• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೃತ ಕೋವಿಡ್ ವಾರಿಯರ್ಸ್ ಪರಿಹಾರ ಬಿಡುಗಡೆ: ಸಿಎಂಗೆ ಸಿದ್ದರಾಮಯ್ಯ ಪತ್ರ

Any Mind by Any Mind
May 29, 2021
in ಕರ್ನಾಟಕ
0
ಮೃತ ಕೋವಿಡ್ ವಾರಿಯರ್ಸ್ ಪರಿಹಾರ ಬಿಡುಗಡೆ: ಸಿಎಂಗೆ ಸಿದ್ದರಾಮಯ್ಯ ಪತ್ರ
Share on WhatsAppShare on FacebookShare on Telegram

ಸರ್ಕಾರ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿರುವ ಮತ್ತು ಕರ್ತವ್ಯದ ವೇಳೆ ಮರಣ ಹೊಂದಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಕೂಡಲೇ ಪರಿಹಾರ ವಿತರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಕೊರೊನಾ ವಾರಿಯರ್ಸ್‍ಗೆ ಬಾಕಿ ಉಳಿಸಿಕೊಂಡಿರುವ ವೇತನವನ್ನೂ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ADVERTISEMENT

ಸರ್ಕಾರಕ್ಕೆ ಸಿದ್ದರಾಮಯ್ಯ ಅವರು ಬರೆದಿರುವ ಪತ್ರದ ವಿವರ ಹೀಗಿದೆ, ಕೊರೋನ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆಯನ್ನು ನೀಡಬೇಕಾದುದು ಸರ್ಕಾರದ ಪ್ರಧಾನ ಜವಾಬ್ಧಾರಿ. ಆದರೆ ಸರ್ಕಾರ ಇನ್ನೂ ಸಹ ಹಲವು ಇಲಾಖೆಗಳ ಸಿಬ್ಬಂದಿಗಳನ್ನು ಕೊರೋನ ವಾರಿಯರ್ಸ್ ಎಂದು ಘೋಷಣೆ ಮಾಡಿಲ್ಲ. ಈಗಾಗಲೇ ಕೊರೋನ ವಾರಿಯರ್ಸ್ ಎಂದು ಘೋಷಿಸಿರುವವರಿಗೆ ಕಳೆದ ಎರಡು ಮೂರು ತಿಂಗಳಿಂದ ಸಂಬಳವನ್ನೂ ನೀಡಿಲ್ಲ. ಜೊತೆಗೆ ಜನರ, ರೋಗಿಗಳ ಸಂಪರ್ಕದಲ್ಲಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ, ಸರ್ಕಾರದ ತಳ ಮಟ್ಟದ ಸಿಬ್ಬಂದಿಗಳಿಗೆ ಕೊರೋನಾದಿಂದ ರಕ್ಷಣೆ ಪಡೆಯಲು ನೀಡಬೇಕಾದ ಮಾಸ್ಕು, ಸ್ಯಾನಿಟೈಸರ್, ಕೈಗವಸು ಮುಂತಾದ ಮೂಲಭೂತವಾದ ಸಾಮಗ್ರಿಗಳನ್ನೂ ನೀಡಿಲ್ಲ. ಕೊರೋನ ವಾರಿಯರ್ಸ್ ಎಂದು ಘೋಷಣೆ ಮಾಡಲಾದವರಲ್ಲಿ ಕೆಲವರು ಮರಣ ಹೊಂದಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಲ್ಲಿ ಸುಮಾರು ಜನ ಕೊರೋನಾಕ್ಕೆ ತುತ್ತಾಗಿ ಮರಣ ಹೊಂದಿದ್ದಾರೆ. ಆದರೆ ಅವರಲ್ಲಿ ಪರಿಹಾರ ಸಿಕ್ಕಿರುವುದು ಕೇವಲ ಮೂರು ಜನರ ಕುಟುಂಬಗಳಿಗೆ ಮಾತ್ರ. ಎಲ್ಲ ಇಲಾಖೆಗಳಲ್ಲೂ ಇದೇ ರೀತಿಯ ಪರಿಸ್ಥಿತಿ ಇದೆ ಎಂದು ತಿಳಿಸಿದ್ದಾರೆ.

ಜೀವವನ್ನು ಪಣಕ್ಕೊಡ್ಡಿ ಕೆಲಸ ಮಾಡುತ್ತಿರುವ ಇವರೆಲ್ಲರನ್ನು ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಅತ್ಯಂತ ಅಮಾನವೀಯವಾಗಿದೆ. ದೇಶದ ರಾಜ್ಯಗಳಲ್ಲೆ ಆರ್ಥಿಕ ಸ್ಥಿತಿಯಲ್ಲಿ ಮೊದಲೆರಡು ಸ್ಥಾನಗಳಲ್ಲೇ ಇರುವ ಕರ್ನಾಟಕದಲ್ಲಿ ಕನಿಷ್ಠ ಮಾಸ್ಕು, ಸ್ಯಾನಿಟೈಸರ್ ನೀಡುವಷ್ಟು ಹೃದಯವಂತಿಕೆ, ಕರ್ತವ್ಯ ಪ್ರಜ್ಞೆ, ಉದಾರತೆಗಳನ್ನು ಆಡಳಿತ ನಡೆಸುವ ಸರ್ಕಾರ ಕಳೆದುಕೊಂಡಿರುವುದು ಅತ್ಯಂತ ಬೇಜವಾಬ್ಧಾರಿಯುತವಾದ ಹಾಗೂ ಅವಮಾನಕರವಾದ ಸಂಗತಿ. ಆದ್ದರಿಂದ ಕೂಡಲೇ ಅವರ ಬೇಡಿಕೆಗಳನ್ನು ಪರಿಗಣಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತೇನೆ. ಜನರ ಜೊತೆ ನೇರ ಸಂಪರ್ಕದಲ್ಲಿದ್ದುಕೊಂಡು ಕೆಲಸ ಮಾಡುವ ಪಶು ವೈದ್ಯರು ಸೇರಿದಂತೆ ಇತರೆ ಎಲ್ಲರನ್ನು ಕೊರೋನ ವಾರಿಯರ್ಸ್ ಎಂದು ಅಧಿಸೂಚನೆ ಹೊರಡಿಸಿ ಅಗತ್ಯ ಕ್ರಮ ವಹಿಸಬೇಕು.ಅಂಗನವಾಡಿ, ಆಶಾ ಕಾರ್ಯಕರ್ತೆಯರು ನೇರವಾಗಿ ರೋಗಿಗಳ ನೇರ ಸಂಪರ್ಕದಲ್ಲಿರುತ್ತಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಸರ್, ಕೈಗವಸು, ಅಗತ್ಯ ಔಷಧಗಳು ಮುಂತಾದವುಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ನೀಡುವುದು ಎಂದು ಆಗ್ರಹಿಸಿದ್ದಾರೆ.

ಕೊರೋನ ವಾರಿಯರ್ಸ್ ಎಂದು ಘೋಷಣೆ ಮಾಡಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹಲವರು ಮರಣ ಹೊಂದಿದ್ದಾರೆ. ಅವರಲ್ಲಿ ಬಹುತೇಕರ ಕುಟುಂಬಗಳಿಗೆ ಇನ್ನೂ ಪರಿಹಾರ ನೀಡಿಲ್ಲ. ಅವರೆಲ್ಲರಿಗೆ ಕೂಡಲೇ ಪರಿಹಾರ ನೀಡಬೇಕು.ಈ ಎಲ್ಲ ಸಿಬ್ಬಂದಿಗಳಿಗೆ ಮಾರ್ಚ್ ತಿಂಗಳಿಂದ ಸಂಬಳವನ್ನೇ ನೀಡಿಲ್ಲ. ತಾಂತ್ರಿಕ ಕಾರಣಗಳನ್ನು ನೀಡಿ ಕೊರೋನ ಕಾಲದಲ್ಲೂ ಸಂಬಳ ನೀಡದಿರುವುದು ಅತ್ಯಂತ ಅಮಾನವೀಯ. ಕೂಡಲೇ ಈ ಎಲ್ಲರಿಗೆ ಸಂಬಳ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಪಲ್ಸ್ ಆಕ್ಸಿಮೀಟರ್‍ನಂಥ ಅತ್ಯಂತ ಅಗತ್ಯ ಸಾಮಗ್ರಿಗಳನ್ನು ಒಂದು ಪಂಚಾಯ್ತಿ/ ಒಬ್ಬರು ಆಶಾ ಕಾರ್ಯಕರ್ತೆಗೆ ಕೇವಲ ಒಂದೊಂದನ್ನು ಮಾತ್ರ ನೀಡಲಾಗಿದೆ. ಹೀಗೆ ಮಾಡುವುದರಿಂದಲೂ ಸೋಂಕು ಹಬ್ಬಲು ಕಾರಣವಾಗಬಹುದು. ಆದ್ದರಿಂದ ಇಂಥ ಸಾಮಾನ್ಯ ಸಂಗತಿಗಳನ್ನು ವೈಜ್ಞಾನಿಕವಾಗಿ ಅಂದಾಜು ಮಾಡಿ ಸಾಮಗ್ರಿಗಳನ್ನು ಕೋವಿಡ್ ವಾರಿಯರ್ಸ್‍ಗಳಿಗೆ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಇವರೆಲ್ಲರಿಗೆ ಸೂಕ್ತವಾದ, ಗೌರವಯುತವಾದ ಸಂಬಳ, ಗೌರವಧನ, ಸಂಭಾವನೆಯನ್ನು ಹೆಚ್ಚಿಸಬೇಕು. ಕೊರೋನಾದಂಥ ಮಾರಣಾಂತಿಕವಾದ ಸೋಂಕನ್ನು ನಿಭಾಯಿಸುವಲ್ಲಿ ಮಾನವ ಸಂಪನ್ಮೂಲದ ಪಾತ್ರ ಬಹಳ ದೊಡ್ಡದು. ಅವರುಗಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಬೇಕಾದುದು ಸರ್ಕಾರದ ಜವಾಬ್ಧಾರಿ ಎಂದು ಭಾವಿಸಿ ಕೂಡಲೇ ಈಡೇರಿಸಬೇಕೆಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರಿಗೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Previous Post

ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು – ಕಾಂಗ್ರೆಸ್ ಲೇವಡಿ

Next Post

ತನ್ನ ಔಷಧಿಗಳನ್ನು ವಿತರಿಸಲು RSS ಸಂಘಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವ ಆಯುಷ್‌ ಸಚಿವಾಲಯ!

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ತನ್ನ ಔಷಧಿಗಳನ್ನು ವಿತರಿಸಲು RSS ಸಂಘಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವ ಆಯುಷ್‌ ಸಚಿವಾಲಯ!

ತನ್ನ ಔಷಧಿಗಳನ್ನು ವಿತರಿಸಲು RSS ಸಂಘಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವ ಆಯುಷ್‌ ಸಚಿವಾಲಯ!

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!