ಜೆ.ಡಿ.ಎಸ್ ಪಕ್ಷಕ್ಕೆ ಮುಸ್ಲಿಮರ ಬಗ್ಗೆ ಕಾಳಜಿ ಇದ್ದಿದ್ದರೆ ಹಾಸನ, ಮೈಸೂರು, ಮಂಡ್ಯ ಭಾಗದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಬಹುದಲ್ಲವೇ? ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ಹೆಚ್ಡಿಕೆಗೆ ಸವಾಲು ಹಾಕಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ದುರುದ್ದೇಶದಿಂದಲೇ ಜೆಡಿಎಸ್ ಪಕ್ಷ ಆಯ್ದ ಚುನಾವಣಾ ಕ್ಷೇತ್ರದಲ್ಲಿ ಮಾತ್ರ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುತ್ತದೆ. ಬಸವಕಲ್ಯಾಣದಲ್ಲಿ ಹೀಗೆಯೇ ಮಾಡಿದ್ದರು, ಈಗ ಸಿಂದಗಿಯಲ್ಲಿಯೂ ಇದನ್ನೇ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಜೆ.ಡಿ.ಎಸ್ ಪಕ್ಷಕ್ಕೆ ಮುಸ್ಲಿಮರ ಬಗ್ಗೆ ಕಾಳಜಿ ಇದ್ದಿದ್ದರೆ ಹಾಸನ, ಮೈಸೂರು, ಮಂಡ್ಯ ಭಾಗದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಬಹುದಲ್ಲವೇ? ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಯಾರಾದರೂ ಮುಸ್ಲಿಮರನ್ನು ಮಂತ್ರಿ ಮಾಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ನಮ್ಮ ಪಕ್ಷದಿಂದ ಇಬ್ಬರು ಪ್ರಬಲ ಅಭ್ಯರ್ಥಿಗಳಿದ್ದಾರೆ. ಯಾರಿಗೇ ಪಕ್ಷದ ಟಿಕೆಟ್ ನೀಡಿದರೂ ಒಟ್ಟಾಗಿ ಕೆಲಸ ಮಾಡುವಂತೆ ಈ ಇಬ್ಬರಿಗೂ ಹೇಳಿದ್ದೇವೆ. ಅದಕ್ಕವರು ಒಪ್ಪಿದ್ದಾರೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ 2-3 ದಿನಗಳಲ್ಲಿ ಪಕ್ಷವು ಅಭ್ಯರ್ಥಿಯನ್ನು ಘೋಷಿಸಲಿದೆ ಎಂದು ಹೇಳಿದ್ದಾರೆ.
ಸಿಂಧಗಿ ಕ್ಷೇತ್ರದ ಉಪಚುನಾವಣೆಯ ಬಗ್ಗೆ ನಿನ್ನೆ ಕೆಪಿಸಿಸಿ ಅಧ್ಯಕ್ಷರು, ಜಿಲ್ಲಾ ಮುಖಂಡರು, ಆ ಭಾಗದ ಶಾಸಕರ ಜೊತೆ ಚರ್ಚೆ ನಡೆಸಲಾಗಿದೆ. ಅಶೋಕ್ ಮನಗೂಳಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಹೈಕಮಾಂಡ್ ಈಗಾಗಲೇ ಘೋಷಣೆಯನ್ನು ಮಾಡಿದೆ.
ಹಾನಗಲ್ ನಲ್ಲಿ 7ನೇ ತಾರೀಖಿನಂದು ಮತ್ತು ಸಿಂಧಗಿಯಲ್ಲಿ 8ನೇ ತಾರೀಖಿನಂದು ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ನಾನು, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಎರಡೂ ಕಡೆ ನಾಮಪತ್ರ ಸಲ್ಲಿಕೆ ವೇಳೆ ಹೋಗುತ್ತೇವೆ.
Also Read: ಸಿಂದಗಿ, ಹಾನಗಲ್‌ನಲ್ಲಿ JDS ಮುಸ್ಲಿಂ ಅಭ್ಯರ್ಥಿ – ರಾಜಕಾರಣದಲ್ಲಿ ಮುಸ್ಲಿಂ ಜನಪ್ರಾತಿನಿಧ್ಯ ಕುಸಿಯುತ್ತಿರುವುದೇಕೆ?
ಸದ್ಯದ ರಾಜಕಾರಣದಲ್ಲಿ ಮುಸ್ಲಿಂ ಜನಾಂಗದ ರಾಜಕಾರಣಿಗಳ ಅಥವಾ ಜನಪ್ರತಿನಿಧಿಗಳ ಪ್ರಾತಿನಿಧ್ಯ ತುಂಬ ಕಡಿಮೆಯಿದೆ. ಇಂತಹ ಹೊತ್ತಿನಲ್ಲಿ ಜೆಡಿಎಸ್ನ ಕುಮಾರಸ್ವಾಮಿ ಅವರು ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದಾರೆ. ಹಾನಗಲ್ನಲ್ಲಿ ನಿಯಾಜ್ ಶೇಖ್ ಮತ್ತು ಸಿಂದಹಿಯಲ್ಲಿ ನಾಜಿಯಾ ಶಕೀಲ್ ಅಂಗಡಿಯವರನ್ನು ಅಭುರ್ಥಿಗಳಾಗಿ ಘೋಷಿಸಿದೆ.