ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ದ ಎಂದು ಸಿಎಂ ಯಡಿಯೂರಪ್ಪ ಸ್ಫೋಟಕ ಹೇಳಿಕೆ ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚನ ಮೂಡಿಸಿದ್ದಾರೆ.
ಆಪ್ತ ವಲಯದಿಂದಲೇ ಸಿಎಂ ಯಡಿಯೂರಪ್ಪ ವಿರುದ್ಧ ದೆಹಲಿ ನಾಯಕರಿಗೆ ದೂರು ಹೋಗುತ್ತಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಎಲ್ಲಿಯವರೆಗೆ ನನ್ನ ಮೇಲೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ ಎಂದಿದ್ದಾರೆ.
ದೆಹಲಿ ಹೈಕಮಾಂಡ್ ಯಾವತ್ತು ಬೇಡವೆನ್ನುತ್ತಾರೋ ಅವತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರಾಜ್ಯದ ಅಭಿವೃದ್ಧಿಗಾಗಿ ಹಗಲು ರಾತ್ರಿ ಎನ್ನದೆ ಕೆಲಸ ಮಾಡುತ್ತೇನೆಂದಿದ್ದಾರೆ.
ಯಾವುದೇ ಗೊಂದಲದಲ್ಲಿ ನಾನಿಲ್ಲ, ನಾನಗೊಂದು ಒಳ್ಳೆಯ ಅವಕಾಶ ಕೊಟ್ಟಿದ್ದಾರೆ. ಶಕ್ತಿ ಮೀರಿ ಸದುಪಯೋಗ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ ಉಳಿದಿರುವುದು ಹೈಕಮಾಂಡ್ಗೆ ಬಿಟ್ಟಿದ್ದು ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.