• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೆಟ್ರೋ ನಿಲ್ದಾಣಕ್ಕೆ ಮುನಿರತ್ನ ಹಣ ಕೊಟ್ಟರೆ, ಅವರ ಹೆಸರಿಡಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ

ಪ್ರತಿಧ್ವನಿ by ಪ್ರತಿಧ್ವನಿ
August 12, 2025
in Top Story, ಕರ್ನಾಟಕ, ರಾಜಕೀಯ
0
ಮೆಟ್ರೋ ನಿಲ್ದಾಣಕ್ಕೆ ಮುನಿರತ್ನ ಹಣ ಕೊಟ್ಟರೆ, ಅವರ ಹೆಸರಿಡಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ
Share on WhatsAppShare on FacebookShare on Telegram

ADVERTISEMENT

ಕೃಷ್ಣ ಬೈರೇಗೌಡ ಅವರದ್ದು ಸಾರ್ವಜನಿಕ ಬೇಡಿಕೆ, ಮುನಿರತ್ನ ಅವರದ್ದು ಖಾಸಗಿ ಬೇಡಿಕೆ

ಬೆಂಗಳೂರು, ಆ.12

“ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಅಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಟುಕಿದರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣದ ನಿರ್ಮಾಣಕ್ಕೆ ಎಂಬೆಸಿ ಸಂಸ್ಥೆ ಹಣ ನೀಡಿಲ್ಲ ಎಂದು ಈ ನಿಲ್ದಾಣ ನಿರ್ಮಾಣ ಮಾಡುವುದನ್ನು ಕೈಬಿಟ್ಟಿರುವುದು ಎಷ್ಟು ಸರಿ ಎಂದು ಪ್ರಶ್ನೆ ಕೇಳಿದಾಗ, ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು.

“ಬೆಂಗಳೂರಿನಲ್ಲಿ ಒಂದು ಪರಿಕಲ್ಪನೆ ಇದೆ. ಕೆಲವು ಸಂಸ್ಥೆಗಳ ಸಿಎಸ್ಆರ್ ನಿಧಿ ಬಳಸಿಕೊಂಡು ಮೆಟ್ರೋ ನಿಲ್ದಾಣ ನಿರ್ಮಿಸಿದರೆ ಆ ನಿಲ್ದಾಣಕ್ಕೆ ಸಂಸ್ಥೆ ಹೆಸರಿಡಲು ಅವಕಾಶ ಮಾಡಿಕೊಡುತ್ತೇವೆ. ಈ ಮಾದರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪ್ರಶಂಸೆ ಮಾಡಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಇದ್ದರು. ಇನ್ಫೋಸಿಸ್ ಅವರು ರೂ.200 ಕೋಟಿ ಕೊಟ್ಟಿದ್ದು, ಮೆಟ್ರೋ ನಿಲ್ದಾಣಕ್ಕೆ ಆ ಸಂಸ್ಥೆ ಹೆಸರು ಇಡಲಾಗಿದೆ. ಡೆಲ್ಟಾ ಅವರು ಕೂಡ ನೀಡಿದ್ದಾರೆ. ಎಲ್ಲಾ ಸರ್ಕಾರಗಳು ಇದನ್ನು ಮಾಡಿಕೊಂಡು ಬಂದಿವೆ. ಪಾಪ, ಮುನಿರತ್ನ ಅವರಿಗೆ ಸೇರಿದ 70-80 ಎಕರೆ ಜಮೀನು ಅಲ್ಲಿದೆ. ಅವರ ಜಮೀನಿನ ಪಕ್ಕ ಅವರಿಗೆ ಮೆಟ್ರೋ ನಿಲ್ದಾಣ ಬೇಕಾಗಿದೆ. ಹೀಗಾಗಿ ಈ ಪ್ರಶ್ನೆ ಎತ್ತಿದ್ದಾರೆ” ಎಂದರು.

ಈ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಮುನಿರತ್ನ ಅವರು, “ಡಿಸಿಎಂ ಶಿವಕುಮಾರ್ ಅವರು ಬಿಲ್ಡರ್ ಗೆ ಕರೆ ಮಾಡಿ 24 ತಾಸಿನಲ್ಲಿ ಹಣ ಕಟ್ಟುತ್ತೀಯಾ ಇಲ್ಲವಾ ಎಂದು ಎಂಬೆಸಿ ಬಿಲ್ಡರ್ ಸಂಸ್ಥೆಯವರಿಗೆ ಕೇಳಿದರೆ ಸಾಕು. ಅವರು ಹಣ ಕಟ್ಟುತ್ತಾರೆ. ಬೆಂಗಳೂರಿನಲ್ಲಿ ಬಿಲ್ಡರ್ ಗಳು ಕೇವಲ ಶಿವಕುಮಾರ್ ಅವರ ಮಾತನ್ನಷ್ಟೇ ಕೇಳುತ್ತಾರೆ” ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಮನುಷ್ಯನಿಗೆ ಸ್ವಾರ್ಥ ಇರುವುದು ಸಹಜ. ಇದು ತಪ್ಪಲ್ಲ. ನನಗೂ ಇದೆ, ಅವರಿಗೂ ಇದೆ. ಆ ಭಾಗದಲ್ಲಿ ಎಂಬೆಸಿ ಅವರದ್ದು ಸುಮಾರು 250 ಎಕರೆ ಜಮೀನಿದೆ. ಅವರು ಮೆಟ್ರೋ ನಿಲ್ದಾಣಕ್ಕೆ ತಮ್ಮ ಹೆಸರು ಬರಬೇಕು ಎಂದು ಒಪ್ಪಂದ ಮಾಡಿಕೊಂಡಿದ್ದಾರೆ. ರೂ.140 ಕೋಟಿ ಮೊತ್ತದಲ್ಲಿ ನಿರ್ಮಿಸಲಾಗುವ ಮೆಟ್ರೋ ನಿಲ್ದಾಣಕ್ಕೆ ರೂ.120 ಕೋಟಿ ನೀಡುವುದಾಗಿ ಹೇಳಿದ್ದರು. ಅದರಲ್ಲಿ ಕೇವಲ ರೂ.1 ಕೋಟಿ ಮಾತ್ರ ನೀಡಿದ್ದಾರೆ. ಆ ಭಾಗದಲ್ಲಿ ಮುನಿರತ್ನ ಅವರದ್ದು 70-80 ಎಕರೆ ಜಮೀನಿದೆ, ಹೀಗಾಗಿ ಮುನಿರತ್ನ ಹಣ ಕೊಟ್ಟು ಮೆಟ್ರೋ ನಿಲ್ದಾಣ ನಿರ್ಮಿಸಿದರೆ ಆ ನಿಲ್ದಾಣಕ್ಕೆ ಮುನಿರತ್ನ ಅವರ ಹೆಸರೇ ಇಡುತ್ತೇನೆ” ಎಂದು ತಿಳಿಸಿದರು.

RAshok on DkS ಕಿಚಾಯಿಸಿದ ಅಶೋಕ್‌ಗೆ ಟಕ್ಕರ್‌ ಕೊಟ್ಟ ಡಿಕೆಶಿ! #Bengaluru #rcb #traffic #LegislativeAssembly

ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, “ಈಗಾಗಲೇ ಎಂಬೆಸಿ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಎಂಬೆಸಿ ಅವರು ರೂ.1 ಕೋಟಿ ಕೊಟ್ಟಿದ್ದು, ಬಾಕಿ ರೂ.119 ಕೋಟಿ ನೀಡಲಿ ಎಂದು ಉಪಮುಖ್ಯಮಂತ್ರಿಗಳು ಅವರು ಧಮ್ಕಿ ಹಾಕಲಿ ಎಂದಷ್ಟೇ ಮುನಿರತ್ನ ಹೇಳುತ್ತಿದ್ದಾರೆ” ಎಂದರು.

ಇದಕ್ಕೆ ತಿರುಗೇಟು ನೀಡಿದ ಶಿವಕುಮಾರ್ ಅವರು, “ನಾನೇಕೆ ಧಮ್ಕಿ ಹಾಕಲಿ? ಬೇಕಾದರೆ ಒಪ್ಪಂದ ರದ್ದುಗೊಳಿಸೋಣ, ಮುನಿರತ್ನ ಹಣ ಕೊಟ್ಟರೆ ʼಮುನಿರತ್ನ ಅಂಡ್ ಕಂಪನಿʼ ಅಂತಲೇ ಹೆಸರಿಡೋಣ” ಎಂದು ಹೇಳಿದರು.

“ಈ ಮೆಟ್ರೋ ನಿಲ್ದಾಣದ ಬಗ್ಗೆ ಸ್ಥಳೀಯ ಶಾಸಕರಾದ ಕೃಷ್ಣ ಬೈರೇಗೌಡರು ನನ್ನ ಜೊತೆ ಚರ್ಚಿಸಿ ಪರಿಸ್ಥಿತಿ ವಿವರಿಸಿದ್ದಾರೆ. ಕ್ಷೇತ್ರದ ಬಗ್ಗೆ ಅವರು ಹೇಳಿರುವ ಮಾತನ್ನು ನಾನು ಗಮನದಲ್ಲಿಟ್ಟುಕೊಂಡಿದ್ದೇನೆ. ಕೃಷ್ಣ ಬೈರೇಗೌಡ ಅವರದ್ದು ಸಾರ್ವಜನಿಕ ಬೇಡಿಕೆ, ಮುನಿರತ್ನ ಅವರದ್ದು ಖಾಸಗಿ ಬೇಡಿಕೆ. ಇಷ್ಟೇ ವ್ಯತ್ಯಾಸ” ಎಂದು ತಿರುಗೇಟು ನೀಡಿದರು.

ಅಶ್ವತ್ಥ್ ನಾರಾಯಣ ಅವರ ಸಲಹೆ ಸ್ವೀಕರಿಸಲು ಸಿದ್ಧ:

ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಅವರು ಬೆಂಗಳೂರಿನಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ, ಮಳೆ ಬಂದಾಗ ಅಂಡರ್ ಪಾಸ್ ಸೇರಿದಂತೆ ಎಲ್ಲೆಡೆ ನೀರು ನಿಲ್ಲುತ್ತದೆ. ಇನ್ನು ಕಾಲುವೆಗಳ ಮೂಲಕ ಮಳೆನೀರು ಇಂಗು ಬಾವಿ ರೂಪಿಸಬೇಕು ಎಂದು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಅಶ್ವತ್ಥ ನಾರಾಯಣ ಅವರು ಹಿರಿಯ ಶಾಸಕರು, ಬೆಂಗಳೂರಿನಲ್ಲಿ ಕೆಲಸ ಮಾಡಿದ ಅನುಭವ ಅವರಿಗಿದೆ. ಅವರು ಯಾವಾಗ ಬೇಕಾದರೂ ನಮಗೆ ಸಲಹೆ ನೀಡಬಹುದು. ನಾವು ಅದನ್ನು ಸ್ವಾಗತಿಸುತ್ತೇವೆ. 2,395 ಕಡೆ ಮಳೆನೀರುಗಾಲು ಒತ್ತುವರಿಯನ್ನು ತೆರವುಗೊಳಿಸಿದ್ದೇವೆ. ಅಂತರ್ಜಲ ಮರುಪೂರಣ ಕೂಡ ಇಲ್ಲಿ ಸಮಸ್ಯೆಯಾಗಿದೆ. ದೊಡ್ಡ ದೊಡ್ಡ ಅಪಾರ್ಟ್ ಮೆಂಟ್ ಗಳಲ್ಲೂ ಸಂಪೂರ್ಣ ಕಾಂಕ್ರೀಟ್ ಹಾಕುತ್ತಿದ್ದಾರೆ. ಇದಕ್ಕೆ ನೀತಿ ರೂಪಿಸಲು ಮುಂದಾಗಿದ್ದೇವೆ. ಮಳೆನೀ

Tags: BJPಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್‌ನ ಕ್ರಾಂತಿವೀರ ರಾಜಣ್ಣ ಕಿಕ್‌ಔಟ್

Next Post

ಪ್ರಧಾನಿಗೆ ಪ್ರತಿಮೆ: ಡಿಸಿಎಂ ಸ್ಪಷ್ಟನೆ

Related Posts

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !
Top Story

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !

by ಪ್ರತಿಧ್ವನಿ
September 23, 2026
0

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಕೇಳಿಬರುತ್ತಿದ್ದ ಆಂತರಿಕ ಅಸಮಾಧಾನ ಇದೀಗ ಬಹಿರಂಗವಾಗಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (SBUDA) ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರು ಜಿಲ್ಲಾ ಉಸ್ತುವಾರಿ...

Read moreDetails
ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

September 23, 2026
ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

September 23, 2026
ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

September 23, 2026
ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

September 23, 2026
Next Post
ಪ್ರಧಾನಿಗೆ ಪ್ರತಿಮೆ: ಡಿಸಿಎಂ ಸ್ಪಷ್ಟನೆ

ಪ್ರಧಾನಿಗೆ ಪ್ರತಿಮೆ: ಡಿಸಿಎಂ ಸ್ಪಷ್ಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada