
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಗೆದ್ದು ಬೀಗಿದರೂ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಕಗ್ಗಂಟಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಬಾರಿ ಸಿಎಂ ಆಗಲಿ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದರೆ ಕೆಲವು ಡಿಕೆ ಶಿವಕುಮಾರ್ ಪರ ನಿಂತಿದ್ದಾರೆ. ಇದೀಗ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಳಿಕ ಮುಖ್ಯಮಂತ್ರಿ ಯಾರೆಂದು ಘೋಷಣೆ ಮಾಡುವ ಸಾಧ್ಯತೆಯಿದೆ.
ಈಶ್ವರ್ ಖಂಡ್ರೆ ಮತ್ತು ಇತರ ಶಾಸಕರ ಆಗಮನ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತು ಇತರ ಶಾಸಕರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸುತ್ತಿದ್ದಾರೆ.
ಕೆಸಿ ವೇಣುಗೋಪಾಲ್ ಆಗಮನ
ದೆಹಲಿಯಲ್ಲಿರುವ ಯುಪಿಎ ಅಧ್ಯಕ್ಷೆ ಮತ್ತು ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಅವರ 10 ಜನಪಥ್ ನಿವಾಸಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಆಗಮಿಸಿದರು.
ಸೋನಿಯಾ ಗಾಂಧಿ ನಿವಾಸಕ್ಕೆ ಕಾಂಗ್ರೆಸ್ ನಾಯಕರ ದೌಡು


ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕರು ದೆಹಲಿಯ ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸುತ್ತಿದ್ದಾರೆ.
ಅಧಿಕಾರ ಹಂಚಿಕೆಯ ಸೂತ್ರ
ಕಾಂಗ್ರೆಸ್ ಹೈಕಮಾಂಡ್ನ 50-50 ಅಧಿಕಾರ ಹಂಚಿಕೆಯ ಸೂತ್ರವನ್ನು ಮುಂದಿಟ್ಟಿದ್ದು, ಡಿಕೆಶಿ ಮತ್ತು ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ ಎಂದು ಹೇಳಲಾಗಿದೆ.