• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತಮಿಳುನಾಡಿನಲ್ಲಿ ಹಿಂದಿ ನಡೆಯದು ಎಂದು ಕೇಂದ್ರಕ್ಕೆ ತಿವಿದ ಮದ್ರಾಸ್ ಹೈಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
August 20, 2021
in ದೇಶ
0
ತಮಿಳುನಾಡಿನಲ್ಲಿ ಹಿಂದಿ ನಡೆಯದು ಎಂದು ಕೇಂದ್ರಕ್ಕೆ ತಿವಿದ ಮದ್ರಾಸ್ ಹೈಕೋರ್ಟ್
Share on WhatsAppShare on FacebookShare on Telegram

ತಮಿಳುನಾಡು ಸರ್ಕಾರದೊಂದಿಗಿನ ಎಲ್ಲಾ ಸಂವಹನಗಳು “ಇಂಗ್ಲಿಷ್‌ನಲ್ಲಿ ಮಾತ್ರ” ಇರುವಂತೆ ನೋಡಿಕೊಳ್ಳಬೇಕೆಂದು ಮದ್ರಾಸ್ ಹೈಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.  ಇದೇ ವೇಳೆ ಅಧಿಕೃತ ಭಾಷಾ ಕಾಯ್ದೆಯ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ADVERTISEMENT

ನ್ಯಾಯಮೂರ್ತಿಗಳಾದ ಎನ್. ಕಿರುಬಾಕರನ್ ಮತ್ತು ಎಂ.ದುರೈಸ್ವಾಮಿ ಅವರ ವಿಭಾಗೀಯ ಪೀಠವು, ನಿಯಮಗಳ ಅಡಿಯಲ್ಲಿ ಆಂಗ್ಲ ಭಾಷೆಯಲ್ಲಿ ಮನವಿ ನೀಡಿದರೆ, ಕಡ್ಡಾಯವಾಗಿ ಅದೇ ಭಾಷೆಯಲ್ಲಿ ಉತ್ತರವನ್ನು ಕಳುಹಿಸುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.

ರಾಜ್ಯ ಮತ್ತು ಅದರ ಸಂಸದರು ಹಾಗೂ ಸಾರ್ವಜನಿಕರೊಂದಿಗೆ ಕೇಂದ್ರ ಸರ್ಕಾರ ಮಾಡುವ ಎಲ್ಲಾ ಸಂವಹನಗಳಲ್ಲಿ  ಇಂಗ್ಲಿಷ್ ಅನ್ನು ಮಾತ್ರ ಬಳಸುವಂತೆ ಆದೇಶವನ್ನು ಕೋರಿ ಮಧುರೈ ಲೋಕಸಭಾ ಸಂಸದ ಸು ವೆಂಕಟೇಶನ್ ಅವರು ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಈ ಆದೇಶವನ್ನು ನೀಡಿದೆ.

ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಅವರು ವೆಂಕಟೇಶ ಅವರಿಗೆ ಹಿಂದಿಯಲ್ಲಿ ಉತ್ತರಿಸಿದ ಬಳಿಕ ವೆಂಕಟೇಶ್‌ ಅವರು ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು.

ಪಾಂಡಿಚೇರಿಯಲ್ಲಿ ಗ್ರೂಪ್‌ ಬಿ ಮತ್ತು ಸಿ ಹುದ್ದೆಗಳಿಗೆ ನಡೆಸುವ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸುವಂತೆ ಗೃಹ ವ್ಯವಹಾರಗಳ ರಾಜ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದೆ, ಅಲ್ಲಿಂದ ಹಿಂದಿಯಲ್ಲಿ ಉತ್ತರ ಬಂದಿತ್ತು ಎಂದು ಸಂಸದ ವೆಂಕಟೇಶ್‌ ಹೇಳಿರುವುದಾಗಿ ವರದಿಯಾಗಿದೆ.

ಸಂಸದ ಸು ವೆಂಕಟೇಶನ್

ಇದು ಮಾಹಿತಿ ಮತ್ತು ಸಂವಹನದ ಯುಗವಾಗಿದೆ, ಆದ್ದರಿಂದ ಎಲ್ಲಾ ಭಾಷೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸಂವಿಧಾನದ ಆರ್ಟಿಕಲ್ 350 (ಕುಂದುಕೊರತೆಗಳ ನಿವಾರಣೆಗೆ ಬಳಸಬೇಕಾದ ಭಾಷೆ) ಅನ್ನು ಉಲ್ಲೇಖಿಸಿದ ನ್ಯಾಯಾಲಯವು, ಒಬ್ಬ ವ್ಯಕ್ತಿಯು ಭಾರತದಲ್ಲಿ ಬಳಕೆಯಲ್ಲಿರುವ ಯಾವುದೇ ಭಾಷೆಗಳಲ್ಲಿ ಕೇಂದ್ರಕ್ಕೆ ಪತ್ರ ಬರೆಯಲು ಅರ್ಹ ಎಂದು ಹೇಳಿದೆ.  

ಇದೇ ವೇಳೆ, “ಮಾತೃಭಾಷೆಗೆ ಪ್ರಾಮುಖ್ಯತೆ ನೀಡಬೇಕು” ಎಂದು ಕೋರ್ಟ್ ಹೇಳಿರುವುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

Tags: BJPhindi imposition tamiltamilಬಿಜೆಪಿಮದ್ರಾಸ್ ಹೈಕೋರ್ಟ್ಹಿಂದಿ
Previous Post

ತಾಲಿಬಾನ್‌ ವಿರುದ್ಧ ಅಫ್ಘನ್‌ ನಾಗರಿಕರ ಪ್ರತಿಭಟನೆ

Next Post

‘ನಿನಗೆ ಪ್ರವೇಶವಿಲ್ಲ, ಮನೆಗೆ ಹೋಗುʼ ‌ಎಂದು ಸುದ್ದಿ ನಿರೂಪಕಿಗೆ ತಡೆಯೊಡ್ಡಿದ ತಾಲಿಬಾನ್!

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
‘ನಿನಗೆ ಪ್ರವೇಶವಿಲ್ಲ, ಮನೆಗೆ ಹೋಗುʼ ‌ಎಂದು ಸುದ್ದಿ ನಿರೂಪಕಿಗೆ ತಡೆಯೊಡ್ಡಿದ ತಾಲಿಬಾನ್!

'ನಿನಗೆ ಪ್ರವೇಶವಿಲ್ಲ, ಮನೆಗೆ ಹೋಗುʼ ‌ಎಂದು ಸುದ್ದಿ ನಿರೂಪಕಿಗೆ ತಡೆಯೊಡ್ಡಿದ ತಾಲಿಬಾನ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada