ಶಿವಮೊಗ್ಗ : ಶಿವಮೊಗ್ಗ ಕ್ಷೇತ್ರದಲ್ಲಿ ಚೆನ್ನಬಸಪ್ಪನನ್ನು ಗೆಲ್ಲಿಸಿದ್ರೆ ನೀವು ನನ್ನನ್ನೇ ಗೆಲ್ಲಿಸಿದಂತೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ನಡೆದ ತಮಿಳು ಭಾಂಧವರ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಚೆನ್ನಬಸಪ್ಪ 60 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲು ನೀವೆಲ್ಲ ಸಹಕರಿಸಬೇಕು ಎಂದಿದ್ದಾರೆ.

ನಾನು ಶಿವಮೊಗ್ಗದಲ್ಲಿ ಏಳು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು ಇದರಲ್ಲಿ ಐದು ಬಾರಿ ಗೆದ್ದಿದ್ದೇನೆ. ನನ್ನ ಗೆಲುವಿಗೆ ಚೆನ್ನಬಸಪ್ಪನಂತಹ ಸಾವಿರಾರು ಕಾರ್ಯಕರ್ತರು ಶ್ರಮವಹಿಸಿದ್ದಾರೆ. ಈಗ ಪಕ್ಷ ಚೆನ್ನಬಸಪ್ಪರಿಗೆ ಅವಕಾಶ ಮಾಡಿಕೊಟ್ಟಿದೆ. ಅವರು ಗೆದ್ದರೆ ನಾನು ಗೆದ್ದಂತೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಗ್ಗೆಯೂ ಮಾತನಾಡಿದ ಅವರು, ಅಣ್ಣಾಮಲೈ ಅವರು ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ರು.ಈಗ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ಕಟ್ಟುವ ಕೆಲಸ ಮಾಡ್ತಿದ್ದಾರೆ ಎಂದು ಕೊಂಡಾಡಿದ್ರು .