ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ, ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ರ ಆಪ್ತ ಸಹಾಯಕ ಶಾ ಮೆಹಮೂದ್ ಖುರೇಷಿ ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಪಾಕಿಸ್ತಾನದಲ್ಲಿನರಾಜಕೀಯ ಪ್ರಕ್ಷುಬ್ಧತೆಯ ನಡುವೆ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ರಾಜಧಾನಿ ಮತ್ತು ಮೂರು ಪ್ರಾಂತ್ಯಗಳಲ್ಲಿ ಸೇನೆ ನಿಯೋಜಿಸಲಾಗಿದೆ. ಖುರೇಷಿಯವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷವು ಟ್ವಿಟರ್ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಸಾದಾ ಬಟ್ಟೆ ಧರಿಸಿದ ವ್ಯಕ್ತಿಗಳು ಅವರನ್ನು ಕರೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ. ಅವರು ಬಂಧಿಸಲ್ಪಟ್ಟ ಸ್ಥಳದಿಂದ ಹೊರಡುವ ಮೊದಲು ಪಕ್ಷದ ಕಾರ್ಯಕರ್ತರತ್ತ ಕೈ ಬೀಸಿದರು. 66 ವರ್ಷದ ಶಾ ಮೆಹಮೂದ್ ಖುರೇಷಿ ಅವರನ್ನು ಗುರುವಾರ ಮುಂಜಾನೆ ಇಸ್ಲಾಮಾಬಾದ್ ಪೊಲೀಸರು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಅಂತ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(PTI) ಪಕ್ಷವು ಟ್ವೀಟ್ ಮಾಡಿ ತಿಳಿಸಿದೆ.