ಮೈಸೂರು : ಮೈಸೂರು – ಬೆಂಗಳೂರು ದಶಪಥದ ರಸ್ತೆಯ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ವಾಹನ ದಟ್ಟಣೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಮಸ್ಯೆ ನಿವಾರಣೆ ಮಾಡುವ ಸಲುವಾಗಿ ಸಂಸದ ಪ್ರತಾಪ್ ಸಿಂಹ ಸ್ಥಳ ಪರಿಶೀಲನೆ ನಡೆಸಿದ್ರು.
ಇದಾದ ಬಳಿಕ ಮೈಸೂರು ಹೊರವಲಯದ ಖಾಸಗಿ ಹೋಟೆಲ್ ಒಂದರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮೈಸೂರು – ಕೊಡಗು ಅಭಿವೃದ್ಧಿಗಾಗಿ ನಾನು ಯಾರ ಕಾಲು ಬೇಕಿದ್ದರೂ ಹಿಡಿಯುತ್ತೇನೆ. ಸಿದ್ದರಾಮಯ್ಯರನ್ನೂ ನಾನು ಭೇಟಿ ಮಾಡುತ್ತೇನೆ . ಅಭಿವೃದ್ಧಿ ಪರವಾಗಿ ಇರುವವರನ್ನು ಸಿದ್ದರಾಮಯ್ಯ ಮೈಸೂರು ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ವಿಧಾನಸಭಾ ಚುನಾವಣಾ ಫಲಿತಾಂಶದ ವಿಚಾರವಾಗಿಯೂ ಮಾತನಾಡಿದ ಅವರು, ಇದರಿಂದ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪ್ರಭಾವ ಬೀರೋದಿಲ್ಲ. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಅಂದು ಎಚ್ಚೆತ್ತುಕೊಂಡಿದ್ದರೆ ಇಂದು ಬಿಜೆಪಿಗೆ ಈ ಸ್ಥಿತಿ ಬರುತ್ತಿರಲಿಲ್ಲ. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಮುಂದಿನ ತಲೆಮಾರನ್ನು ಅಪಾಯಕ್ಕೆ ತಳ್ಳದೇ ಇರಲಿ ಎಂದಿದ್ದಾರೆ.
ಕಾಮಗಾರಿಗೆ ಹಣ ಬಿಡುಗಡೆಗೆ ರಾಜ್ಯ ಸರ್ಕಾರ ತಡೆ ನೀಡಿರುವ ವಿಚಾರವಾಗಿಯೂ ಮಾತನಾಡಿದ ಅವರು, ಎಷ್ಟು ಪರ್ಸಂಟ್ ಕಮಿಷನ್ಗಾಗಿ ಕಾಯುತ್ತಿದ್ದೀರಾ..? ಪರ್ಸಟೇಂಜ್ಗಾಗಿ ಈ ರೀತಿ ಮಾಡಿದ್ದೀರಾ..? ಎಂದು ಪ್ರಶ್ನೆ ಮಾಡಿದರು.