• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ ಇನ್ನೂ ಹೆಚ್ಚು ಶಕ್ತಿ ಬರುತ್ತೆ:ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 5, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ ಇನ್ನೂ ಹೆಚ್ಚು ಶಕ್ತಿ ಬರುತ್ತೆ:ಸಿದ್ದರಾಮಯ್ಯ
Share on WhatsAppShare on FacebookShare on Telegram

ಶಿಗ್ಗಾಂವ್: ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.

ADVERTISEMENT

ಹುಲಗೂರ ಗ್ರಾಮದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಅವರನ್ನು ಗೆಲ್ಲಿಸಿ ಎಂದರು.

ಕೊರೋನಾ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬಸವರಾಜ ಬೊಮ್ಮಾಯಿ.ಸತ್ತ ಹೆಣಗಳ‌ ಲೆಕ್ಕದಲ್ಲೂ ಲಂಚ ಪಡೆದ ಏಕೈಕ ಸರ್ಕಾರ ಬೊಮ್ಮಾಯಿ ಅವರದ್ದಾಗಿತ್ತು. ಕೋವಿಡ್ ಸಂದರ್ಭದಲ್ಲೂ, ಸಂಕಷ್ಟದಲ್ಲಿ ನರಳುವಾಗಲೂ ಲಂಚ ಪಡೆದವರ ಪುತ್ರನನ್ನು ಸೋಲಿಸಿ ಎಂದರು.

ಅಜ್ಜಂಪೀರ್ ಖಾದ್ರಿ ನನಗೆ ತುಂಬಾ ಬೇಕಾದವರು. ನನಗಾಗಿ ಖಾದ್ರಿ ಶಾಸಕ ಸ್ಥಾನ ತ್ಯಜಿಸಲು ಸಿದ್ದರಾಗಿದ್ದರು. ನಾನು ಸೋತು, ಖಾದ್ರಿ ಗೆದ್ದಿದ್ದಾಗ ಸ್ವತಃ ಖಾದ್ರಿಯವರೇ ಬಂದು ಅವರು ಶಾಸಕ ಸ್ಥಾನವನ್ನು ನನಗಾಗಿ ಬಿಟ್ಟು ಕೊಡಲು ಸಿದ್ದರಾಗಿದ್ದರು. ನಮ್ಮಿಬ್ಬರ ನಡುವೆ ಅಷ್ಟು ಆತ್ಮೀಯತೆ.ಹೀಗಾಗಿ ನಮ್ಮ ಮಾತಿಗೆ ಬೆಲೆ ನೀಡಿ ನಾಮಪತ್ರ ವಾಪಾಸ್ ಪಡೆದು ಪಠಾಣ್ ಅವರನ್ನು ಗೆಲ್ಲಿಸಲು ಟೊಂಕ ಕಟ್ಟಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಮೋದಿಯ ಸುಳ್ಳುಗಳು:

ಸಿದ್ದರಾಮಯ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಡೀ ದೇಶಕ್ಕೆ ಸುಳ್ಳುಗಳ ಮೇಲೆ ಸುಳ್ಳುಗಳನ್ನು ಹೇಳಿದ್ದರು. ಆದರೆ ನಮ್ಮ ಸರ್ಕಾರ ಜಾರಿಗೆ ಬಂದ ಎಂಟೇ ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಲಕ್ಷಾಂತರ ತಾಯಂದಿರು ಗ್ಯಾರಂಟಿಗಳ ಅನುಕೂಲಗಳನ್ನು ಪ್ರತೀ ದಿನ ಪಡೆಯುತ್ತಿದ್ದಾರೆ. ಮೋದಿ ಅವರ ಸುಳ್ಳುಗಳು ಮಾತ್ರ ನಿಲ್ಲುತ್ತಲೇ ಇವೆ ಎಂದು ಟೀಕಿಸಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿ ಎಂದರೆ, “ರೈತರ ಸಾಲ ಮನ್ನಾ ಮಾಡಲು ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇಲ್ಲ” ಎಂದು ಯಡಿಯೂರಪ್ಪ ಹೇಳಿದ್ದರು‌. ಹೋಗಲಿ ಬಸವರಾಜ ಬೊಮ್ಮಾಯಿ ಅವರೂ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ ಮಾಡಲಿಲ್ಲ.ಇವರು ಯಾವ ಮುಖ ಇಟ್ಟುಕೊಂಡು ರೈತರ ಮತ ಕೇಳುತ್ತಿದ್ದಾರೆ ಎಂದರು.

ವಕ್ಫ್ ಆಸ್ತಿ ಸರ್ಕಾರದ ಆಸ್ತಿ ಅಲ್ಲ. ಅದು ವಕ್ಫ್ ಬೋರ್ಡ್ ಗೆ ಸೇರಿದ ಆಸ್ತಿ. ಈ ಆಸ್ತಿ ಒತ್ತುವರಿ ಮಾಡಿದವರನ್ನು ತೆರವುಗೊಳಿಸಲು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವಧಿಯಲ್ಲೂ ನೋಟಿಸ್ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ್ದಾರೆ.ಆದರೆ ನಮ್ಮ‌ ಸರ್ಕಾರ ಮಾತ್ರ ಯಾವುದೇ ರೈತರಿಗೂ ತೊಂದರೆ ಆಗುವುದಿಲ್ಲ ಎಂದು ಭರವಸೆ ನೀಡಿ ನೋಟಿಸ್ ವಾಪಾಸ್ ಪಡೆಯಲು ಸ್ಪಷ್ಟ ನಿರ್ದೇಶನ ನೀಡಿದ್ದೇನೆ.

ಅಜ್ಜಂಪೀರ್ ಖಾದ್ರಿ ಅವರಿಗೆ ಒಳ್ಳೆ ಸ್ಥಾನ ಕೊಡ್ತೇವೆ. ಶಿಗ್ಗಾಂವ್ ನಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಸಿಎಂ‌ ಸಿದ್ದರಾಮಯ್ಯ ಮನವಿ ಮಾಡಿದರು.

Tags: Ajjampir Qadri will be given a good position.CM SiddaramaiahHulagura village.I will get more power:If Congress wins all three constituencies.shiggaon
Previous Post

ಇಂದು ವೀರಪ್ಪ ಮೊಯ್ಲಿ ಬೆಳಗಾವಿ ಜಿಲ್ಲಾ ಪ್ರವಾಸ

Next Post

ಕೆನಡಾ ದೇವಾಲಯ ಧಾಳಿ; ಪ್ರಧಾನಿ ನರೇಂದ್ರ ಮೋದಿ ಖಂಡನೆ

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post

ಕೆನಡಾ ದೇವಾಲಯ ಧಾಳಿ; ಪ್ರಧಾನಿ ನರೇಂದ್ರ ಮೋದಿ ಖಂಡನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada