• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಹತ್ತತ್ತು ವರ್ಷ ಪ್ರಧಾನಮಂತ್ರಿ ಆದಿ ಮೋದಿಯವರು ನುಡಿದಂತೆ ನಡೆದ ಒಂದೇ ಉದಾಹರಣೆ ಇದ್ದರೆ ತೋರಿಸಿ: ಸಿ.ಎಂ.ಸಿದ್ದರಾಮಯ್ಯ ಸವಾಲು

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ರಾಜಕೀಯ
0
ಹತ್ತತ್ತು ವರ್ಷ ಪ್ರಧಾನಮಂತ್ರಿ ಆದಿ ಮೋದಿಯವರು ನುಡಿದಂತೆ ನಡೆದ ಒಂದೇ ಉದಾಹರಣೆ ಇದ್ದರೆ ತೋರಿಸಿ: ಸಿ.ಎಂ.ಸಿದ್ದರಾಮಯ್ಯ ಸವಾಲು
Share on WhatsAppShare on FacebookShare on Telegram

ಮೋದಿ ಪ್ರಧಾನಿಯಾದ ಹತ್ತು ವರ್ಷದಲ್ಲಿ 124 ಲಕ್ಷ ಕೋಟಿ ದೇಶದ ಸಾಲ ಹೆಚ್ಚಿಸಿದ್ದಾರೆ. ಇದನ್ನು ದೇವೇಗೌಡರು ಏಕೆ ಪ್ರಶ್ನಿಸುತ್ತಿಲ್ಲ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ADVERTISEMENT

ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ಏಕೈಕ ಸಂಸದ ಡಿ.ಕೆ.ಸುರೇಶ್: ಇವರಿಗೆ ಆಶೀರ್ವದಿಸಿ ಪಾರ್ಲಿಮೆಂಟಿಗೆ ಕಳುಹಿಸಿ: ಸಿ.ಎಂ. ಸಿದ್ದರಾಮಯ್ಯ ಕರೆ

ಆನೇಕಲ್ (ಹೆಬ್ಬಗೋಡಿ) ಏ 21: ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ಏಕೈಕ ಸಂಸದ ಡಿ.ಕೆ.ಸುರೇಶ್. ಉಳಿದ ಯಾವ ಸಂಸದರೂ ನೆಪಕ್ಕೂ ಪ್ರಶ್ನಿಸಲಿಲ್ಲ. ಹೀಗಾಗಿ ಇವರಿಗೆ ಆಶೀರ್ವದಿಸಿ ಲೋಕಸಭೆಗೆ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹೆಬ್ಬಗೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರವಾಗಿ ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಡಿ.ಕೆ.ಸುರೇಶ್ ಅವರು ಜನಸಾಮಾನ್ಯರ ಜತೆ ಬೆರೆತು ಹಳ್ಳಿ ಹಳ್ಳಿಗೂ ಚಿರಪರಿಚಿತರು. ದೇವೇಗೌಡರ ಅಳಿಯ ಮಂಜುನಾಥ್ ರನ್ನು ಬಿಜೆಪಿಯಿಂದ ಇಲ್ಲಿ ಕಣಕ್ಕೆ ಇಳಿಸಿದ್ದಾರೆ. ಮಗನನ್ನು ಮಂಡ್ಯದಿಂದ, ಮೊಮ್ಮಗನನ್ನು ಹಾಸನದಿಂದ ನಿಲ್ಲಿಸಿದ್ದಾರೆ. ಕೋಲಾರ ದಲಿತ ಮೀಸಲು ಕ್ಷೇತ್ರ ಆಗದೇ ಇದ್ದಿದ್ದರೆ ಅಲ್ಲಿಂದಲೂ ಇವರ ಕುಟುಂಬದವರನ್ನೇ ಕಣಕ್ಕೆ ಇಳಿಸುತ್ತಿದ್ದರು ಎಂದು ವ್ಯಂಗ್ಯವಾಡಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಮೋದಿ ಹೇಳಿದರು. 10 ವರ್ಷಕ್ಕೆ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು.‌ ಈ ಮಾತು ನಂಬಿದ್ದ ವಿದ್ಯಾವಂತ ಯುವ ಸಮೂಹ ಕೆಲಸ ಕೇಳಿದರೆ “ಹೋಗಿ ಪಕೋಡ ಮಾರಾಟ ಮಾಡಿ” ಎಂದರು. ಇದನ್ನು ಹೇಳೋಕೆ ನೀವು ಹತ್ತತ್ತು ವರ್ಷ ಪ್ರಧಾನಿ ಆದ್ರಾ ಮೋದಿಯವರೇ ಎಂದು ಸಿ.ಎಂ ಪ್ರಶ್ನಿಸಿದರು.

ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು. 15 ಪೈಸೆ ಕೂಡ ಹಾಕಲಿಲ್ಲ.

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ್ರು. ಆದರೆ ರೈತರ ಖರ್ಚು ಮೂರು ಪಟ್ಟು ಹೆಚ್ಚಾಯಿತು.

ಕೈಗೆಟುಕುವ ಬೆಲೆಯಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊಡುತ್ತೇವೆ ಎಂದರು. ಆದರೆ ಇವೆಲ್ಲದರ ಬೆಲೆಯನ್ನು ಗಗನಕ್ಕೆ ಏರಿಸಿದರು. ಹೀಗೆ ಮೋದಿಯವರು ಸುಳ್ಳುಗಳಲ್ಲೇ ಹತ್ತು ವರ್ಷ ಕಳೆದರು ಎಂದು ಟೀಕಿಸಿದರು.

ಸುಳ್ಳು ಹೇಳುವುದರಲ್ಲಿ ಹಾಲಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ, ಮಾಜಿ ಪ್ರಧಾನಿ ದೇವೇಗೌಡರು ಪೈಪೋಟಿಗೆ ಬಿದ್ದಿದ್ದಾರೆ ಎಂದು ಟೀಕಿಸಿದರು.

ಮೋದಿಯವರು ರಾಜ್ಯದ ಜನತೆಯ ಕೈಗೆ ನೀಡಿರುವ ಖಾಲಿಚೊಂಬು ದೇವೇಗೌಡರ ಕಣ್ಣಿಗೆ ಅಕ್ಷಯಪಾತ್ರೆಯಂತೆ ಕಾಣಿಸುತ್ತಿದೆಯಂತೆ. ಮೋದಿ ಪ್ರಧಾನಿಯಾದ ಹತ್ತು ವರ್ಷದಲ್ಲಿ 124 ಲಕ್ಷ ಕೋಟಿ ದೇಶದ ಸಾಲ ಹೆಚ್ಚಿಸಿದ್ದಾರೆ. ಇದನ್ನು ದೇವೇಗೌಡರು ಏಕೆ ಪ್ರಶ್ನಿಸುತ್ತಿಲ್ಲ:

ದೇಶದ ಭವಿಷ್ಯ ರೂಪಿಸಲು, ಭಾರತೀಯರ ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವ ಈ ಚುನಾವಣೆ ಅತ್ಯಂತ ಮಹತ್ವದ್ದು. ಹೀಗಾಗಿ ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ , ಪಾರ್ಲಿಮೆಂಟಿಗೆ ಕಳುಹಿಸಿ ಎಂದು ಕರೆ ನೀಡಿದರು.

Tags: BJPCongress Partysiddaramaiahನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಮೇ 10ರಂದು ರಿಷಿ ‘ರಾಮನ ಅವತಾರ’ ದರ್ಶನ…

Next Post

ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

Related Posts

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?
ರಾಜಕೀಯ

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

by ಪ್ರತಿಧ್ವನಿ
February 1, 2026
0

ಜಮಾತೆ-ಇ-ಇಸ್ಲಾಮಿ (ಜೆಇಐ) ಶನಿವಾರ  ಅಮೀರ್ ಡಾ. ಶಫೀಕರ್ ರೆಹಮಾನ್ ಅವರ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಸಾರ್ವಜನಿಕ ಜೀವನ ಮತ್ತು ನಾಯಕತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು...

Read moreDetails
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Next Post
ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!