• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಡಗಿನಲ್ಲಿ ಬಿರುಸುಗೊಂಡ ಮಳೆ ; ನಾಳೆಯೂ ರಜೆ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
July 15, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಕೊಡಗಿನಲ್ಲಿ ಬಿರುಸುಗೊಂಡ ಮಳೆ ; ನಾಳೆಯೂ ರಜೆ ಘೋಷಣೆ
Share on WhatsAppShare on FacebookShare on Telegram

ಮಡಿಕೇರಿ -ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದೆ.
ಜಿಲ್ಲೆಯಲ್ಲಿನ ನದಿ, ತೊರೆ, ಹಳ್ಳಕೊಳ್ಳ, ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದೆ. ಜಿಲ್ಲೆಯ ಶಾಂತಳ್ಳಿ, ಭಾಗಮಂಡಲ, ಸೋಮವಾರಪೇಟೆ, ಮಡಿಕೇರಿ, ಸುಂಟಿಕೊಪ್ಪ, ನಾಪೋಕ್ಲು, ಶನಿವಾರಸಂತೆ, ಶ್ರೀಮಂಗಲ, ಸಂಪಾಜೆ, ಹೀಗೆ ವಿವಿಧ ಕಡೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಮಡಿಕೇರಿ ನಗರದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಬಿರುಸು ಪಡಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಮಳೆಯ ಕಾರಣ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿವೆ. ತಲಕಾವೇರಿ ಬಳಿ ಬೃಹತ್ ಗಾತ್ರ ಮರವೊಂದು ನೆಲಕ್ಕುರುಳಿರುವದರಿಂದ ಭಾಗಮಂಡಲಕ್ಕೆ ತೆರಳುವ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳದಲ್ಲಿರುವ ವಿದ್ಯುತ್ ಕಂಬಗಳು ಸಹ ಉರುಳಿ ಬಿದ್ದಿವೆ. ನಮ್ಮ ಮಡಿಕೇರಿ ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಅರಣ್ಯ ಇಲಾಖೆಯ ಸಿಬ್ಬಂದಿ ಮರ ತೆರವು ಮಾಡಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಿದ್ದಾರೆ. ಮಳೆ ನಿಲ್ಲದ ಸೂಚನೆಯಿರದ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾಗಮಂಡಲ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದೆ .
ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ 10 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದರಿಂದ ರಾತ್ರಿ 12 ಗಂಟೆ ಸುಮಾರಿಗೆ ಜಲಾಶಯದಿಂದ ಸುಮಾರು 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದ ಕಾವೇರಿ ಮತ್ತು ಹಾರಂಗಿ ನದಿ ದಂಡೆಯಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದೆ.

ADVERTISEMENT


ಸೋಮವಾರಪೇಟೆ ತಾಲ್ಲೂಕಿನಲ್ಲಿ ಜಡಿಮಳೆಯ ನಡುವೆಯೂ ನಾಲ್ವರು ಲೈನ್‌ ಮ್ಯಾನ್‌ಗಳು ವಿದ್ಯುತ್‌ ಲೈನ್‌ ರಿಪೇರಿಯಲ್ಲಿ ತೊಡಗಿರುವ ವೀಡಿಯೋ ಭಾರೀ ವೈರಲ್‌ ಆಗಿತ್ತು. ಇದಕ್ಕೆ ಸಹಸ್ರಾರು ಮೆಚ್ಚುಗೆ ವ್ಯಕ್ತವಾಗಿದ್ದು ವೀಕ್ಷಕರು ಭೇಷ್‌ ಎಂದಿದ್ದಾರೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಭಾಗಮಂಡಲ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಕೃಷಿ ಚಟುವಟಿಕೆ ಸಹ ಬಿರುಸಿನಿಂದ ನಡೆದಿದೆ. ಮಡಿಕೇರಿ ತಹಶೀಲ್ದಾರರಾದ ಕಿರಣ್ ಗೌರಯ್ಯ, ಪ್ರವೀಣ್ ಕುಮಾರ್, ರಾಮಚಂದ್ರ, ಪೌರಾಯುಕ್ತರಾದ ವಿಜಯ್, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎ .ಯತ್ನಟ್ಟಿ ಇತರರು ತಮ್ಮ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಮಳೆಗಾಲದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಕಾರ್ಮಿಕರಿಗೆ ತಾಲ್ಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ ಅವರು ಸಲಹೆ ಮಾಡಿದ್ದಾರೆ.
ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ.

Tags: CoorgKodagurainfall
Previous Post

ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗು ಉಪ ಲೋಕಾಯುಕ್ತರಾದ ಶ್ರೀ ಬಿ. ವೀರಪ್ಪ ರವರನ್ನು ಬೇಟಿ ಮಾಡಿದ ಎ.ಎಸ್ ಪೊನ್ನಣ್ಣ..

Next Post

ಕನ್ನಡ ಸ್ಟಾರ್ ನಟರ ಮೇಲೆ ಹಂಸಲೇಖ ಕಿಡಿ ಇಂದ್ರಜಿತ್ ಮುಂದೆ ಹಂಸಲೇಖ ರೊಚ್ಚಿಗೆದ್ರು

Related Posts

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Top Story

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 25, 2026
0

ಬೆಂಗಳೂರು : ಪೆಟ್ರೋಲ್ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ದರ...

Read moreDetails
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
Next Post

ಕನ್ನಡ ಸ್ಟಾರ್ ನಟರ ಮೇಲೆ ಹಂಸಲೇಖ ಕಿಡಿ ಇಂದ್ರಜಿತ್ ಮುಂದೆ ಹಂಸಲೇಖ ರೊಚ್ಚಿಗೆದ್ರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada