Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Implementation of our guarantee scheme | ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಪ್ರತಿಧ್ವನಿ

ಪ್ರತಿಧ್ವನಿ

May 20, 2023
Share on FacebookShare on Twitter

ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ. ಇದರ ಜತೆಗೆ ನಾವು ನೀಡಿರುವ ಇತರೆ ಭರವಸೆಗಳನ್ನು ಜಾರಿ ಮಾಡುತ್ತೇವೆ. ಕಳೆದ ಬಾರಿಯ ಸರ್ಕಾರ ಇದ್ದಾಗಲೂ ನಾವು ಹೇಳಿದ್ದನ್ನು ಮಾಡಿ ತೋರಿಸಿದ್ದೇವೆ. ನಾವು ಬಿಜೆಪಿಯವರ ರೀತಿ ಹೇಳುವುದೊಂದು ಮಾಡುವುದು ಮತ್ತೊಂದು ರೀತಿ ಆಡಳಿತ ಮಾಡುವುದಿಲ್ಲ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

ಪ್ರಧಾನಿ ಮೋದಿ ಅವರು ಈಗ ಮತ್ತೊಂದು ಆದೇಶ ಹೊರಡಿಸಿದ್ದಾರೆ. ಅವರು ಜಪಾನ್ ಗೆ ತೆರಳಿದಾಗಲೆಲ್ಲಾ ನೋಟು ರದ್ದು ತೀರ್ಮಾನ ಪ್ರಕಟಿಸುತ್ತಾರೆ. ಕಳೆದ ಬಾರಿ ಜಪಾನ್ ಗೆ ತೆರಳಿದಾಗ ಒಂದು ಸಾವಿರ ರೂ. ಮುಖಬೆಲೆ ನೋಟು ರದ್ದು ಮಾಡಿದ್ದರು. ಈ ಬಾರಿ 2 ಸಾವಿರ ಮುಖಬೆಲೆಯ ನೋಟು ರದ್ದು ಮಾಡಿದ್ದಾರೆ. ಇದರರ್ಥ ಇದರಿಂದ ದೇಶಕ್ಕೆ ಲಾಭವೋ, ನಷ್ಟವೋ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದಿಲ್ಲ. ಮೋದಿ ಅವರ ಈ ಕೆಲಸ ದೇಶದ ಜನರಿಗೆ ತೊಂದರೆ ಆಗುತ್ತಿದೆ. ನಮ್ಮ ಸರ್ಕಾರ ರಾಜ್ಯದಲ್ಲಿ ದ್ವೇಷವನ್ನು ಕಿತ್ತೊಗೆದು, ಪ್ರೀತಿ, ಸೌಹಾರ್ದತೆ, ಸಾಮರಸ್ಯದ ಸರ್ಕಾರವಾಗಿದೆ. ನಾವು ನುಡಿದಂತೆ ನಡೆಯುತ್ತೇವೆ. ನಮ್ಮ ಭರವಸೆ ಈಡೇರಿಸುತ್ತೇವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ ರಾಜ್ಯದ ಜನರಿಗೆ ಸಿಕ್ಕಿರುವ ಗೆಲುವು. ಜನರ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಪ್ರಚಾರ ಆರಂಭವಾಗಿದ್ದು, ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಮೂಲಕ. ಇದರ ಜತೆಗೆ ರಾಹುಲ್ ಗಾಂಧಿ, ಖರ್ಗೆ, ಪ್ರಿಯಾಂಕಾ ಗಾಂಧಿ ಹಾಗೂ ಅನೇಕ ನಾಯಕರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದು ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಇದರ ಜತೆಗೆ ಸಾಹಿತಿಗಳು, ಚಿಂತಕರು, ಸಂಘಟನೆ ನಾಯಕರುಗಳು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದು, ಧನ್ಯವಾದ ಅರ್ಪಿಸುತ್ತೇನೆ. ರಾಜ್ಯದ ಯುವಕರು, ರೈತರು, ಕಾರ್ಮಿಕರು, ಮಹಿಳೆಯರಿಗೂ ಧನ್ಯವಾದ ತಿಳಿಸುತ್ತೇನೆ.

ಈ ಕಾರ್ಯಕ್ರಮಕ್ಕೆ ಬಂದು ನಮಗೆ ಶುಭ ಕೋರಿ ಆಶೀರ್ವಾದ ಮಾಡಲು ಬಂದಿರುವ ಎಲ್ಲಾ ಪ್ರಮುಖ ನಾಯಕರು ಹಾಗೂ ಗಣ್ಯರಿಗೆ ಧನ್ಯವಾದ ತಿಳಿಸುತ್ತೇನೆ. ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ. ಜನ ಬದಲಾವಣೆ ಬಯಸಿದ್ದು, ನಾವು ಜನರಿಗೆ ಕೊಟ್ಟಿರುವ ಭರವಸೆ, ಗ್ಯಾರಂಟಿ ಯೋಜನೆಗಳನ್ನು ಇವತ್ತೇ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ ಆದೇಶ ಹೊರಡಿಸಿ ಜಾರಿಗೆ ತರುತ್ತೇವೆ. ಇದು ಕನ್ನಡನಾಡಿನ ಜನತೆಗೆ ನೂತನ ಸರ್ಕಾರದ ಕೊಡುಗೆಯಾಗಿದೆ. ನಮ್ಮ ಪ್ರಮಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ ಎಂದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

School Text Book Row ; ಮತ್ತೆ ಪರಿಷ್ಕರಣೆ ಆಗುತ್ತಾ ಶಾಲಾ ಪಠ್ಯ ಪುಸ್ತಕ : ಸಿಎಂ ಸಿದ್ದು ಏನಂದ್ರು ಗೊತ್ತಾ?
Top Story

School Text Book Row ; ಮತ್ತೆ ಪರಿಷ್ಕರಣೆ ಆಗುತ್ತಾ ಶಾಲಾ ಪಠ್ಯ ಪುಸ್ತಕ : ಸಿಎಂ ಸಿದ್ದು ಏನಂದ್ರು ಗೊತ್ತಾ?

by ಪ್ರತಿಧ್ವನಿ
May 24, 2023
Actress Urfi Javed : ಕುಸ್ತಿಪಟುಗಳ ತಿರುಚಿದ ಫೋಟೋ ವೈರಲ್ ; ಕುಸ್ತಿಪಟುಗಳ ಪರ ಧ್ವನಿ ಎತ್ತಿದ ‌ ನಟಿ ಉರ್ಫಿ ಜಾವೆದ್
ಅಂಕಣ

Actress Urfi Javed : ಕುಸ್ತಿಪಟುಗಳ ತಿರುಚಿದ ಫೋಟೋ ವೈರಲ್ ; ಕುಸ್ತಿಪಟುಗಳ ಪರ ಧ್ವನಿ ಎತ್ತಿದ ‌ ನಟಿ ಉರ್ಫಿ ಜಾವೆದ್

by ಪ್ರತಿಧ್ವನಿ
May 29, 2023
ಖಾದರ್​ ಮುಂದಾಳತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ : ಸಿಎಂ ಸಿದ್ದರಾಮಯ್ಯ
ರಾಜಕೀಯ

ಖಾದರ್​ ಮುಂದಾಳತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ : ಸಿಎಂ ಸಿದ್ದರಾಮಯ್ಯ

by Prathidhvani
May 24, 2023
Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ  ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ
Top Story

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

by ಪ್ರತಿಧ್ವನಿ
May 30, 2023
ನೂತನ ಸಂಸತ್ ಭವನ ಉದ್ಘಾಟನೆ ; ಫೋಟೋ ಝಲಕ್..!
Top Story

ನೂತನ ಸಂಸತ್ ಭವನ ಉದ್ಘಾಟನೆ ; ಫೋಟೋ ಝಲಕ್..!

by ಪ್ರತಿಧ್ವನಿ
May 28, 2023
Next Post

CM Siddaramaiah Name Board | ಸಿಎಂ ಕಚೇರಿಗೆ ಹೊಸ ನಾಮಫಲಕ ಅಳವಡಿಸಿದ ಸಿಬ್ಬಂದಿ #CMSiddaramaiah #Congress

Brij Bhushan Singh : ನಾಲಿಗೆ ಹರಿಬಿಟ್ಟ ಬ್ರಿಜ್ ಭೂಷಣ್ ಸಿಂಗ್, ಮಹಿಳಾ ಕುಸ್ತಿಪಟುಗಳಿಂದ ಆಕ್ರೋಶ..!

Brij Bhushan Singh : ನಾಲಿಗೆ ಹರಿಬಿಟ್ಟ ಬ್ರಿಜ್ ಭೂಷಣ್ ಸಿಂಗ್, ಮಹಿಳಾ ಕುಸ್ತಿಪಟುಗಳಿಂದ ಆಕ್ರೋಶ..!

Rahul Gandhi | ದ್ವೇಷ ಅಳಿದಿದೆ ಪ್ರೀತಿ ಈಗ ಗೆದ್ದಿದೆ ; ರಾಹುಲ್ ಗಾಂಧಿ

Rahul Gandhi | ದ್ವೇಷ ಅಳಿದಿದೆ ಪ್ರೀತಿ ಈಗ ಗೆದ್ದಿದೆ ; ರಾಹುಲ್ ಗಾಂಧಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist