• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ: ಸಿಎಂ ಬೊಮ್ಮಾಯಿ

Any Mind by Any Mind
December 16, 2022
in Top Story, ಕರ್ನಾಟಕ, ರಾಜಕೀಯ
0
ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ರಾಜ್ಯದ ನೇಕಾರರ ಕುಟುಂಬದ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಜಾರಿಗೊಳಿಸಿರುವ ‘ವಿದ್ಯಾನಿಧಿ’ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳನ್ನು ಗುರುತಿಸಲಾಗಿದ್ದು, ಶೀಘ್ರವೇ ವಿದ್ಯಾನಿಧಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, 46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು 15 ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ, ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾನಿಧಿ ಬಿಡುಗಡೆ ಮಾಡಲಾಗುವುದು. ಇದಕ್ಕಾಗಿ ಮಕ್ಕಳಿಂದ ಯಾವುದೇ ಅರ್ಜಿಯನ್ನು ಪಡೆಯುವುದಲ್ಲ. ವಿದ್ಯಾನಿಧಿ ಮಕ್ಕಳ ಹಕ್ಕು ಎಂದು ತಿಳಿಸಿದರು.

ನೇಕಾರರ ಕಸುಬನ್ನು ಉನ್ನತೀಕರಿಸಿ ಉಳಿಸುವುದು ಬಹಳ ಮುಖ್ಯ. ಬಹಳ ಗಂಟೆಗಳ ಕಾಲ ಹತ್ತಿಯ ಮಧ್ಯೆಯೆ ಕೆಲಸ ಮಾಡಬೇಕಾಗುವುದರಿಂದ ನೇಕಾರರಿಗೆ ಅಸ್ತಮಾ, ಟಿಬಿಯಂತಹ ಸಮಸ್ಯೆಗಳು ಕಾಡುತ್ತವೆ. ಆದ್ದರಿಂದ ಕೈಮಗ್ಗ ನೇಕಾರರ ಕಾಳಜಿ ವಹಿಸಲು ನೇಕಾರ ಸಮ್ಮಾನ್ ಯೋಜನೆ ಯಡಿ 2000 ರೂ.ಗಳ ಆರ್ಥಿಕ ನೆರವನ್ನು 5000 ರೂ.ಗಳಿಗೆ ಹೆಚ್ಚಿಸಲಾಗಿದೆ. ಅವರ ಹತ್ತು ಹಲವಾರು ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ನಾಳೆ ವಿದ್ಯುತ್ಛಕ್ತಿ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಲಾಗುತ್ತಿದೆ. ಕೈಮಗ್ಗ ನೇಕಾರರಿಗೆ ಸಾಲ ಹಾಗೂ ಬಡ್ಡಿಮನ್ನಾ ಯೋಜನೆಗಳನ್ನು ಜಾರಿಯಲ್ಲಿವೆ. ನೇಕಾರರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಕಾಯಕ ಯೋಜನೆಯಡಿ ಪ್ರತಿ ಕುಶಲಕರ್ಮಿಗೆ 50 ಸಾವಿರ ವರೆಗೆ ಧನಸಹಾಯ ನೀಡಲಾಗುತ್ತಿದೆ ಎಂದರು.

ನೇಕಾರ ಸಮ್ಮಾನ್ ಯೋಜನೆಯಡಿ 46,864 ಫಲಾನುಭವಿಗಳಿಗೆ 5000 ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಒಟ್ಟು 23.43 ಕೋಟಿ ರೂ.ಗಳು ನೇರವಾಗಿ ನೇಕಾರರ ಬ್ಯಾಂಕ್ ಖಾತೆಗೆ ವರ್ಗಾವಣೆಗೆ ಚಾಲನೆ ನೀಡಲಾಗಿದೆ ಎಂದ ಸಿಎಂ,
ಅತಿ ಹೆಚ್ಚು ಉದ್ಯೋಗವನ್ನು ಸೃಷ್ಟಿ ಮಾಡಿದ್ದು ನೇಕಾರ ವೃತ್ತಿ. ಸ್ವಾತಂತ್ರ್ಯ ಹೋರಾಟವನ್ನು ಗಟ್ಟಿಗೊಳಿಸಿದ್ದು ನೇಕಾರರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸ್ವದೇಶಿ ಉಡುಪುಗಳನ್ನೇ ಧರಿಸಬೇಕೆಂಬ ಗುರಿ ಸಾಧಿಸಲು ನೇಕಾರರು ಮಹತ್ವದ ಪಾತ್ರ ವಹಿಸಿದ್ದರು. ಸ್ವಾತಂತ್ರ್ಯ ದೊರೆತ ನಂತರ ಜವಳಿ ಉದ್ಯಮ ಬೆಳೆದಿರದಿದ್ದ ಸಂದರ್ಭದಲ್ಲಿ ದೇಶದಲ್ಲಿ ನೇಕಾರರ ಕೊಡುಗೆ ಮಹತ್ತರವಾದ ಸ್ಥಾನಮಾನವಿದೆ. ನೇಕಾರಿಕೆ ಎಂಬುದು ಕಲಾಕೌಶಲ್ಯವನ್ನೊಳಗೊಂಡ ವೃತ್ತಿ. ವಂಶಪಾರಂಪರ್ಯವಾಗಿ ಬಂದ ಕರಕುಶಲ ಕಲೆಯನ್ನು ಇಂದಿಗೂ ಪೋಷಿಸಿಕೊಂಡು ಬಂದಿದ್ದಾರೆ. ಈಗ ತಂತ್ರಜ್ಞಾನವನ್ನು ಬಳಸಿಕೊಂಡು ಅದ್ಭುತವಾದ ಕೌಶಲ್ಯವನ್ನು ತಮ್ಮ ವೃತ್ತಿಯಲ್ಲಿ ಪ್ರದರ್ಶಿಸುತ್ತಾರೆ. ತಂತ್ರಜ್ಞಾನ ಬದಲಾವಣೆಯಿಂದ ಜವಳಿ ಉದ್ಯಮೂ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ ಎಂದರು.

ಈ ಸಂದರ್ಭದಲ್ಲಿ ಸಕ್ಕರೆ ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕಿ ಪೂರ್ಣಿಮಾ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: ನೇಕಾರರಬೆಂಗಳೂರುವಿದ್ಯಾನಿಧಿ ಯೋಜನೆಸಿಎಂ ಬೊಮ್ಮಾಯಿ
Previous Post

ವಿಜಯೇಂದ್ರ ಸ್ಪರ್ಧೆ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು: ಬಿಎಸ್ವೈ

Next Post

ಮುರುಘಾ ಶ್ರೀ ಪ್ರಕರಣ; ಸೌಭಾಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

June 7, 2026
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

June 5, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
Next Post
ಮುರುಘಾ ಶ್ರೀ ಪ್ರಕರಣ; ಸೌಭಾಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾ ಶ್ರೀ ಪ್ರಕರಣ; ಸೌಭಾಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada