ್ದವಾಗಿದೆ. ಇದನ್ನು ಈಗಿನ ಸರ್ಕಾರವೂ ಸ್ವೀಕರಿಸುವಂತೆ ಕಾಣುತ್ತಿಲ್ಲ ಹಾಗಾಗಿ ನಾವು ಮತ್ತೆ ಅಧಿಕಾರಕ್ಕೆ ಬಂದಮೇಲೆ ವರದಿ ಸ್ವೀಕರಿಸುತ್ತೇವೆ. ಈಗಿನ ಯಾವ ಸರ್ಕಾರಗಳಿಗೂ ಬದ್ಧತೆಯಿಲ್ಲ ಎಂದು ಕಿಡಿಕಾರಿದ್ದಾರೆ.

ಗಾಣಿಗರು ಬಹಳ ಹಿಂದುಳಿದ ಸಮಾಜದವರು. ಈಗ ಆಧುನಿಕ ಯಂತ್ರಗಳು ಬಂದಮೇಲೆ ಈ ಸಮಾಜದ ಉದ್ಯೋಗವನ್ನು ಕಸಿದುಕೊಂಡಿದೆ. ಈ ಸಮಾಜದವರು ಬರೀ ಎಣ್ಣೆ ತೆಗಿಯುವ ಉದ್ಯೋಗಕ್ಕೆ ಜೋತುಬೀಳದೆ ಶಿಕ್ಷಣದ ಕಡೆಗೆ ಹೆಚ್ಚು ಮಹತ್ವ ನೀಡಿ, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗ ಪಡೆಯುವ ಪ್ರಯತ್ನ ಮಾಡಬೇಕು ಎಂದು ಈ ವೇಳೆ ಸಲಹೆ ನೀಡಿದ್ದಾರೆ.

ಜಾತಿಯಿಂದ ಯಾರೂ ಬುದ್ದಿವಂತರೂ ಅಲ್ಲ, ದೊಡ್ಡವರೂ ಅಲ್ಲ. ರಾಮಾಯಣ, ಮಹಾಭಾರತ ಬರೆದವರು ಕೂಡ ಸಮಾಜದಿಂದ ಶೋಷಣೆಗೊಳಪಟ್ಟ ಜಾತಿಗೆ ಸೇರಿದವರೆ. ಹೀಗಾಗಿ ಜಾತಿಯಿಂದ ಜ್ಞಾನ, ಸಾಮರ್ಥ್ಯ ನಿರ್ಧಾರವಾಗಲ್ಲ ಎಂಬುದನ್ನು ಎಲ್ಲರೂ ನೆನಪಿನಲ್ಲಿಟ್ಟುಕೊಂಡು ಸಾಧನೆಯ ಕಡೆಗೆ ಗಮನ ನೀಡಬೇಕು ಎಂದು ಹೇಳಿದ್ದಾರೆ.

Tags: BJPCaste CensusCaste PoliticsCongress PartyCovid 19Dr. BR AmbedkarReservationಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಮಕೃಷ್ಣ ಉಪಾಧ್ಯ ಅವರ ಡಿಕೆ ರವಿ ದುರಂತ ಕಥೆಯ ʼನಗ್ನಸತ್ಯʼ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು

Next Post

ಉತ್ತರ ಪ್ರದೇಶ: ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಾಯಿಸಿದ ಕೇಂದ್ರ ಸಚಿವನ ಮಗ; ಇಬ್ಬರ ಸಾವು, 8ಜನ ರೈತರಿಗೆ ಗಂಭೀರ ಗಾಯ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ಉತ್ತರ ಪ್ರದೇಶ:  ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಾಯಿಸಿದ ಕೇಂದ್ರ ಸಚಿವನ ಮಗ; ಇಬ್ಬರ ಸಾವು, 8ಜನ ರೈತರಿಗೆ ಗಂಭೀರ ಗಾಯ

ಉತ್ತರ ಪ್ರದೇಶ: ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಾಯಿಸಿದ ಕೇಂದ್ರ ಸಚಿವನ ಮಗ; ಇಬ್ಬರ ಸಾವು, 8ಜನ ರೈತರಿಗೆ ಗಂಭೀರ ಗಾಯ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!