ಕರ್ನಾಟಕದಲ್ಲೂ 100 ರೂ ತಲುಪಿದ ಪೆಟ್ರೋಲ್‌ ದರ

ದೇಶಾದ್ಯಂತ ದಿನೇ-ದಿನೇ ಪೆಟ್ರೋಲ್‌, ಡೀಸೆಲ್ ದರ ಏರಿಕೆಯಾಗುತ್ತಿದ್ದು, ಕೆಲವು ದಿನಗಳ ಹಿಂದೆ ಹಲವು ರಾಜ್ಯಗಳಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 100 ರೂ ದಾಟಿತ್ತು. ಇದೀಗ ಕರ್ನಾಟಕದ ಉತ್ತರ ಕನ್ನಡ, ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಇತರೆಡೆ  ಪೆಟ್ರೋಲ್ ದರ ಶತಕ ಬಾರಿಸಿದ್ದು, ವಾಹನ ಸವಾರರಿಗೆ ಟೆಂಕ್ಷನ್‌ ಶುರುವಾಗಿದೆ.

ಬೆಂಗಳೂರು ನಗರದಲ್ಲಿ ಪೆಟ್ರೋಲ್ ದರ 97 ರೂಪಾಯಿ 92 ಪೈಸೆಯಾಗಿದ್ದರೆ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಸೇರಿದಂತೆ ಇತರೆಡೆ  ಪ್ರತಿ ಲೀಟರ್‌ ಪೆಟ್ರೋಲ್ ದರ 100 ರೂ ತಲುಪಿದೆ. ಜೊತೆಗೆ   ಡೀಸೆಲ್ ಬೆಲೆ ಕೂಡ ಏರಿಕೆಯಾಗಿದ್ದು, 90 ರೂ ದಾಟಿದೆ.

ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 95 ರೂಪಾಯಿ 31 ಪೈಸೆಗೆ ತಲುಪಿದ್ದು, ಮುಂಬೈನಲ್ಲಿ 101.03 ರೂ, ಜೈಪುರದಲ್ಲಿ 101.59 ರೂ, ಮಧ್ಯಪ್ರದೇಶದ ಭೂಪಾಲ್​ನಲ್ಲಿ 1 ಲೀಟರ್ ಪೆಟ್ರೋಲ್​ಗೆ 103.17 ರೂ. ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಪೆಟ್ರೋಲ್ ಬೆಲೆ 105.33 ರೂ. ಆಗಿದೆ. ಹೈದರಾಬಾದ್​ನಲ್ಲಿ 98.48 ರೂ, ತಿರುವನಂತಪುರದಲ್ಲಿ 96.47 ರೂ, ಚೆನ್ನೈನಲ್ಲಿ 96.23 ರೂ, ಕೊಲ್ಕತ್ತಾದಲ್ಲಿ 94.76 ರೂ. ತಲುಪಿದೆ.

ಡೀಸೆಲ್‌ ಬೆಲೆ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ಗೆ  90.81 ರೂ, ನವದೆಹಲಿಯಲ್ಲಿ  ಡೀಸೆಲ್​ಗೆ 86.01 ರೂ.  ಚೆನ್ನೈನಲ್ಲಿ 90.38 ರೂ, ಮುಂಬೈನಲ್ಲಿ 93.35 ರೂ, ಹೈದರಾಬಾದ್​ನಲ್ಲಿ 93.38 ರೂ ಗೆ ತಲುಪಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ ಸೇರಿಸಿದ ನಂತರ ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಇದರ ಆಧಾರದ ಮೇಲೆ ಪ್ರತಿದಿನ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ದೇಶದಲ್ಲಿ ಕರೋನಾ ಲಾಕ್‌ಡೌನಿಂದಾಗಿ ಸಮಸ್ಯೆಗೆ ಸಿಲುಕಿದ ಜನಕ್ಕೆ ಬೆಲೆ ಏರಿಕೆಯ ಬಿಸಿ ಮುಟ್ಟಿದೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...