ಮೈಸೂರು: ನಾನು ಲೋಕಾಯುಕ್ತ ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೇ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ನಗರದಲ್ಲಿಂದು ಮಾತನಾಡಿದ ಅವರು, ನಾವು ಭ್ರಷ್ಟಾಚಾರ ನಿಗ್ರಹಕ್ಕಾಗಿ ಎಸಿಬಿ ರಚನೆ ಮಾಡಿದ್ದೇ ಅಷ್ಟೇ. ನಾವು ಲೋಕಾಯುಕ್ತದ ಯಾವ ಅಧಿಕಾರವನ್ನು ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತರು ಇದ್ದರು. ಎಲ್ಲಾ ಸತ್ಯ ಗೊತ್ತಿದ್ದರೂ ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ ಎಂದು ಅರೋಪಿಸಿದರು.
ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ಎಸಿಬಿ ರದ್ದು ಮಾಡಿದ್ದು ನ್ಯಾಯಾಲಯ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸುಳ್ಳೇ ಬಿಜೆಪಿ ಮನೆದೇವ್ರು
ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ. ಸುಳ್ಳೇ ಬಿಜೆಪಿ ಮನೆದೇವ್ರು. ಹೀಗಾಗಿ ಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆಂದು ಹರಿಹಾಯ್ದರು.
ದಶಪಥ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು
ಮಾರ್ಚ್ 9ರಂದು ಬೆಂಗಳೂರು-ಮೈಸೂರು ಹೈವೇ ಪರಿಶೀಲನೆ ನಡೆಸುತ್ತೇನೆ. ಆ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು. ಇದರಲ್ಲಿ ಸಂಸದ ಪ್ರತಾಪ್ ಸಿಂಹನದ್ದಾಗಲಿ, ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಪ್ರತಾಪ್ ಸಿಂಹನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಕೆಲವೇ ಕಿ ಮೀ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಮಹದೇವಪ್ಪನಿಗೆ ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ಮಹದೇವಪ್ಪನೇ ಮುಂದೆ ನಿಂತು ಈ ರಸ್ತೆ ಮಾಡಿಸಿದ. ಆಗ ನಾನೂ ಇದ್ದೆ, ಆಗ ಆಸ್ಕರ್ ಫರ್ನಾಂಡೀಸ್ ಕೇಂದ್ರ ಸಚಿವರಾಗಿದ್ದರು. ಅವರ ಕಾಲದಲ್ಲೇ ಅಪ್ರೂವಲ್ ಆಗಿತ್ತು. ಈಗ ಆಸ್ಕರ್ ಫರ್ನಾಂಡೀಸ್ ಬದುಕಿಲ್ಲ.ಎಲ್ಲವೂ ಮಹದೇವಪ್ಪನ ಕಾಲದಲ್ಲಿ ಆಗಿದೆ. ದಶಪಥ ರಸ್ತೆ ನಮ್ಮ ಸರ್ಕಾರದ ಕೊಡುಗೆ ಎಂದು ತಿಳಿಸಿದರು.