ಸೂಫಿಸಂತ, ಪದ್ಮಶ್ರೀ ಪುರಸ್ಕತ ಇಬ್ರಾಹಿಂ ಸುತಾರ್ ಅಂತ್ಯಕ್ರಿಯೆ ಇಂದು ಸಂಜೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.
ಮಹಾಲಿಂಗಪೂರ ಹೊರವಲಯದ ಸುತಾರ್ ಅವರಿಗೆ ಸೇರಿದ ಹೊಲದಲ್ಲಿ ಅವರ ಇಚ್ಚೆಯಂತೆ ಅಂತ್ಯಕ್ರಿಯೆ ನಡೆದಿದ್ದು, ಮುಸ್ಲಿಂ ಸಮುದಾಯದ ಧಾರ್ಮಿಕ ವಿಧಿವಿಧಾನದಂತೆ ಅಂತ್ಯಕ್ರಿಯೆ ಮಾಡಲಾಯಿತು.
ಅಂತ್ಯಕ್ರಿಯೆಯಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಸೇರಿದಂತೆ ಅಪಾರ ಸಂಖ್ಯೆಯ ಜನರು ಭಾಗಿಯಾಗಿದ್ದರು.