ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ಇದೇ ಮೊದಲ ಬಾರಿ ಮೂರು ದೇಶಗಳ ಆತಿಥ್ಯದಲ್ಲಿ ನಡೆಯಲಿದೆ.
ಫಿಫಾ ಅಧ್ಯಕ್ಷ ಗಿಲಾನಿ ಇನ್ ಫ್ಯಾಂಟಿನೊ 2026ರ ವಿಶ್ವಕಪ್ ಟೂರ್ನಿಗೆ ಸಿದ್ಧತೆಗಳನ್ನು ಆರಂಭಿಸುವಂತೆ ಅಮೆರಿಕ, ಕೆನಡಾ ಮತ್ತು ಮೆಕ್ಸಿಕೊಗೆ ಸೂಚಿಸಿದೆ.
ಇದೇ ಮೊದಲ ಬಾರಿ ವಿಶ್ವಕಪ್ ಟೂರ್ನಿಯ ತಂಡಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಈ ಬಾರಿ 48 ತಂಡಗಳು ಪಾಲ್ಗೊಳ್ಳಲಿದ್ದು, 1994ರ ಫೈನಲಿಸ್ಟ್ ಉತ್ತರ ಅಮೆರಿಕ ತಂಡ ಇದೇ ಮೊದಲ ಬಾರಿ ವಿಶ್ವಕಪ್ ಅಖಾಡಕ್ಕೆ ಇಳಿಯಲಿದೆ.

ಅಮೆರಿಕದ 11, ಮೆಕ್ಸಿಕೊದ 3, ಕೆನಡಾದ 2 ಮೈದಾನಗಳಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಒಟ್ಟಾರೆ 80 ಪಂದ್ಯಗಳ ಪೈಕಿ 60 ಪಂದ್ಯಗಳು ಅಮೆರಿಕದಲ್ಲಿ ನಡೆಯಲಿದ್ದು, ಇದರಲ್ಲಿ ಫೈನಲ್, ಸೆಮಿಫೈನಲ್ ಮತ್ತು ಕ್ವಾರ್ಟರ್ ಫೈನಲ್ ಪಂದ್ಯಗಳು ಸೇರಿವೆ.