
27 ವರ್ಷದ ಯುವಕ ಹಾಗೂ 80 ವರ್ಷದ ವೃದ್ಧೆ ಸೇರಿ ಒಟ್ಟು ಇಬ್ಬರು ಮೃತ.
ಈ ಎರಡೂ ಪ್ರಕರಣಗಳು ಬಿಬಿಎಂಪಿಯ ಪೂರ್ವ ವಲಯದಲ್ಲಿ ದಾಖಲು, ಜ್ವರದಿಂದ ಬಳಲುತ್ತಿದ್ದ ಸಿ.ವಿ.ರಾಮನ್ ನಗರದ ನಿವಾಸಿ ಅಭಿಲಾಷ್ 27, ಜೂ.25 ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಡೆಂಘೀ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜೂ.27 ರಂದು ಮೃತಪಟ್ಟಿದ್ದಾರೆ.
ಮತ್ತೊಂದು ಡೆಂಘೀ ಪ್ರಕರಣದಲ್ಲಿ ಮೃತಪಟ್ಟ ವೃದ್ಧೆ 80 ವರ್ಷದ ನೀರಜಾದೇವಿ, ತಮಿಳುನಾಡಿನ ಮೂಲದವರಾಗಿದ್ದು, ಸ್ತನ ಕ್ಯಾನ್ಸರ್ ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಜೂ.20 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೃದ್ಧೆಗೆ ಡೆಂಘೀ ಇರುವುದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗದೇ ಜೂ.23ರಂದು ಮೃತಪಟ್ಟಿದ್ದಾರೆ, ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳಿಂದ ಮಾಹಿತಿ
