• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಿಂಗಳಿಗೆ 10 ಕೆಜಿ ಅಕ್ಕಿ ಉಚಿತ

ಪ್ರತಿಧ್ವನಿ by ಪ್ರತಿಧ್ವನಿ
February 24, 2023
in Top Story, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಿಂಗಳಿಗೆ 10 ಕೆಜಿ ಅಕ್ಕಿ ಉಚಿತ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳ ಪ್ರತೀ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಕಾಂಗ್ರೆಸ್‌ ಪಕ್ಷ ಘೋಷಿಸಿದೆ.

ADVERTISEMENT

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಿದರು.

ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ ಮಾಸಿಕ  2,000 ನೆರವು ಹಾಗೂ 200 ಯೂನಿಟ್‌’ವರೆಗೆ ಉಚಿತ ವಿದ್ಯುತ್‌ ಪೂರೈಸುವ ‘ಗ್ಯಾರಂಟಿ’ ಭರವಸೆಗಳ ಜೊತೆಗೆ ಮೂರನೆಯದಾಗಿ ತಲಾ 10 ಕೆ.ಜಿ. ಅಕ್ಕಿಯ ಭರವಸೆಯನ್ನು ಪ್ರಕಟಿಸಿದೆ.

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರ್ಕಾರ ಜಾರಿಗೊಳಿಸಿದ ಆಹಾರ ಭದ್ರತಾ ಕಾಯ್ದೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಪ್ರತೀ ಕೆ.ಜಿ.ಗೆ  3ರ ದರದಲ್ಲಿ ಅಕ್ಕಿ ಒದಗಿಸುತ್ತಿತ್ತು. 2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಬಿ‍ಪಿಎಲ್‌ ಕುಟುಂಬಗಳಿಗೆ ಪ್ರತೀ ಕೆ.ಜಿ.ಗೆ  1ರ ದರದಲ್ಲಿ 30 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿತ್ತು. ನಂತರ ಉಚಿತವಾಗಿ ಪ್ರತಿ ಸದಸ್ಯರಿಗೆ ತಲಾ 7 ಕೆ.ಜಿ. ವಿತರಿಸಲಾಗುತ್ತಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅದನ್ನು 5 ಕೆ.ಜಿ.ಗೆ ಇಳಿಸಿದೆ ಎಂದರು.

ಈಗ ಅಕ್ಕಿ ವಿತರಣೆಗೆ  4,000 ಕೋಟಿಯಿಂದ  5,000 ಕೋಟಿಯವರೆಗೆ ವೆಚ್ಚವಾಗುತ್ತಿದೆ. ತಲಾ 10 ಕೆ.ಜಿ. ವಿತರಿಸಿದರೆ ಇನ್ನೂ  4,000 ಕೋಟಿ ಹೆಚ್ಚಿನ ವೆಚ್ಚವಾಗಬಹುದು. ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂಬುದು ಕಾಂಗ್ರೆಸ್‌ ಪಕ್ಷದ ಉದ್ದೇಶ ಎಂದು ಹೇಳಿದರು.

ಡಿ.ಕೆ. ಶಿವಕುಮಾರ್‌ ಮಾತನಾಡಿ, ಅನ್ನಭಾಗ್ಯ ಜನರಿಂದ ಕೋವಿಡ್‌ ಸಂಕಷ್ಟದ ಕಾಲದಲ್ಲಿ ಜನರಿಗೆ ನೆರವಾಯಿತು. ಈಗ ಪಕ್ಷ ಅಧಿಕಾರಕ್ಕೆ ಬಂದರೆ ತಲಾ 10 ಕೆ.ಜಿ. ಅಕ್ಕಿ ವಿತರಿಸಲಾಗುವುದು ಎಂದು ಹೇಳಿದರು.

ನಾವು ಸದನದಲ್ಲಿ ಇಲ್ಲದ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳ್ಳು ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ವಿರೋಧ ಪಕ್ಷದಲ್ಲಿದ್ದ ಇವರು ಆಗ ಕಡಲೆಪುರಿ ತಿನ್ನುತ್ತಿದ್ದರೆ? ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಏಕೆ ಕ್ರಮ ಜರುಗಿಸಿಲ್ಲ ಎಂದು ಪ್ರಶ್ನಿಸಿದರು.

Tags: Anna BhagyaCongress PartyD K ShivakumarM B Patilಸಿದ್ದರಾಮಯ್ಯ
Previous Post

DHRUVA SARJA | MARTIN | |ಪ್ಯಾನ್ ಇಂಡಿಯಾ ಅಂತ ಅನೌನ್ಸ್ ಮಾಡೋದು ದೊಡ್ಡದಲ್ಲ..!

Next Post

HDKUMARASWAMY | BPL ಕಾರ್ಡ್ ಹೊಂದಿದವರಿಗೆ 3ನೇ ಗ್ಯಾರೆಂಟಿ ಕಾಂಗ್ರೆಸ್ ಘೋಷಣೆ..! #PRATIDHVANI

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
HDKUMARASWAMY | BPL ಕಾರ್ಡ್ ಹೊಂದಿದವರಿಗೆ 3ನೇ ಗ್ಯಾರೆಂಟಿ ಕಾಂಗ್ರೆಸ್ ಘೋಷಣೆ..! #PRATIDHVANI

HDKUMARASWAMY | BPL ಕಾರ್ಡ್ ಹೊಂದಿದವರಿಗೆ 3ನೇ ಗ್ಯಾರೆಂಟಿ ಕಾಂಗ್ರೆಸ್ ಘೋಷಣೆ..! #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada