ಮಹಾರಾಷ್ಟ್ರದಿಂದ (Maharashtra) ಹುಬ್ಬಳ್ಳಿಗೆ (Hubli) ಹೊರಟ್ಟಿದ್ದ ಲಾರಿಯಲ್ಲಿ ಸುಮಾರು 12 ಕ್ಕೂ ಹೆಚ್ಚು ಗೋವುಗಳನ್ನು (ou slauhtring) ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ವಿಷಯ ತಿಳಿದ ಹಿಂದೂಪರ ಸಂಘಟನೆಯ 50 ಕ್ಕೂ ಅಧಿಕ ಯುವಕರು ಬೆಳಗಾವಿ ಹೊರವಲಯದ ಸುವರ್ಣಸೌಧದ ಬಳಿ ಲಾರಿ ತಡೆದು ಗೋವುಗಳನ್ನ ರಕ್ಷಣೆ ಮಾಡಿದ್ದಾರೆ. ಇದೇ ವೇಳೆ ಚಾಲಕನ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಬೆಳಗಾವಿ (belagavi) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ (jagadeesh shettar) ಭೇಟಿ ಮಾಡಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.

ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು (police) ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಘಟನೆ ಏನೆಂಬ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತನಿಖೆಗೆ (Investegation) ಮುಂದಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಚಾಲಕ ಹಾಗೂ ಆತನ ಜೊತೆಗಿದ್ದ ಇನ್ನೋರ್ವನನ್ನು ಸ್ಥಳೀಯ ಆಸ್ಪತ್ರೆಗೆ (Hospital) ದಾಖಲು ಮಾಡಲಾಗಿದೆ.

ಅಕ್ರಮ ಸಾಗಾಟದ ಹೆಸರಿನಲ್ಲಿ ಪೋಲಿಸರ ಸಮ್ಮುಖದಲ್ಲಿಯೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ರೆ, ಪೋಲಿಸರು ಮೂಕಪ್ರೇಕ್ಷಕರಾಗಿದ್ದರು. ನಂತ್ರ ಆತನನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ರು. ಇದರಲ್ಲೂ ರಾಜಕೀಯದ ಹೊಗೆಯಾಡೋದಕ್ಕೆ ಶುರುವಾಗಿರೋದು ವಿಪರಿಯಾಸ !