ಮೈಸೂರು : ಬಜರಂಗಳ ನಿಷೇಧ ಮಾಡುತ್ತೇವೆ ಎಂಬ ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಕೂಡ ಮಾತನಾಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಸಾಮಾ ಬಿನ್ ಲಾಡೆನ್ ಹಾಗೂ ಮುಲ್ಲಾ ಉಮಾರ್ ನೇತೃತ್ವದ ಮತ್ತೊಂದು ತಾಲಿಬಾನ್ ಸರ್ಕಾರ ರಚನೆಯಾಗುತ್ತೆ ಅಂತಾ ಕಿಡಿಕಾರಿದ್ದಾರೆ.

ಶಿವ ಬೆಟ್ಟವನ್ನು ಏಸು ಬೆಟ್ಟ ಮಾಡಿದ ಡಿಕೆಶಿವಕುಮಾರ್ ಹಾಗೂ ಹನುಮಂತನ ಜನ್ಮದಿನವನ್ನು ಪ್ರಶ್ನೆ ಮಾಡುವ ಸಿದ್ದರಾಮಯ್ಯನಂತವರಿಂದ ಇನ್ಯಾವ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಇವರು ಅಧಿಕಾರಕ್ಕೆ ಬಂದರೆ ಪಿಎಫ್ಐ ಬ್ಯಾನ್ ತೆಗೆದು ಬಜರಂಗದಳ ಬ್ಯಾನ್ ಮಾಡುತ್ತಾರೆ. ಕರ್ನಾಟಕದಲ್ಲಿ ಬಜರಂಗದಳದವರು ಹಿಂದುತ್ವಕ್ಕಾಗಿ, ಗೋ ಮಾತೆಗಾಗಿ ಹೋರಾಡಿದ್ದಾರೆ. ಇಂತವರಿಗೆ ಕಾಂಗ್ರೆಸ್ ಹೊಸಕಿ ಹಾಕುವುದು ಕಷ್ಟವೇನಲ್ಲ ಎಂದು ವಾರ್ನಿಂಗ್ ನೀಡಿದ್ದಾರೆ.