• Home
  • About Us
  • ಕರ್ನಾಟಕ
Saturday, December 6, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ನೀರಾವರಿ ಯೋಜನೆಗಳು, ಮೆಕ್ಕೆಜೋಳ ಬೆಲೆ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಸಂಸದರ ಜತೆ ಚರ್ಚೆ. ಒಕ್ಕಲಿಗರು ಕೂಡ ಹಿಂದುಳಿದ ಸಮುದಾಯದವರೇ.. ಸಾಕಷ್ಟು ಕೆಲಸಗಳಿರುವ ಕಾರಣ ದೆಹಲಿಗೆ ಹೋಗಬಹುದು

ಪ್ರತಿಧ್ವನಿ by ಪ್ರತಿಧ್ವನಿ
November 28, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

“ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನಿಮ್ಮ ಪಕ್ಷದ ಬಹಳಷ್ಟು ಕಾರ್ಯಕರ್ತರು ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಲು ಬಯಸುತ್ತಿದ್ದಾರಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ನನಗೆ ಯಾವುದೇ ಆತುರವಿಲ್ಲ ಎಂದರು. ಸಾಕಷ್ಟು ಕೆಲಸಗಳಿರುವ ಕಾರಣ ದೆಹಲಿಗೆ ಹೋಗಬಹುದು

ನೀವು ಹಾಗೂ ಸಿಎಂ ದೆಹಲಿಗೆ ಹೋಗುತ್ತೀರಾ ಎಂದು ಕೇಳಿದಾಗ, “ನಾನು ದೆಹಲಿಗೆ ಹೋಗಬಹುದು. ನನಗೆ ದೆಹಲಿಯಲ್ಲಿ ಸಾಕಷ್ಟು ಕೆಲಸಗಳಿವೆ. ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನಾನು ಸಂಸದರನ್ನು ಭೇಟಿ ಮಾಡಬೇಕಿದೆ. ದೇವರ ಕೃಪೆಯಿಂದ ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ನಮಗೆ ನ್ಯಾಯ ದೊರೆತಿದ್ದು, ಈ ಯೋಜನೆ ಪರಿಷ್ಕೃತ ಡಿಪಿಆರ್ ಸಿದ್ಧತೆಗೆ ಸೂಚಿಸಿದ್ದೇವೆ. ಮಹದಾಯಿ, ಕೃಷ್ಣಾ, ಎತ್ತಿನಹೊಳೆ ಸೇರಿದಂತೆ ನಮ್ಮ ಸಾಕಷ್ಟು ಯೋಜನೆಗಳ ಬಗ್ಗೆ ಸಂಸದರ ಜೊತೆ ಚರ್ಚೆ ಮಾಡುವುದಿದೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ” ಎಂದರು.

CM Siddaramaiah: ಹೇಯ್‌ ಸುಮ್ಮನೆ ಇರಮ್ಮಾ ನಿನಗೆ ಗೊತ್ತಾಗಲ್ಲ..! ಎಂದ ಸಿದ್ದರಾಮಯ್ಯ..! #pratidhvani

ಮೆಕ್ಕೆಜೋಳ ವಿಚಾರವಾಗಿ ಮನವಿ ಸಲ್ಲಿಸುವುದಿದೆ
“ಇದರ ಜೊತೆಗೆ ಮೆಕ್ಕೆಜೋಳ ಬೆಲೆ ವಿಚಾರದಲ್ಲಿ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿಲ್ಲ. ಮೆಕ್ಕೆಜೋಳಕ್ಕೆ 2400 ರೂ. ಬೆಲೆ ನಿಗದಿ ಮಾಡಿರುವುದು ಕೇಂದ್ರ ಸರ್ಕಾರ. ಮಾರುಕಟ್ಟೆಯಲ್ಲಿ ಸಿಗುತ್ತಿರುವುದು 1600 ರಿಂದ 1800 ರೂ. ಮಾತ್ರ. ಕೇಂದ್ರ ಸರ್ಕಾರ ರೈತರಿಗೆ ನೆರವು ನೀಡುತ್ತಿಲ್ಲ. ಹೀಗಾಗಿ ನಾವು ಹೋಗಿ ಮನವಿ ಸಲ್ಲಿಸಬೇಕಿದೆ. ನಾವು ಎಲ್ಲಾ ಕಾರ್ಖಾನೆ ಮಾಲೀಕರ ಸಭೆ ಕರೆಯಲು ತೀರ್ಮಾನಿಸಿದ್ದೇವೆ. ಕೇಂದ್ರ ಸರ್ಕಾರ ಮೆಕ್ಕೆಜೋಳ ಖರೀದಿ ಮಾಡಬೇಕು ಎಂದು ಮನವಿ ಸಲ್ಲಿಸುತ್ತೇವೆ” ಎಂದರು.

PM Modi : ಸುಗುಣೇಂದ್ರ ತೀರ್ಥ ಶ್ರೀಗಳ ಕಾಲಿಗೆ ಬಿದ್ದ ಪ್ರಧಾನಿ ಮೋದಿ ಜನ ಫಿದಾ..! #udupi #bjp

ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ಹೋಗುತ್ತೀರಾ ಎಂದು ಕೇಳಿದಾಗ, “ಅದು ದೆಹಲಿಯಲ್ಲಿರುವ ನಮ್ಮ ಪಾಲಿನ ದೇವಾಲಯ. ದೆಹಲಿ ಕಚೇರಿ ನಮಗೆ ಮಾರ್ಗದರ್ಶನ ನೀಡಲಿದೆ” ಎಂದು ತಿಳಿಸಿದರು.

ನನ್ನ ಸಮುದಾಯ ಕಾಂಗ್ರೆಸ್
ಒಕ್ಕಲಿಗ ಸಮುದಾಯ ನಿಮ್ಮ ಪರವಾಗಿ ನಿಂತಿದೆಯಲ್ಲ ಎಂದು ಕೇಳಿದಾಗ, “ನಾನು ಸಮುದಾಯದ ದೃಷ್ಟಿಕೋನದ ಬಗ್ಗೆ ಚರ್ಚೆ ಮಾಡುವುದಿಲ್ಲ. ಪಕ್ಷ ನನಗೆ ಮುಖ್ಯ. ಕಾಂಗ್ರೆಸ್ ನನ್ನ ಸಮುದಾಯ. ನಾನು ಒಕ್ಕಲಿಗ ಸಮುದಾಯದಿಂದ ಬಂದಿದ್ದು, ಆ ಸಮುದಾಯದ ಜನ ನನ್ನನ್ನು ಪ್ರೀತಿಸಬಹುದು. ನನ್ನ ಬದ್ಧತೆ ಹಿಂದುಳಿದ, ಪರಿಶಿಷ್ಟ, ಅಲ್ಪಸಂಖ್ಯಾತ ಸೇರಿದಂತೆ ಸಮಾಜದ ಎಲ್ಲಾ ಸಮುದಾಯಗಳ ಪರವಾಗಿದೆ. ಒಕ್ಕಲಿಗರೂ ಕೂಡ ಹಿಂದುಳಿದ ವರ್ಗದ ಸಮುದಾಯದವರೇ.

ನಿಮ್ಮ ಮುಂಬೈ ಭೇಟಿಯನ್ನು ಬಿಜೆಪಿ ಬೇರೆ ರೀತಿ ಅರ್ಥೈಸುತ್ತಿದೆಯಲ್ಲ ಎಂದು ಕೇಳಿದಾಗ, “ನಾನು ಬಿಜೆಪಿಯ ಅರ್ಥಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಆತ್ಮೀಯ ಸ್ನೇಹಿತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ವಿಚಾರಿಸಿದೆ. ಒಂದು ಗಂಟೆ ಅಲ್ಲಿದ್ದು, ನಾನು ವಾಪಸ್ಸಾಗಿದ್ದೇನೆ” ಎಂದು ತಿಳಿಸಿದರು.

Tags: cm siddaramaiah dk shivakumarDCM DK ShivakumarDK Shivakumardk shivakumar cm buzzdk shivakumar delhidk shivakumar interviewdk shivakumar latest newsdk shivakumar meetingdk shivakumar newsdk shivakumar next cm karnatakadk shivakumar on rahul gandhidk shivakumar pm modidk shivakumar press updatedk shivakumar speechdk shivakumar today newsdk shivakumar updateskarnataka cm dk shivakumarkarnataka dk shivakumarrahul gandhi dk shivakumarsiddaramaiah vs dk shivakumar
Previous Post

ʼನಂಗೇನು ಆತುರ ಇಲ್ಲʼ: ಸಿಎಂ ಕುರ್ಚಿ ಕಾದಾಟಕ್ಕೆ ಟ್ವಿಸ್ಟ್‌ ಕೊಟ್ಟ ಡಿ.ಕೆ ಶಿವಕುಮಾರ್

Next Post

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ಶುಭಸುದ್ದಿ..!

Related Posts

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್
ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

by ಪ್ರತಿಧ್ವನಿ
December 6, 2025
0

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ...

Read moreDetails
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

December 5, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

December 5, 2025
Next Post
Daily Horoscope: ಇಂದು ಈ ರಾಶಿಯ  ರಾಜಕೀಯ ನಾಯಕರಿಗೆ ಶುಭಸುದ್ದಿ..!

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ಶುಭಸುದ್ದಿ..!

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

by ಪ್ರತಿಧ್ವನಿ
December 6, 2025
Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

by ಪ್ರತಿಧ್ವನಿ
December 5, 2025
Top Story

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

by ಪ್ರತಿಧ್ವನಿ
December 5, 2025
Top Story

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

by ಪ್ರತಿಧ್ವನಿ
December 5, 2025
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ
Top Story

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

by ಪ್ರತಿಧ್ವನಿ
December 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada