ಬೆಂಗಳೂರು: ಒಂದೆಡೆ ಸಿಎಂ ಸಿದ್ಧರಾಮಯ್ಯ( CM Siddaramaiah)ವಿರುದ್ಧದ ಮುಡಾ ಹಗರಣದ ವಿವಾದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿಗೆ ಒತ್ತಾಯ ಹೆಚ್ಚಾಗಿದೆ.ಈ ಹೊತ್ತಿನಲ್ಲಿ ಸಿಎಂ ಸಿದ್ಧರಾಮಯ್ಯ ಸಂಸದರು, ಶಾಸಕರ ಸಭೆಯನ್ನು ನಡೆಸಿದ್ದು ನೋಡಿದ್ರೆ ಕರ್ನಾಟಕದಲ್ಲಿ ಜಾತಿಗಣತಿ (Caste Census)ವರದಿ ಜಾರಿ ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಂಸದರು, ಶಾಸಕರನ್ನು ಒಳಗೊಂಡ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ ಶಾಸಕರು, ಸಂಸದರು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಜಾತಿಗಣತಿ ವರದಿ ಜಾರಿ ವಿಚಾರವಾಗಿ ಸಂಸದರು, ಶಾಸಕರ ಜೊತೆಗೆ ಸಭೆ ನಡೆಸಿದ್ದೇನೆ. ಜಾತಿಗಣತಿ ವರದಿ ಜಾರಿ ಮಡಾುವಂತೆ ಮನವಿ ಪತ್ರ ನೀಡಿದ್ದಾರೆ ಎಂದರು.
ದೇಶದಲ್ಲೇ ಮೊದಲ ಬಾರಿಗೆ ಜಾತಿ ಗಣತಿ ನಡೆಸಲಾಗಿದೆ. 2014ರಲ್ಲಿ ಕಾಂತರಾಜು ನೇತೃತ್ವದಲ್ಲಿ ಜಾತಿಗಣತಿ ನಡೆಸಲಾಗಿದೆ. ಆದರೇ ಜಾತಿಗಣತಿ ವರದಿಯನ್ನು ನಾನೇ ಇನ್ನೂ ನೋಡಿಲ್ಲ ಎಂಬುದಾಗಿ ತಿಳಿಸಿದರು.