• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಟ್ಟಡ ತೆರವು:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 26, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಂಗಳೂರು:”ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹಾಗೂ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ADVERTISEMENT

ಸಭೆಯಲ್ಲಿ ಯಾವ ವಿಚಾರವಾಗಿ ಚರ್ಚೆಯಾಯಿತು ಎಂದು ಕೇಳಿದಾಗ, “ಮಳೆಯಿಂದ ಹಾನಿಯಾಗಿರುವ ವಿಚಾರವಾಗಿ ಚರ್ಚೆ ಮಾಡಲಾಗಿದೆ.ಜತೆಗೆ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ನಾವು ಮುಂದಾಗಿದ್ದೇವೆ.ಈ ಹಿಂದೆ ಅಧಿಕಾರಿಗಳಿಗೆ ಇದ್ದ ಅಧಿಕಾರವನ್ನು ಕಳೆದ ಸರ್ಕಾರ ಮೊಟಕುಗೊಳಿಸಿತ್ತು. ಈಗ ನಮ್ಮ ಸರ್ಕಾರ ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ ಅಧಿಕಾರಿಗಳಿಗೆ ಈ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ಅಧಿಕಾರ ನೀಡುತ್ತಿದ್ದೇವೆ.ಕೂಡಲೇ ಇಂತಹ ಆಸ್ತಿಗಳ ನೋಂದಣಿ ನಿಲ್ಲಿಸಲಾಗುವುದು. ಇದೇ ವೇಳೆ ಒತ್ತುವರಿ ತೆರವುಗೊಳಿಸುವ ಬಗ್ಗೆಯೂ ಗಮನ ಹರಿಸಲಾಗುತ್ತಿದೆ.ಈ ವಿಚಾರದಲ್ಲಿ ನಾವು ಪ್ರಮುಖ ತೀರ್ಮಾನ ಕೈಗೊಂಡಿದ್ದೇವೆ”ಎಂದು ವಿವರಿಸಿದರು.

ಮಳೆಯಿಂದ ಆಗಿರುವ ತೊಂದರೆ ಬಗ್ಗೆ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಬೆಂಗಳೂರು ನಗರದಲ್ಲಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿದ್ದು ಹಾಗೂ ಕಳಪೆ ಗುಣಮಟ್ಟದ ಕಟ್ಟಡ ಕುಸಿತ ಹೊರತಾಗಿ ಮಳೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ” ಎಂದು ತಿಳಿಸಿದರು.

“ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರ ಮಾಡಿ, ಅವರನ್ನು ಸುರಕ್ಷಿತವಾಗಿ ಹೋಟೆಲ್ ಗಳಲ್ಲಿ ಇರಿಸಿ ಅವರಿಗೆ ಊಟ ಸೇರಿದಂತೆ ಎಲ್ಲಾ ವ್ಯವಸ್ಥೆ ನೀಡಿದ್ದೇವೆ. ನಮ್ಮ ಅಧಿಕಾರಿಗಳು ದಿನದ 24 ತಾಸುಗಳು ಕೆಲಸ ಮಾಡಿದ್ದಾರೆ” ಎಂದು ಹೇಳಿದರು.

ಮಳೆಯಿಂದ ಆಗುವ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರವೇನು ಎಂದು ಕೇಳಿದಾಗ, “ಒಂದೇ ಬಾರಿಗೆ ಮಳೆನೀರುಗಾಲುವೆ ನಿರ್ಮಾಣ ಮಾಡುತ್ತಿದ್ದೇವೆ. ಹೀಗಾಗಿ ರಾಜಕಾಲುವೆ ಅಕ್ಕಪಕ್ಕ 50 ಅಡಿ ಜಾಗ ಬಿಟ್ಟು ಅಲ್ಲಿ ರಸ್ತೆ ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಈ ರಸ್ತೆ ನಿರ್ಮಾಣದಿಂದ ಕಟ್ಟಡಗಳಿಗೂ ರಕ್ಷಣೆ ಸಿಗುತ್ತದೆ ಹಾಗೂ ಕಾಲುವೆಗಳ ಸ್ವಚ್ಛ ಕಾರ್ಯಕ್ಕೂ ನೆರವಾಗಲಿದೆ.ಮೊದಲ ಹಂತದಲ್ಲಿ 300 ಕಿ.ಮೀ.ರಸ್ತೆ ನಿರ್ಮಾಣ ಮಾಡಲಾಗುವುದು” ಎಂದು ತಿಳಿಸಿದರು.

ಸಭೆಯಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಯಾವ ಸೂಚನೆ ನೀಡಲಾಗಿದೆ ಎಂದು ಕೇಳಿದಾಗ, “ಎಲ್ಲೆಲ್ಲಿ ರೈತರ ಬೆಳೆಗಳಿಗೆ ಹಾನಿಯಾಗಿವೆ ಅವರಿಗೆ ಪರಿಹಾರ ನೀಡಲು ಸೂಚಿಸಲಾಗಿದೆ” ಎಂದು ತಿಳಿಸಿದರು.ರೈತರ ಜಮೀನನ್ನು ವಕ್ಫ್ ಮಂಡಳಿ ಮೂಲಕ ವಶಪಡಿಸಿಕೊಂಡು ಓಲೈಕೆ ರಾಜಕಾರಣ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

Tags: BJP's allegationbuilding evictionDCM D.K ShivakumarIllegal and poor qualityTwo children drowned in a lake in Bangalore cityWaqf Board and politicized
Previous Post

ಡಾ.ಶಿವಕುಮಾರ್ ಶೆಟಕಾರ್‌ಗೆ ನಿರ್ದೇಶಕ ಸ್ಥಾನದಿಂದ ಸರ್ಕಾರ ಗೇಟ್ ಪಾಸ್

Next Post

ಕರಿಮಣಿ ಮಾಲಿಕ ನೀನಲ್ಲ ಎಂದು ರೀಲ್ಸ್ ಮಾಡಿದಾಕೆಯಿಂದಲೇ ಪತಿಯ ಮರ್ಡರ್;ಮೂವರ ಬಂಧನ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

ಕರಿಮಣಿ ಮಾಲಿಕ ನೀನಲ್ಲ ಎಂದು ರೀಲ್ಸ್ ಮಾಡಿದಾಕೆಯಿಂದಲೇ ಪತಿಯ ಮರ್ಡರ್;ಮೂವರ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada