ಬೆಂಗಳೂರು: ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆನ್ ಲೈನ್ ಬೆಟ್ಟಿಂಗ್ ಹಗರಣ ಸಂಬಂಧ ಇಡಿಯಿಂದ ಮತ್ತೆ ವೀರೇಂದ್ರಗೆ ಸೇರಿದ 177.3 ಕೋಟಿ ರೂ. ಮೌಲ್ಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿದ್ದ ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣಗಳ ಸಂಬಂಧ ಪ್ರತ್ಯೇಕ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಇಡಿ ಅಧಿಕಾರಿಗಳು ಕೆ.ಸಿ.ವೀರೇಂದ್ರ ಮತ್ತು ಸಹಚರರು ಈ ಹಗರಣದ ಮಾಸ್ಟರ್ ಮೈಂಡ್ ಎಂದು ತಿಳಿಸಿದೆ.
ದೇಶಾದ್ಯಂತ ಈ ಆರೋಪಿಗಳು ಅಕ್ರಮ ಆನ್ಲೈನ್ ಬೆಟ್ಟಿಂಗ್ ನೆಟ್ವರ್ಕ್ ಹೊಂದಿದ್ದರು. ತನಿಖೆ ವೇಳೆ ನೂರಾರು ಮ್ಯೂಲ್ ಅಕೌಂಟ್ ಬಳಸಿ ಅಕ್ರಮ ಹಣ ವರ್ಗಾವಣೆ ಪತ್ತೆಯಾಗಿದೆ. ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧಾರದ ಮೇಲೆ ಕೆ ಸಿ ವೀರೇಂದ್ರ ಆಸ್ತಿ ಜಪ್ತಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ.
ಈ ಹಿಂದೆ ಪ್ರಕರಣ ಸಂಬಂಧ 60 ಕ್ಕೂ ಹೆಚ್ಚು ಸ್ಥಳದಲ್ಲಿ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು
ಅಪಾರ ಪ್ರಮಾಣದ ಚಿನ್ನ, ನಗದು, ಬೆಳ್ಳಿ, ವಾಹನಗಳನ್ನ ವಶಪಡಿಸಿಕೊಂಡಿದ್ದರು. ಒಟ್ಟಾರೆ ಈ ಪ್ರಕರಣದಲ್ಲಿ ಇದುವರೆಗೆ ಇಡಿಯಿಂದ 320 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಅಲ್ಲದೇ ಹಗರಣದಲ್ಲಿ 2,300 ಕೋಟಿಗೂ ಅಧಿಕ ಅಕ್ರಮ ನಡೆದಿರೋದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದೆ.











