ಚಿಕ್ಕಮಗಳೂರು : ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆಜೆಜಾರ್ಜ್ ಚಿಕ್ಕಮಗಳೂರಿನ ಡಿಸಿ ಕಚೇರಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನಾ ಸಭೆಯನ್ನು ನಡೆಸಿದರು. ಜಿಲ್ಲೆಯ ಇತರೆ ಜನಪ್ರತಿನಿಧಿಗಳ ಜೊತೆಯಲ್ಲಿ ಜಿಲ್ಲೆಯಲ್ಲಿ ಸದ್ಯ ಕಾಮಗಾರಿ ಹಂತದಲ್ಲಿರುವ ವಿವಿಧ ಯೋಜನೆಗಳ ಸ್ಥಿತಿಗತಿ ಹಾಗೂ ವಿವಿಧ ಇಲಾಖೆಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಮುಂಬರುವ ಮುಂಗಾರು ಹಂಗಾಮಿಗೆ ಜಿಲ್ಲಾಡಳಿತದಿಂದ ಯಾವೆಲ್ಲ ರೀತಿಯಲ್ಲಿ ಸಿದ್ಧತೆ ನಡೆದಿದೆ ಎಂಬುದರ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ್ರು. ಇದಾದ ಬಳಿಕ ಸಾರ್ವಜನಿಕ ಸಂವಾದ ನಡೆಸಿ ಅವರ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿದರು.
ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಸನ್ಮಾನ್ಯ ಸಚಿವರು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡಿ, ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರುಗಳೊಂದಿಗೆ ಸಂವಾದ ನಡೆಸಿ, ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪ್ರೇರೇಪಿಸಿದರು.