ಆಡಳಿತಾರೂಢ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯತೆಯ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ BSP ನಾಯಕಿ ಮಾಯಾವತಿ (Mayawati ), ಬಹುಜನ ಸಮಾಜ ಪಕ್ಷ (BSP ) ಯಾವುದೇ ಪಕ್ಷದ ಬಿ ಟೀಮ್ ಅಲ್ಲ, ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಲಿದ್ದಾರೆ. ಈ ಊಹಾಪೋಹಗಳಿಂದ ನಮ್ಮ ಬೆಂಬಲಿಗರನ್ನು ದಾರಿತಪ್ಪಿಸುವ ಪ್ರಯತ್ನ ಎಂದು ಕಿಡಿಕಾರಿದ್ದಾರೆ.
ಉತ್ತರ ಪ್ರದೇಶ ಚುನಾವಣೆಯಲ್ಲಿ (UP Polls) BSP ಇನ್ನೂ ಪ್ರಸ್ತುತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾಯಾವತಿ ಅವರು, ಸತ್ಯವನ್ನು ಒಪ್ಪಿಕೊಳ್ಳುವ ದೊಡ್ಡತನವನ್ನು ಅಮಿತ್ ಶಾ ತೋರಿದ್ದಾರೆ. ಬಿಎಸ್ಪಿ ಇತರ ಸಮುದಾಯಗಳ ಮತಗಳನ್ನೂ ಪಡೆಯಲಿದೆ ಎಂದು ಹೇಳಿದ್ದಾರೆ.
ಬಿಎಸ್ಪಿ–ಬಿಜೆಪಿ (BSP – BJP) ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತವೆ ಎಂದು ವಿರೋಧ ಪಕ್ಷಗಳು ಈ ಎರಡೂ ಹೇಳಿಕೆಗಳ ನಂತರ ಆರೋಪಿಸಿದ್ದವು. ಸಮಾಜವಾದಿ ಪಕ್ಷವು (Samajawadi Party), ‘ಬಿಎಸ್ಪಿಯು ಬಿಜೆಪಿಯ ಬಿ ಟೀಂ’ ಎಂದು ಆರೋಪಿಸಿತ್ತು. ಈ ಆರೋಪಗಳಿಗೆ ಮಾಯಾವತಿ ಕಾರವಾಗಿ ಪ್ರತಿಕ್ರಿಯೆ ನೀಡಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷವು ಬಿಜೆಪಿಯ ಬಿ ಟೀಂ ಆಗಿದ್ದೇ ನಿಜವಾದರೆ, ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ಜೊತೆ ಸಮಾಜವಾದಿ ಪಕ್ಷವು ಮೈತ್ರಿ ಮಾಡಿಕೊಂಡಿದ್ದು ಏಕೆ’ ಎಂದು ಅವರು ಪ್ರಶ್ನಿಸಿದ್ದಾರೆ.
ಸತ್ಯವೆಂದರೆ ಬಿಎಸ್ಪಿ ರಾಷ್ಟ್ರೀಯ ಮಟ್ಟದ ಪಕ್ಷವೇ ಹೊರತು “ಯಾವುದೇ ಪಕ್ಷದ ಎ ಅಥವಾ ಬಿ ತಂಡ” ಅಲ್ಲ ಎಂದು ಬಿಎಸ್ಪಿ ಮುಖ್ಯಸ್ಥರು ಹೇಳಿದ್ದಾರೆ.

‘ಅತ್ಯಾಚಾರ, ಹಲ್ಲೆಗೆ ಗುರಿಯಾದ ದಲಿತರ ಮನೆಗೆ ಮಾಯಾವತಿ ಭೇಟಿ ನೀಡಿಲ್ಲ ಎಂದು ಈ ಮಾಧ್ಯಮಗಳು ಕೇಳುತ್ತಿವೆ. ಪ್ರಿಯಾಂಕಾ ಗಾಂಧಿಯಂತೆ (Priyanka gandhi ) ಸಂತ್ರಸ್ತರ ಮನೆಗೆ ಹೋಗಿ, ನಾಟಕವಾಡಲು ನಾನು ಯಾವುದೇ ಪಕ್ಷದ ಉಸ್ತುವಾರಿ ಅಥವಾ ಪ್ರಧಾನ ಕಾರ್ಯದರ್ಶಿ ಅಲ್ಲ.
ಕಾಂಗ್ರೆಸ್ನ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಇರುವಂತೆ, ನಾನು ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷೆ. ಸಂತ್ರಸ್ತರ ಮನೆಗೆ ಹೋಗಿ ಭೇಟಿ ನೀಡಲು, ನೆರವು ನೀಡಲು ನಮ್ಮ ಪಕ್ಷದಲ್ಲಿ ಪದಾಧಿಕಾರಿಗಳಿದ್ದಾರೆ. ಅವರು ಆ ಕೆಲಸ ಮಾಡುತ್ತಾರೆ’ ಎಂದು ಅವರು ಮಾಧ್ಯಮಗಳ ವಿರುದ್ಧವೂ ಹರಿಹಾಯ್ದಿದ್ದಾರೆ.
1995, 1997 ಮತ್ತು 2002ರಲ್ಲಿ ಬಿಜೆಪಿ ಬೆಂಬಲದೊಂದಿಗೆ ಮಾಯಾವತಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.