ವೈದ್ಯರ ಮೇಲಿನ ಹಿಂಸಾಚಾರ ತಡೆಗೆ ಬಲವಾದ ಕಾನೂನು ಜಾರಿಗೊಳಿಸಲು ಒತ್ತಾಯಿಸಿ ಅಮಿತ್ ಶಾಗೆ ಪತ್ರ ಬರೆದ ಐಎಂಎ

ವೈದ್ಯಕೀಯ ಕ್ಷೇತ್ರದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವುದು ಭಾರತದಲ್ಲಿ ಸರ್ವೇ ಸಾಮಾನ್ಯವೆಂಬಂತಾಗಿದೆ. ರೋಗಿ ಸಾವನ್ನಪ್ಪಿದರೆ ಆಸ್ಪತ್ರೆಯನ್ನು ಧ್ವಂಸಗೊಳಿಸಿ, ವೈದ್ಯರ ಹಾಗು ಇತರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಾರ್ಹ ಅಪರಾಧವಾದರು, ಈ ಘಟನೆಗಳು ಮರುಕಳಿಸುತ್ತಲೇ ಇವೆ. ಇದಕ್ಕೆ ಶಾಶ್ವತ ಪರಿಹಾರ ನೀಡಲು, ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳ ಮೇಲಿನ ಹಿಂಸಾಚಾರದ ವಿರುದ್ದ ಸಮಗ್ರ, ಪರಿಣಾಮಕಾರಿಯಾದ ಹಾಗೂ ಏಕರೂಪದ ಕಾನೂನು ಜಾರಿಗೊಳಿಸುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಪತ್ರ ಬರೆದಿದೆ. 

ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ರೋಗಿಯೊಬ್ಬರು ಸಾವನ್ನಪ್ಪಿದ್ದರು. ಇದರಿಂದ ಕುಪಿತರಾದ ರೋಗಿಯ ಸಂಬಂಧಿಕರು, ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯ ನಂತರ ಐಎಂಎ ಪತ್ರವನ್ನು ಬರೆದಿದೆ. 

ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳ ವಿರುದ್ದ ನಿರಂತರವಾಗಿ ಹಲ್ಲೆಗಳು ನಡೆಯುತ್ತಲೇ ಇವೆ. ಇವುಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದು ವಯದ್ಯಕೀಯ ಅಭ್ಯಾಸಕ್ಕೆ ತೀವ್ರ ಅಪಾಯವನ್ನು ತಂದೊಡ್ಡುತ್ತಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. 

“ಇಂತಹ ಹಿಂಸಾಚಾರದ ವಿರುದ್ದ ದೇಶದಲ್ಲಿ ಸಮಗ್ರ, ಪರಿಣಾಮಕಾರಿಯಾದ ಹಾಗೂ ಏಕರೂಪದ ಕಾನೂನು ಜಾರಿಗೊಳಿಸಬೇಕು. ವೈದ್ಯರ ಮೇಲಿನ ಹಿಂಸಾಚಾರದ ವಿರುದ್ದ ಬಲವಾದ ಕ್ರಮವನ್ನು ಕೈಗೊಳ್ಳಬೇಕು,” ಎಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ. 

ಕೋವಿಡ್’ನಂತಹ ಸಾಂಕ್ರಾಮಿಕದ ಸಂದರ್ಭದಲ್ಲಿ ದಣಿವರಿಯದೆ ವೈದ್ಯ ಲೋಕ ಕೆಲಸ ಮಾಡುತ್ತಿದೆ. ಸಂಪೂರ್ಣ ವೈದ್ಯಕೀಯ ಕ್ಷೇತ್ರ ನಿಮ್ಮೊಂದಿಗೆ ನಿಂತಿದೆ. ಆದರೆ, ಈಗ ವೈದ್ಯಕೀಯ ಕ್ಷೇತ್ರ ಬೆದರಿಕೆಯನ್ನು ಎದುರಿಸುತ್ತಿದೆ. ಇಂತಹ ಘಟನೆಗಳು ದೇಶದಾದ್ಯಂತ ನಡೆಯುತ್ತಿವೆ, ಎಂದು ಪತ್ರದಲ್ಲಿ ಬರೆಯಲಾಗಿದೆ. 

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...