ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಡಿ ವಿಚಾರಣೆ ಜುಲೈ 30ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇ.ಡಿ.) ಈಗಾಗಲೇ ಸಮನ್ಸ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ವಿಶೇಷ ನ್ಯಾಯಾಲಯದ ಎದುರು ವಿಚಾರಣೆಗಾಗಿ ಹಾಜರಾಗಿದ್ದರು. ಆದರೆ ಯಾವುದೇ ಕಾರಣಕ್ಕೂ ಜಾಮೀನು ನೀಡುವುದಿಲ್ಲ ಎಂದು ಹೇಳಿ ಜುಲೈ 30ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ಈ ಹಿಂದೆ ತನಿಖೆ ನಡೆಸಿದ್ದ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಸಿದ್ದರು. ಆರೋಪ ಪಟ್ಟಿಯನ್ನು ಆಧರಿಸಿ ಡಿ.ಕೆ ಶಿವಕುಮಾರ್ ಸೇರಿ ಐವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಈ ಸಮನ್ಸ್ ಹಿನ್ನೆಲೆಯಲ್ಲಿ ಡಿಕೆಶಿ ಸೇರಿದಂತೆ ಸಚಿನ್ ನಾರಾಯಣ್, ಸುನೀಲ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್ ವಿರುದ್ದ ವಿಚಾರಣೆ ನಡೆಯಬೇಕಿತ್ತು. ಆದರೆ ಇಂದು ಕೋರ್ಟ್ ಗೆ ಹಾಜರಾಗಿದ್ದ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದಾರೆ.